ಬೆಂಗಳೂರು ಟೆಸ್ಟ್: ಭಾರತದ ನೆಲದಲ್ಲಿ ಮೊದಲ ಐದು ವಿಕೆಟ್ ಗೊಂಚಲು ಪಡೆದ ಬೂಮ್ರಾ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಭಾರತ ಸಂಪೂರ್ಣ ಮೇಲುಗೈ ಸಾಧಿಸಿದ್ದು ಶ್ರೀಲಂಕಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗಿದೆ. ಶ್ರೀಲಂಕಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 109 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಭಾರತೀಯ ತಂಡದ ವೇಗಿ ಜಸ್ಪ್ರೀತ್ ಬೂಮ್ರಾ ಐದು ವಿಕೆಟ್‌ಗಳ ಗೊಂಚಲು ಪಡೆಯಲು ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತದ ನೆಲದಲ್ಲಿ ಬೂಮ್ರಾ ಮೊದಲ ಐದು ವಿಕೆಟ್‌ಗಳ ಗೊಂಚಲು ಸಂಪಾದಿಸಿದ್ದಾರೆ. 25 ರನ್‌ಗಳನ್ನು ನೀಡಿ ಬೂಮ್ರಾ ಐದು ವಿಕೆಟ್ ಕಬಳಿಸಿದ್ದಾರೆ. ಭಾರತದ ಪರವಾಗಿ ವೇಗಿಗಳಾದ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿ ಲಂಕಾ ತಂಡವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬಂಗಳೂರು ಪಿಚ್‌ನಲ್ಲಿ ಮೊದಲಿಗೆ ಭಾರತ ತಮಡ ಬ್ಯಾಟಿಂಗ್ ಮಾಡುವ ವೇಳೆ ಶ್ರೀಲಂಕಾ ಸ್ಪಿನ್ನರ್‌ಗಳು ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದರು. ಆದರೆ ಭಾರತದ ಪರವಾಹಿ ವೇಗಿಗಳಿಂದ ಅತ್ಯುತ್ತಮ ಪ್ರದರ್ಶನ ವ್ಯಕ್ತವಾಗಿದೆ.
ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ತಮ್ಮ 29ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು ಪಂದ್ಯದ ಮೊದಲ ದಿನದಾಟದಲ್ಲಿ ಮೂರು ವಿಕೆಟ್‌ಗಳನ್ನು ಸಂಪಾದಿಸಿದ್ದರು. ಎರಡನೇ ದಿನದಾಟದಲ್ಲಿ ಲಸಿತ್ ಎಂಬುಲ್ದೇಬಿಯಾ ಅವರನ್ನು ಶಾರ್ಟ್ ಬಾಲ್ ಎಸೆತದಲ್ಲಿ ಔಟ್ ಮಾಡಿದರೆ ನಂತರ ನಿರೋಶನ್ ಡಿಕ್ವೆಲ್ಲಾ ಅವರನ್ನು ಕೂಡ ಫೆವಿಲಿಯನ್‌ಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದರು. ಈ ಮೂಲಕ ಜಸ್ಪ್ರೀತ್ ಬೂಮ್ರಾ ತಮ್ಮ ಐದು ವಿಕೆಟ್‌ಗಳ ಗೊಂಚಲನ್ನು ಪೂರ್ಣಗೊಳಿಸಿದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಜಸ್ಪ್ರೀತ್ ಬೂಮ್ರಾ ಅವರ 300ನೇ ವಿಕೆಟ್ ಇದು.
2018ರ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಮೂಮ್ರಾ ಪಡೆದಿರುವ 8ನೇ ಐದು ವಿಕೆಟ್‌ಗಳ ಗೊಂಚಲು ಕೂಡ ಇದಾಗಿದ್ದು ಈ ಅವಧಿಯಲ್ಲಿ ಅತೀ ಹೆಚ್ಚು ಐದು ವಿಕೆಟ್‌ಗಳ ಗೊಂಚಲು ಪಡೆದ ಆಟಗಾರರ ಪಟ್ಟಿಯಲ್ಲಿ ನ್ಯೂಜಿಲೆಂಡ್ ವೇಗಿ ಟಿಮ್ ಸೌಥೀ ಅವರೊಂದಿಗೆ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಜಸ್ಪ್ರಿತ್ ಬೂಮ್ರಾ ಪಡೆದಿರುವ ಐದು ವಿಕೆಟ್‌ಗಳ ಗೊಂಚಲು ಭಾರತದ ನೆಲದಲ್ಲಿ ಪಡೆದ ಮೊದಲ ಐದು ವಿಕೆಟ್‌ಗಳ ಗೊಂಚಲು ಎನಿಸಿದೆ.
ಟೀಮ್ ಇಂಡಿಯಾ ಆಡುವ ಬಳಗ: ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ (ನಾಯಕ), ಹನುಮ ವಿಹಾರಿ, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ
ಬೆಂಚ್: ಮೊಹಮ್ಮದ್ ಸಿರಾಜ್, ಶುಭಮನ್ ಗಿಲ್, ಉಮೇಶ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೀಕರ್ ಭರತ್, ಸೌರಭ್ ಕುಮಾರ್, ಜಯಂತ್ ಯಾದವ್
ಶ್ರೀಲಂಕಾ ಆಡುವ ಬಳಗ: ದಿಮುತ್ ಕರುಣಾರತ್ನೆ (ಸಿ), ಲಹಿರು ತಿರಿಮನ್ನೆ, ಕುಸಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ (ವಿಕೆ), ಸುರಂಗ ಲಕ್ಮಲ್, ಲಸಿತ್ ಎಂಬುಲ್ದೇನಿಯ, ವಿಶ್ವ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ
ಬೆಂಚ್: ದಿನೇಶ್ ಚಾಂಡಿಮಲ್, ಚಮಿಕಾ ಕರುಣರತ್ನೆ, ಜೆಫ್ರಿ ವಾಂಡರ್ಸೆ, ಲಹಿರು ಕುಮಾರ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications