ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind Vs SL 3rd ODI: ಶುಭ್‌ಮನ್ ಗಿಲ್ ಭರ್ಜರಿ ಶತಕ, ತಂಡದಲ್ಲಿ ಸ್ಥಾನ ಖಚಿತಪಡಿಸಿಕೊಂಡ ಆರಂಭಿಕ ಆಟಗಾರ

IND vs SL 3rd ODI: Shubman Gill Sealed His Place As Opener in India ODI Team

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಭರ್ಜರಿ ಶತಕ ಬಾರಿಸುವ ಮೂಲಕ ಮಿಂಚಿದ್ದಾರೆ. ಈ ಮೂಲಕ ಅವರು ಭಾರತ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ.

ಶುಭಮನ್ ಗಿಲ್ ಏಕದಿನ ಮಾದರಿಯಲ್ಲಿ ಸಾಕಷ್ಟು ನಿಶ್ಚಿತ ಪ್ರದರ್ಶನ ನೀಡುತ್ತಿರುವ ಆಟಗಾರ. ಅವರ ಆಟದ ಶೈಲಿ, ಕೌಶಲ್ಯ ಏಕದಿನ ಮಾದರಿಗೆ ಹೇಳಿ ಮಾಡಿಸಿದಂತಿದೆ. ಅದನ್ನು ಅವರು ತಮ್ಮ ಮೊದಲನೇ ಪಂದ್ಯದಿಂದಲೂ ಸಾಬೀತುಪಡಿಸುತ್ತಲೇ ಬಂದಿದ್ದಾರೆ.

IND vs SL: 3ನೇ ಏಕದಿನ ಪಂದ್ಯಕ್ಕೂ ಮುನ್ನ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾIND vs SL: 3ನೇ ಏಕದಿನ ಪಂದ್ಯಕ್ಕೂ ಮುನ್ನ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ

ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಶುಭಮನ್ ಗಿಲ್, ಭಾರತ ಏಕದಿನ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. ಗಿಲ್ ಉತ್ತಮ ಪ್ರದರ್ಶನ ನೀಡುವ ಮೂಲಕ ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆಯಲು ಸಾಕಷ್ಟು ಕಷ್ಟವಾಗುತ್ತದೆ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 3 ಪಂದ್ಯಗಳಿಂದ ಅವರು 69 ರನ್‌ಗಳ ಸರಾಸರಿಯಲ್ಲಿ 122.49 ಸ್ಟ್ರೈಕ್‌ರೇಟ್‌ನಲ್ಲಿ 207 ರನ್ ಗಳಿಸಿ ಮಿಂಚಿದ್ದಾರೆ. ಇದುವರೆಗೂ 18 ಏಕದಿನ ಪಂದ್ಯಗಳನ್ನಾಡಿರುವ ಅವರು, 59.60 ಸರಾಸರಿಯಲ್ಲಿ, 103.7 ಸ್ಟ್ರೈಕ್‌ರೇಟ್‌ನಲ್ಲಿ 894 ರನ್ ಗಳಿಸಿದ್ದಾರೆ.

IND vs SL 3rd ODI: Shubman Gill Sealed His Place As Opener in India ODI Team

2ನೇ ಶತಕ ಬಾರಿಸಿದ ಗಿಲ್

ಶುಭಮನ್ ಗಿಲ್ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ 70 ರನ್ ಗಳಿಸುವ ಮೂಲಕ ಉತ್ತಮ ಆರಂಭ ಪಡೆದುಕೊಂಡರು. ಎರಡನೇ ಪಂದ್ಯದಲ್ಲಿ 21 ರನ್ ಗಳಿಸಿದ ಗಿಲ್, ಮೂರನೇ ಪಂದ್ಯದಲ್ಲಿ ಶತಕ ದಾಖಲಿಸಿ ಮಿಂಚಿದ್ದಾರೆ.

97 ಎಸೆತಗಳನ್ನು ಎದುರಿಸಿದ ಶುಭಮನ್ ಗಿಲ್, 14 ಬೌಂಡರಿ 2 ಭರ್ಜರಿ ಸಿಕ್ಸರ್ ನೆರವಿನಿಂದ 116 ರನ್ ಗಳಿಸಿದರು. ಕೆಎಲ್ ರಾಹುಲ್‌ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಆರಂಭಿಸಿದ ನಂತರ, ರೋಹಿತ್ ಶರ್ಮಾ ಜೊತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲು ಇಶಾನ್ ಕಿಶನ್, ಶುಭಮನ್ ಗಿಲ್ ನಡುವೆ ಪೈಪೋಟಿ ಇತ್ತು.

ಇಶಾನ್ ಕಿಶನ್ ಬಾಂಗ್ಲಾದೇಶದ ವಿರುದ್ಧ ದ್ವಿಶತಕ ಗಳಿಸಿದ ಹೊರತಾಗಿಯೂ ನಾಯಕ ರೋಹಿತ್ ಶರ್ಮಾ ಶುಭಮನ್‌ ಗಿಲ್‌ರನ್ನು ಪರಿಗಣಿಸಿದ್ದರು. ನಾಯಕನ ನಂಬಿಕೆಯನ್ನು ಉಳಿಸಿಕೊಂಡಿರುವ ಗಿಲ್, ಆರಂಭಿಕ ಆಟಗಾರನಾಗಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ.

2023ರ ಏಕದಿನ ವಿಶ್ವಕಪ್‌ನಲ್ಲಿ ಶುಭಮನ್ ಗಿಲ್ ತಮ್ಮ ಸ್ಥಾನವನ್ನು ಖಚಿಪಡಿಸಿಕೊಂಡಿದ್ದಾರೆ. ಕ್ಲಾಸ್ ಬ್ಯಾಟರ್ ಆಗಿರುವ ಶುಭಮನ್ ಗಿಲ್, ದಿನೇ ದಿನೇ ತಮ್ಮ ಬ್ಯಾಟಿಂಗ್‌ನಿಂದ ಆಯ್ಕೆದಾರರನ್ನು, ಕೋಚ್, ಟೀಂ ಇಂಡಿಯಾ ನಾಯಕನನ್ನು ಮೆಚ್ಚಿಸುತ್ತಿದ್ದಾರೆ. ಹಲವು ಕ್ರಿಕೆಟ್ ಪರಿಣಿತರು, ಈತ ಭವಿಷ್ಯದಲ್ಲಿ ಭಾರತ ತಂಡದ ಪ್ರಮುಖ ಆಟಗಾರನಾಗಲಿದ್ದಾರೆ ಎಂದು ಕೂಡ ಭವಿಷ್ಯ ನುಡಿದಿದ್ದಾರೆ.

Story first published: Sunday, January 15, 2023, 16:46 [IST]
Other articles published on Jan 15, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X