ಭಾರತ vs ಶ್ರೀಲಂಕಾ: 3ನೇ ಟಿ ಟ್ವೆಂಟಿ ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ ಇಲೆವೆನ್, ಲೈವ್ ಸ್ಕೋರ್ ಇಲ್ಲಿದೆ

ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ಟಿ ಟ್ವೆಂಟಿ ಹಾಗೂ ಟೆಸ್ಟ್ ಸರಣಿಗಳಲ್ಲಿ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯುತ್ತಿದೆ. ಇತ್ತ ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಹಾಗೂ ಟಿ ಟ್ವೆಂಟಿ ಎರಡೂ ಸರಣಿಗಳಲ್ಲಿಯೂ ಕೂಡ ವೈಟ್ ವಾಷ್ ಸಾಧನೆ ಮಾಡಿರುವ ಟೀಂ ಇಂಡಿಯಾ ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧ ಸಾಲು ಸಾಲು ಗೆಲುವುಗಳನ್ನು ಸಾಧಿಸಿರುವ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಮೊದಲಿಗೆ 3 ಪಂದ್ಯಗಳ ಟ್ವೆಂಟಿ ಸರಣಿಯಲ್ಲಿ ಸೆಣಸಾಟವನ್ನು ನಡೆಸುತ್ತಿದ್ದು, ಈ ಸರಣಿಯಲ್ಲಿಯೂ ಕೂಡ ಸಾಲು ಸಾಲು ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ.
ಇನ್ನು ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿಯ ಚೊಚ್ಚಲ ಪಂದ್ಯ ಫೆಬ್ರವರಿ 24ರ ಗುರುವಾರದಂದು ಲಕ್ನೋ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ 62 ರನ್‌ಗಳ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಫೆಬ್ರವರಿ 26ರಂದು ಧರ್ಮಶಾಲಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ. ಹೀಗೆ ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲೆರಡು ಟಿ ಟ್ವೆಂಟಿ ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 2 - 0 ಅಂತರದ ಮುನ್ನಡೆಯನ್ನು ಕಾಯ್ದುಕೊಳ್ಳುವುದರ ಮೂಲಕ ಸರಣಿ ಕೈವಶಮಾಡಿಕೊಂಡಿರುವ ಟೀಮ್ ಇಂಡಿಯಾ ಇಂದು ( ಫೆಬ್ರವರಿ 27 ) ನಡೆಯಲಿರುವ ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿಯೂ ಸಹ ಜಯ ಸಾಧಿಸುವುದರ ಮೂಲಕ ಸತತವಾಗಿ ಅತಿ ಹೆಚ್ಚು ಟಿ ಟ್ವೆಂಟಿ ಪಂದ್ಯ ಗೆದ್ದಿರುವ ಅಫ್ಘಾನಿಸ್ತಾನದ ದಾಖಲೆಯನ್ನು ( ಸತತ 12 ಟಿ20 ಪಂದ್ಯಗಳ ಜಯದ ದಾಖಲೆ ) ಸರಿದೂಗಿಸಿಕೊಳ್ಳುವ ಯೋಜನೆಯಲ್ಲಿದೆ. ಹಾಗೂ ಈ ಪಂದ್ಯವನ್ನು ಗೆದ್ದರೆ ಶ್ರೀಲಂಕಾ ತಂಡಕ್ಕೂ ಕೂಡಾ ಟೀಮ್ ಇಂಡಿಯಾ ವೈಟ್ ವಾಷ್ ಬಳಿದು ಹ್ಯಾಟ್ರಿಕ್ ವೈಟ್ ವಾಷ್ ಸಾಧನೆ ಮಾಡಲಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದು ಕಳೆದ ಪಂದ್ಯದ ರೀತಿಯೇ ಈ ಪಂದ್ಯದಲ್ಲಿಯೂ ಪೈಪೋಟಿಯುತ ಗುರಿಯನ್ನು ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯದ ಲೈವ್ ಸ್ಕೋರ್:
ಭಾರತ ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಅವೇಶ್ ಖಾನ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದನುಷ್ಕ ಗುಣತಿಲಕ, ಚರಿತ್ ಅಸಲಂಕ, ದಿನೇಶ್ ಚಂಡಿಮಲ್(ವಿಕೆಟ್ ಕೀಪರ್), ಜನಿತ್ ಲಿಯಾನಗೆ, ದಸುನ್ ಶನಕ(ನಾಯಕ), ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಜೆಫ್ರಿ ವಾಂಡರ್ಸೆ, ಬಿನೂರ ಫೆರ್ನಾಂಡೋ, ಲಹಿರು ಕುಮಾರ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications