ಭಾರತ vs ಶ್ರೀಲಂಕಾ: 3ನೇ ಪಂದ್ಯದ ಸಂಭಾವ್ಯ ತಂಡ, ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್

ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಎರಡು ಪಂದ್ಯಗಳು ಈಗಾಗಲೇ ಮುಕ್ತಾಯವಾಗಿದ್ದು ಅಂತಿಮ ಪಂದ್ಯ ಇಂದು (ಭಾನುವಾರ) ನಡೆಯಲಿದೆ. ಮೊದಲ ಎರಡು ಪಂದ್ಯದಲ್ಲಿಯೂ ಭಾರತ ಅದ್ಭುತ ಪ್ರದರ್ಶನ ನೀಡಿ ಸುಲಭ ಗೆಲುವು ತನ್ನದಾಗಿಸಿಕೊಂಡಿದ್ದು ಸರಣಿಯನ್ನು ಈಗಾಗಲೇ ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಸರಣಿಯ ಮೂರನೇ ಪಂದ್ಯವನ್ನು ಕೂಡ ಹಿಮಾಚಲ ಪ್ರದೇಶದ ಹೆಚ್‌ಪಿಸಿಎ ಕ್ರಿಕೆಟ್ ಸ್ಟೇಡಿಯಂ ಆಯೋಜನೆ ಮಾಡಲಿದ್ದು ಎರಡು ಪಂದ್ಯಗಳು ಕುಡ ಈ ಪಂದ್ಯದಕ್ಕೆ ಸಜ್ಜಾಗಿದೆ. ಈ ಅಂತಿಮ ಪಂದ್ಯವನ್ನು ಕೂಡ ಗೆದ್ದು ಸರಣಿಯಲ್ಲಿ ಕ್ಲೀನ್‌ಸ್ವೀಪ್ ಮಾಡುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದ್ದರೆ ವೈಟ್‌ವಾಶ್ ಅವಮಾನದಿಂದ ಪಾರಾಗಲು ಲಂಕಾ ಪಡೆ ಹರಸಾಹಸ ಪಡಲಿದೆ.
ಲಕ್ನೋದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ನೀರಸ ಪ್ರದರ್ಶನ ನೀಡಿದ ಬಳಿಕ ಶ್ರೀಲಂಕಾ ಧರ್ಮಶಾಲಾದಲ್ಲಿ ಬ್ಯಾಟಿಂಗ್‌ನಲ್ಲಿ ಲಾಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದೆ. ಈ ಪಮದ್ಯದಲ್ಲಿ ಲಂಕಾ ಬ್ಯಾಟರ್‌ಗಳಿಂದ ಅದ್ಭುತ ಇನ್ನಿಂಗ್ಸ್ ಬಂದಿದೆ. ಅದರಲ್ಲೂ ಆರಂಭೀಕ ಆಟಗಾರ ಫಾತುಮ್ ನಿಸ್ಸಾಂಕ ಹಾಗೂ ನಾಯಕ ದಸುನ್ ಶನಕ ಇನ್ನಿಂಗ್ಸ್ ಲಂಕಾ ಪಡೆಗೆ ಭಾರೀ ಆತ್ಮವಿಶ್ವಾಸ ಮೂಡಿಸಿರುವುದರಲ್ಲಿ ಅನುಮಾನವಿಲ್ಲ. ಭಾರತದ ಬಲಿಷ್ಠ ಬೌಲಿಂಗ್ ವಿಭಾಗವನ್ನು ಸಮರ್ಥವಾಗಿ ಎದುರಿಸಬಹುದು ಎಂಬ ಆತ್ಮವಿಶ್ವಾಸದೊಂದಿಗೆ ಅಂತಿಮ ಪಂದ್ಯಕ್ಕೆ ಲಂಕಾ ಪಡೆ ಸಜ್ಜಾಗಿದೆ.

ಧರ್ಮಶಾಲಾ ಹವಾಮಾನ ವರದಿ
ಹಿಮಾಚಲ ಪ್ರದೇಶದ ನಗರವಾಗಿರುವ ಧರ್ಮಶಾಲಾದಲ್ಲಿ ಟಿ20 ಸರಣಿಯ ಅಂತಿಮ ಭಾನುವಾರ ನಡೆಯಲಿದೆ. ಸಂಜೆ 7 ಗಂಟೆಗೆ ಈ ಪಂದ್ಯ ಆರಂಭವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದಲ್ಲಿ ಚಳಿಯಿಂದ ಕೂಡಿದ ವಾತಾವರಣ ಆಟಗಾರರಿಗೆ ಸವಾಲಾಗಲಿದೆ. ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಸಾಧ್ಯತೆದೆ. ಆದರೆ ಮಳೆಯಾಗುವ ಯಾವುದೇ ಸಾಧ್ಯತೆಗಳು ಇಲ್ಲ.

ಧರ್ಮಶಾಲಾ ಪಿಚ್ ರಿಪೋರ್ಟ್
ಧರ್ಮಶಾಲಾದ ಹೆಚ್‌ಪಿಸಿಎ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯ ಬ್ಯಾಟರ್‌ಗಳಿಗೆ ಉತ್ತಮವಾಗಿ ನೆರವು ನೀಡಿರುವುದನ್ನು ಗಮನಿಸಬಹುದು. ಚೆಂಡು ಸುಲಭವಾಗಿ ಬ್ಯಾಟ್‌ಗೆ ಬರುವುದರಿಂದ ಬೌಲರ್‌ಗಳಿಗೆ ಸವಾಲಾಗಲಿದೆ. ಬೌಲರ್‌ಗಳು ವಿಕೆಟ್ ಪಡೆಯಲು ಸಾಕಷ್ಟು ಕಷ್ಟಪಡೆಬೇಕಾಗುತ್ತದೆ. ಟಾಸ್ ಗೆದ್ದ ತಂಡ ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸುವುದು ಅತ್ಯುತ್ತಮ ಆಯ್ಕೆಯಾಗಿರಲಿದೆ.

ಭಾರತ ಹಾಗೂ ಶ್ರೀಲಂಕಾ ಸಂಭಾವ್ಯ ಬಳಗ
ಭಾರತ ಸಂಭಾವ್ಯ ತಂಡ: ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ(ನಾಯಕ), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ಆವೇಶ್ ಖಾನ್, ಜಸ್ಪ್ರೀತ್ ಬುಮ್ರಾ, ರವಿ ಬಿಷ್ಣೋಯ್
ಶ್ರೀಲಂಕಾ ಸಂಭಾವ್ಯ ತಂಡ: ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ, ಚರಿತ್ ಅಸಲಂಕಾ, ದನುಷ್ಕ ಗುಣತಿಲಕ, ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್), ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಪ್ರವೀಣ್ ಜಯವಿಕ್ರಮ, ಬಿನೂರ ಫೆರ್ನಾಂಡೋ, ಲಹಿರು ಕುಮಾರ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications