Ind vs SL 3rd T20: ಒಂದೇ ಓವರ್ನಲ್ಲಿ 7 ಸಿಕ್ಸರ್ ಸಿಡಿಸಿದ್ದ ಈತನಿಗೆ ತಂಡದಲ್ಲಿ ಸ್ಥಾನ ನೀಡಿ ಎಂದ ವಾಸಿಂ ಜಾಫರ್

ಇಂದು (ಜನವರಿ 7) ರಾಜ್‌ಕೋಟ್‌ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಋತುರಾಕ್ ಗಾಯಕ್ವಾಡ್‌ಗೆ ಭಾರತ ತಂಡದ ಆಡುವ ಬಳಗದಲ್ಲಿ ಅವಕಾಶ ನೀಡಬೇಕು ಎಂದು ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.
ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಸಮಬಲಗೊಳಿಸಿದ್ದು, ಸರಣಿಯ ನಿರ್ಣಾಯಕ ಪಂದ್ಯ ರಾಜ್‌ಕೋಟ್‌ನಲ್ಲಿ ನಡೆಯಲಿದೆ.
ಶುಭಮನ್ ಗಿಲ್ ಮುಂಬೈನಲ್ಲಿ ನಡೆದ ಸರಣಿಯ ಮೊದಲನೇ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಮೊದಲ ಎರಡು ಪಂದ್ಯಗಳಲ್ಲಿ ಇಶಾನ್ ಕಿಶನ್ ಜೊತೆ ಇನ್ನಿಂಗ್ಸ್ ಆರಂಭಿಸಿದರು ಕೂಡ ರನ್ ಗಳಿಸುವಲ್ಲಿ ವಿಫಲರಾಗಿದ್ದಾರೆ.
ಸರಣಿಯ ಕೊನೆಯ ಪಂದ್ಯದಲ್ಲಿ ಶುಭಮನ್ ಗಿಲ್ ಬದಲಿಗೆ ಮತ್ತೋರ್ವ ಯುವ ಆಟಗಾರ ಋತುರಾಜ್ ಗಾಯಕ್ವಾಡ್‌ಗೆ ಅವಕಾಶ ನೀಡಬೇಕು ಎಂದು ವಾಸಿಂ ಜಾಫರ್ ಹೇಳಿದ್ದಾರೆ. ಗಾಯಕ್ವಾಡ್ ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ, ಅವರು ಅವಕಾಶ ಪಡೆಯಲು ಅರ್ಹರಾಗಿದ್ದಾರೆ ಎಂದು ಜಾಫರ್ ಅಭಿಪ್ರಾಯಪಟ್ಟಿದ್ದಾರೆ.

ಆರಂಭಿಕರು ರನ್ ಗಳಿಸಬೇಕು
ದೊಡ್ಡ ಸ್ಕೋರ್ ಅನ್ನು ಚೇಸ್ ಮಾಡುವಾಗ ತಂಡವೊಂದು ಆರಂಭದಲ್ಲೇ 4 ರಿಂದ 5 ವಿಕೆಟ್ ಕಳೆದುಕೊಂಡರೆ, ಕೆಳ ಕ್ರಮಾಂಕದ ಆಟಗಾರರ ಮೇಲೆ ಸಾಕಷ್ಟಯ ಒತ್ತಡ ಬೀಳುತ್ತದೆ. ಶ್ರೀಲಂಕಾ ಬೌಲಿಂಗ್ ಪರಿಣಾಮಕಾರಿಯಾಗಿದೆ. ಆರಂಭಿಕರು ಉತ್ತಮ ರನ್ ಗಳಿಸಿದರೆ, ಮಧ್ಯಮ ಕ್ರಮಾಂಕದ ಆಟಗಾರರ ಮೇಲೆ ಒತ್ತಡ ಕಡಿಮೆಯಾಗುತ್ತದೆ ಎಂದು ಜಾಫರ್ ಹೇಳಿದರು.
ಎರಡನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಆರಂಭದಲ್ಲಿ ನಿಧಾನಗತಿಯಲ್ಲಿ ರನ್ ಗಳಿಸಿದರು ಕೂಡ ನಂತರ ಬೌಂಡರಿಗಳನ್ನು ಬಾರಿಸಿದರು. ಎಲ್ಲಾ ಬ್ಯಾಟರ್ ಕೂಡ ಅದನ್ನು ಮಾಡಬಹುದು, ಆರಂಭದಲ್ಲಿ ಎಚ್ಚರಿಕೆಯಿಂದ ಆಡಬೇಕು ಎಂದು ಸಲಹೆ ನೀಡಿದರು.
ಐಪಿಎಲ್‌ನಲ್ಲಿ ಹರಾಜಾಗದ ಈತ ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್‌ಗಳಲ್ಲಿ ಒಬ್ಬರು ಎಂದ ಇಂಗ್ಲೆಂಡ್ ಕ್ರಿಕೆಟಿಗ

ಒಂದೇ ಓವರ್ ನಲ್ಲಿ 7 ಸಿಕ್ಸ್ ಸಿಡಿಸಿದ್ದ ಋತುರಾಜ್
ದೇಶೀಯ ಕ್ರಿಕೆಟ್‌ನಲ್ಲಿ ಋತುರಾಜ್ ಗಾಯಕ್ವಾಡ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಅವರ ಕಡೆಯ 10 ಇನ್ನಿಂಗ್ಸ್‌ಗಳಲ್ಲಿ 180.63 ಸರಾಸರಿಯಲ್ಲಿ 1,263 ರನ್ ಗಳಿಸಿದ್ದಾರೆ. 10 ಇನ್ನಿಂಗ್ಸ್‌ಗಳಲ್ಲಿ 8 ಶತಕ ಸಿಡಿಸುವ ಮೂಲಕ ಭರ್ಜರಿ ಫಾರ್ಮ್‌ನಲ್ಲಿದ್ದಾರೆ.
ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಉತ್ತರ ಪ್ರದೇಶದ ವಿರುದ್ಧದ ಪಂದ್ಯದಲ್ಲಿ ಒಂದು ಓವರ್ ನಲ್ಲಿ 7 ಶತಕ ಸಿಡಿಸುವ ಮೂಲಕ ಅವರು ದಾಖಲೆ ಬರೆದಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಡುವ ಅವರು ಟಿ20 ಕ್ರಿಕೆಟ್‌ನಲ್ಲಿ ಉತ್ತಮ ಅನುಭವ ಹೊಂದಿದ್ದಾರೆ.

ಸರಣಿ ಗೆಲ್ಲುವತ್ತ ಭಾರತದ ಚಿತ್ತ
ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ 2022ರ ವರ್ಷಕ್ಕೆ ವಿದಾಯ ಹೇಳಿದ್ದ ಟೀಂ ಇಂಡಿಯಾ, ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಗೆಲ್ಲುವ ಮೂಲಕ 2023ರ ಕ್ರಿಕೆಟ್ ಅಭಿಯಾನ ಆರಂಭಿಸುವ ಉತ್ಸಾಹದಲ್ಲಿದೆ.
ಹಿರಿಯ ಕ್ರಿಕೆಟಿಗರಿಗೆ ವಿಶ್ರಾಂತಿ ನೀಡಿದ್ದು, ಯುವ ಆಟಗಾರರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ. ರಾಜ್‌ಕೋಟ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕೆಲವು ಬದಲಾವಣೆ ಮಾಡುವ ಸಾಧ್ಯತೆ ಇದೆ. ಶುಭಮನ್ ಗಿಲ್ ಬದಲಿಗೆ ಋತುರಾಜ್ ಗಾಯಕ್ವಾಡ್ ಕಣಕ್ಕಿಳಿಯಬಹುದಾಗಿದೆ. ಅರ್ಷದೀಪ್ ಸಿಂಗ್ ಬದಲಿಗೆ ಹರ್ಷಲ್ ಪಟೇಲ್ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಭಾರತ ತಂಡದ ಸಂಭಾವ್ಯ ಬಳಗ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್ / ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್ / ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಶಿವಂ ಮಾವಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications