ಶ್ರೀಲಂಕಾ ವಿರುದ್ಧದ ಪ್ರಥಮ ಟಿ20 ಪಂದ್ಯ ಗೆಲ್ಲಬೇಕೆಂದರೆ ಈ ಆಟಗಾರನನ್ನು ಹೊರಗಿಡಬೇಕು ಎಂದ ಮಾಜಿ ಕ್ರಿಕೆಟಿಗ!

ಇತ್ತೀಚಿಗಷ್ಟೆ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡು ಕಾಂಗರೂಗಳ ನೆಲದಲ್ಲಿ ನಡೆದ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1 - 4 ಅಂತರದಿಂದ ಹೀನಾಯವಾಗಿ ಸೋಲನ್ನು ಕಂಡಿರುವ ಶ್ರೀಲಂಕಾ ಇದೀಗ ಭಾರತ ಪ್ರವಾಸವನ್ನು ಕೈಗೊಂಡಿದ್ದು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ. ಇತ್ತ ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ತಂಡದ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಸೆಣಸಾಟವನ್ನು ನಡೆಸಿದ್ದ ಟೀಮ್ ಇಂಡಿಯಾ ಎರಡೂ ಸರಣಿಗಳ ಎಲ್ಲಾ ಪಂದ್ಯಗಳನ್ನೂ ಗೆಲ್ಲುವುದರ ಮೂಲಕ ವೈಟ್ ವಾಷ್ ಸಾಧನೆ ಮಾಡಿ ಸಾಲು ಸಾಲು ಗೆಲುವುಗಳನ್ನು ಕಂಡಿದೆ.
ಹೀಗೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲುವುದರ ಮೂಲಕ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿರುವ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇದೀಗ ಶ್ರೀಲಂಕಾ ವಿರುದ್ಧ ನಡೆಯಲಿರುವ ಟಿ ಟ್ವೆಂಟಿ ಸರಣಿಯಲ್ಲಿಯೂ ಕೂಡ ವೈಟ್ ವಾಷ್ ಸಾಧನೆ ಮಾಡುವ ಗುರಿಯನ್ನು ಹೊಂದಿದೆ. ರೋಹಿತ್ ಶರ್ಮಾ ಭಾರತ ತಂಡದ ಪೂರ್ಣಾವಧಿ ನಾಯಕನಾಗಿ ಆಯ್ಕೆಯಾದ ನಂತರ ಸತತವಾಗಿ ಜಯ ಸಾಧಿಸುತ್ತಿರುವ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಕೂಡ ವೈಟ್ ವಾಷ್ ಸಾಧನೆ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಇನ್ನು ಇತ್ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಪ್ರಥಮ ಪಂದ್ಯ ಇಂದು ( ಫೆಬ್ರವರಿ 24 ) ಲಕ್ನೋದಲ್ಲಿ ನಡೆಯಲಿದ್ದು, ಪಂದ್ಯದಲ್ಲಿ ಯಾವ ಆಟಗಾರರು ಕಣಕ್ಕಿಳಿಯಬೇಕು ಎಂಬುದರ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಶ್ರೀಲಂಕಾ ವಿರುದ್ಧದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಬೇಕೆಂದರೆ ಈ 11 ಆಟಗಾರರನ್ನೊಳಗೊಂಡ ತಂಡ ಕಣಕ್ಕಿಳಿಯಬೇಕು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹಾಗೂ ಪ್ರಮುಖ ಆಟಗಾರನನ್ನೇ ತಂಡದಿಂದ ಹೊರಗಿಟ್ಟಿರುವ ಆಕಾಶ್ ಚೋಪ್ರಾ ಈ ಕೆಳಕಂಡ ಆಟಗಾರರು ಕಣಕ್ಕಿಳಿಯಬೇಕು ಎಂದಿದ್ದಾರೆ.

ರೋಹಿತ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು
ಶ್ರೀಲಂಕಾ ವಿರುದ್ಧದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಮತ್ತು ರುತುರಾಜ್ ಗಾಯಕ್ವಾಡ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬೇಕು ಎಂದಿರುವ ಆಕಾಶ್ ಚೋಪ್ರಾ ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಆರಂಭಿಕ ಆಟಗಾರನ ಸ್ಥಾನವನ್ನು ಬಿಟ್ಟುಕೊಡಬೇಕು ಎಂದಿದ್ದಾರೆ. ಕಳೆದ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿಯೂ ಕೂಡ ಇದೇ ರೀತಿ ರೋಹಿತ್ ಶರ್ಮಾ ತೃತೀಯ ಕ್ರಮಾಂಕದಲ್ಲಿ ಕಣಕ್ಕಿಳಿದು ಆರಂಭಿಕ ಸ್ಥಾನವನ್ನು ಈ ಇಬ್ಬರು ಆಟಗಾರರಿಗೆ ಬಿಟ್ಟುಕೊಟ್ಟಿದ್ದರು.

ಇನ್ನುಳಿದ ತಂಡ ಹೀಗಿರಬೇಕು
ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಐದನೇ ಕ್ರಮಾಂಕದಲ್ಲಿ ದೀಪಕ್ ಹೂಡಾ ಕಣಕ್ಕಿಳಿಯಬೇಕು ಎಂದು ಅಭಿಪ್ರಾಯವ್ಯಕ್ತಪಡಿಸಿರುವ ಆಕಾಶ್ ಚೋಪ್ರಾ ಆರನೇ ಕ್ರಮಾಂಕದಲ್ಲಿ ವೆಂಕಟೇಶ್ ಅಯ್ಯರ್ ಕಣಕ್ಕಿಳಿಯಬೇಕು ಎಂದಿದ್ದಾರೆ. ಇನ್ನು 2 ತಿಂಗಳುಗಳ ನಂತರ ಟೀಮ್ ಇಂಡಿಯಾ ಸೇರಿರುವ ರವೀಂದ್ರ ಜಡೇಜಾ ಏಳನೇ ಕ್ರಮಾಂಕದಲ್ಲಿ ಆಡಲಿ ಎಂದಿರುವ ಆಕಾಶ್ ಚೋಪ್ರಾ ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್, ಯುಜುವೇಂದ್ರ ಚಹಾಲ್, ಜಸ್ಪ್ರೀತ್ ಬೂಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರಿಗೆ ಸ್ಥಾನ ನೀಡಿದ್ದಾರೆ.

ಸಂಜು ಸ್ಯಾಮ್ಸನ್ ಅವರನ್ನು ಹೊರಗಿಟ್ಟ ಆಕಾಶ್ ಚೋಪ್ರಾ
ಆರಂಭಿಕ ಆಟಗಾರರಾಗಿ ರುತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶಾನ್ ಕಣಕ್ಕಿಳಿಯಬೇಕು ಎಂದಿರುವ ಆಕಾಶ್ ಚೋಪ್ರಾ ಐದನೇ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಬದಲು ದೀಪಕ್ ಹೂಡಾ ಕಣಕ್ಕಿಳಿಯಬೇಕು ಎಂದಿದ್ದಾರೆ. ಹಲವು ತಿಂಗಳುಗಳ ನಂತರ ಟೀಮ್ ಇಂಡಿಯಾ ಸೇರಿರುವ ಸಂಜು ಸ್ಯಾಮ್ಸನ್ ಅವರಿಗೆ ತಮ್ಮ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡದ ಆಕಾಶ್ ಚೋಪ್ರಾ ಈ 11 ಆಟಗಾರರ ತಂಡ ಶ್ರೀಲಂಕಾ ವಿರುದ್ಧದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿದರೆ ಯಶಸ್ಸು ಸಾಧಿಸಲಿದೆ ಎಂದಿದ್ದಾರೆ.
ಆಕಾಶ್ ಚೋಪ್ರಾ ಶ್ರೀಲಂಕಾ ವಿರುದ್ಧದ ಪ್ರಥಮ ಟಿ ಟ್ವೆಂಟಿ ಪಂದ್ಯಕ್ಕೆ ಆಯ್ಕೆ ಮಾಡಿರುವ ಭಾರತದ ಆಡುವ ಬಳಗ ಹೀಗಿದೆ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications