ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್‌ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ಆಯ್ಕೆ ಮಾಡಿದ ವಾಸಿಮ್ ಜಾಫರ್

ಭಾರತ ಹಾಗೂ ಶ್ರೀಲಂಕಾ ತಂಡಗಳು ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಲು ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾಗಲಿರುವ ಪಂದ್ಯ ಅಹರ್ನಿಶಿಯಾಗಿ ಸಾಗಲಿದೆ. ಈಗಾಗಲೇ ಮೊದಲ ಪಂದ್ಯವನ್ನು ಗೆದ್ದುಕೊಂಡಿರುವ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಎರಡನೇ ಪಂದ್ಯವನ್ನು ಗೆದ್ದು ಮತ್ತೊಂದು ಕ್ಲೀನ್ ಸ್ವೀಪ್ ವಿಜಯದತ್ತ ಚಿತ್ತ ನೆಟ್ಟಿದೆ.
ಭಾರತ ಹಾಗೂ ಶ್ರೀಲಂಕಾ ತಂಡಗಳು ಎರಡನೇ ಪಂದ್ಯವನ್ನು ಆಡುವ ಸಲುವಾಗಿ ಈಗಾಗಲೇ ಬೆಂಗಳೂರುನ್ನು ತಲುಪಿದ್ದು ಪಂದ್ಯಕ್ಕಾಗಿ ಭರ್ಜರಿ ಸಿದ್ಧತೆಯಲ್ಲಿ ತೊಡಗಿದೆ. ಈ ಸಂದರ್ಭದಲಲ್ಇ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ವಾಸಿಮ್ ಜಾಫರ್ ಟೀಮ್ ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಭಾರತದ ಸಂಭಾವ್ಯ ತಂಡವನ್ನು ಹೆಸರಿಸಿದ್ದಾರೆ. ವಾಸಿಮ್ ಜಾಫರ್ ಪ್ರಕಾರ ರೋಹಿತ್ ಶರ್ಮಾ ಪಡೆ ಈ ಪಂದ್ಯಕ್ಕಾಗಿ ಒಂದು ಬದಲಾವಣೆಯನ್ನು ಮಾಡಿಕೊಳ್ಳುವ ಸಾಧ್ಯತೆಯಿದೆ.
ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಒಮದ್ಯಕ್ಕೂ ಮುನ್ನ ಯುವ ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡು ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಅಕ್ಷರ್ ಪಟೇಲ್‌ಗಾಗಿ ಕುಲ್‌ದೀಪ್ ಯಾದವ್ ಸ್ಥಾನ ಬಿಟ್ಟುಕೊಟ್ಟಿದ್ದು ತಂಡದಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಅಕ್ಷರ್ ಪಟೇಲ್ ಆಡುವ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂಬುದುವಾಸಿಮ್ ಜಾಫರ್ ನಿರೀಕ್ಷೆ. ಅಕ್ಷರ್ ಪಟೇಲ್ ಈವರೆಗೆ ಐದು ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು 36 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಐದು ಬಾರಿ ಐದು ವಿಕೆಟ್‌ಗಳ ಗೊಂಚಲು ಪಡೆದಿದ್ದಾರೆ.
ಇನ್ನು ಈ ಸಂದರ್ಭದಲ್ಲಿವಾಸಿಮ್ ಜಾಫರ್ ಡೇ-ನೈಟ್ ಟೆಸ್ಟ್ ಪಂದ್ಯವಾಗಿರುವ ಕಾರಣ ವೇಗಿ ಮೊಹಮಮ್ಮದ್ ಸಿರಾಜ್ ಅವರನ್ನು ಕೂಡ ಆಡಿಸಿದರೆ ಉತ್ತಮ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜಯಂತ್ ಯಾದವ್ ವಾಸಿಮ್ ಜಾಫರ್ ಅವರ ಪ್ಲೇಯಿಂಗ್ XI ನಿಂದ ಹೊರಗುಳಿದಿದ್ದಾರೆ.
ಇನ್ನು ವಾಸಿಂ ಜಾಫರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರಿಲಂಕಾ ಮಾಡಿದ ಒಂದು ತಪ್ಪನ್ನು ಹೇಳಿದ್ದಾರೆ. ಎರಡನೇ ಸ್ಪಿನ್ನರ್‌ನ ಸೇವೆಯಿಂದ ಪಡೆಯಲು ಸಾಧ್ಯವಾಗದಿರುವುದು ಶ್ರೀಲಂಕಾ ತಂಡಕ್ಕೆ ಹಿನ್ನಡೆಯಾಯಿಯತು ಎಂದಿದ್ದಾರೆ. ಆದರೆ ಎರಡನೇ ಪಂದ್ಯದಲ್ಲಿ ಈ ತಪ್ಪನ್ನು ತಿದ್ದಿಕೊಲ್ಳುವ ಸಾಧ್ಯತೆಯಿದೆ ಎಂದಿದ್ದಾರೆ ವಾಸಿಂ ಜಾಫರ್. ಇನ್ನು ಭಾರತದ ವಿರುದ್ಧ ಶ್ರೀಲಂಕಾ ಉತ್ತಮ ಪ್ರದರ್ಶನ ನೀಡಬೇಕಾದರೆ ಉತ್ತಮ ಬ್ಯಾಟಿಂಗ್ ನಡೆಸಬೇಕಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ ಸಾಧ್ಯವಾದಷ್ಟು ಹೆಚ್ಚಿನ ರನ್ ಗಳಿಸಲು ಸಾಧ್ಯವಾದರೆ ಮಾತ್ರವೇ ಭಾರತದ ವಿರುದ್ಧ ನಿಯಂತ್ರಣ ಸಾಧಿಸಬಹುದು ಎಂದಿದ್ದಾರೆ ವಾಸಿಂ ಜಾಫರ್.
ವಾಸೀಂ ಜಾಫರ್ ಹೆಸರಿಸಿದ ಭಾರತದ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ರವಿ ಅಶ್ವಿನ್, ಅಕ್ಷರ್ ಪಟೇಲ್/ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಶಮಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications