IND vs SL: ಟಿ20 ತಂಡದಲ್ಲಿ ರವೀಂದ್ರ ಜಡೇಜಾ ಬದಲಿಗೆ ಈತನೇ ಖಾಯಂ ಆಟಗಾರ?; ಪಾಂಡ್ಯ ಸುಳಿವು

ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು 51 ಎಸೆತಗಳಲ್ಲಿ 112 ರನ್‌ಗಳ ಪಂದ್ಯ ವಿಜೇತ ಪ್ರದರ್ಶನ ನೀಡಿದರು.
ಶ್ರೀಲಂಕಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ 91 ರನ್‌ಗಳ ಪ್ರಚಂಡ ಗೆಲುವಿನ ನಂತರ, ನಾಯಕ ಹಾರ್ದಿಕ್ ಪಾಂಡ್ಯ ಸೂರ್ಯಕುಮಾರ್ ಯಾದವ್ ಸೇರಿದಂತೆ ಇಡೀ ತಂಡವನ್ನು ಪ್ರಶಂಸಿಸಿದರು. ಇದೇ ವೇಳೆ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಭಾರತ ಗೆದ್ದುಕೊಂಡಿತು.
"ಸೂರ್ಯಕುಮಾರ್ ಯಾದವ್ ಎಲ್ಲರನ್ನೂ ಅಚ್ಚರಿಗೊಳಿಸುತ್ತಿದ್ದಾರೆ ಮತ್ತು ಬ್ಯಾಟಿಂಗ್ ಮಾಡುವುದು ತುಂಬಾ ಸುಲಭ ಎಂದು ಎಲ್ಲರಿಗೂ ತಿಳಿಸುತ್ತಿದ್ದಾರೆ. ನಾನು ಬೌಲರ್ ಆಗಿದ್ದರೆ ಸೂರ್ಯಕುಮಾರನ ಬ್ಯಾಟಿಂಗ್‌ನಿಂದ ನಾನು ನಿರಾಶೆಗೊಳ್ಳುತ್ತಿದ್ದೆ. ಅವರು ವಿಶ್ವದಲ್ಲಿಯೇ ಅಪಾಯಕಾರಿ ಬ್ಯಾಟಿಂಗ್ ಮಾಡುತ್ತಿದ್ದಾರೆ," ಎಂದು ಹಾರ್ದಿಕ್ ಪಾಂಡ್ಯ ಪಂದ್ಯದ ನಂತರ ಸೂರ್ಯಕುಮಾರ್ ಯಾದವ್‌ರನ್ನು ಶ್ಲಾಘಿಸಿದರು.

ಬ್ಯಾಟಿಂಗ್ ಕ್ರಮಾಂಕದಲ್ಲಿನ ಸಮಸ್ಯೆಗಳಿಗೆ ಪರಿಹಾರ
ಇನ್ನು ತಮ್ಮ ಎರಡನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ರಾಹುಲ್ ತ್ರಿಪಾಠಿ ಕೇವಲ 16 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 35 ರನ್ ಗಳಿಸಿ ಭಾರತ 20 ಓವರ್‌ಗಳಲ್ಲಿ 228/5 ಬೃಹತ್ ಮೊತ್ತವನ್ನು ಗಳಿಸಲು ನೆರವಾದರು.
"ಪವರ್‌ಪ್ಲೇ ಓವರ್‌ಗಳಲ್ಲಿ ತುಂಬಾ ಚೆನ್ನಾಗಿ ಆಡಿದ ರಾಹುಲ್ ತ್ರಿಪಾಠಿ ಅವರಿಗೂ ವಿಶೇಷ ಅಭಿನಂದನೆಗೆ ಅರ್ಹರು. ಸರಿಯಾದ ಸಮಯದಲ್ಲಿ, ಸರಿಯಾದ ಕ್ರಮಾಂಕದಲ್ಲಿ ಉತ್ತಮ ರನ್ ಗಳಿಸಿದರು. ಆ ಮೂಲಕ ನಾವು ಬ್ಯಾಟಿಂಗ್ ಕ್ರಮಾಂಕದಲ್ಲಿನ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಲು ಪ್ರಯತ್ನಿಸುತ್ತೇವೆ," ಎಂದು ಹಾರ್ದಿಕ್ ಪಾಂಡ್ಯ ಹೇಳಿದರು.

ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಮಿಂಚಿದ ಅಕ್ಷರ್ ಪಟೇಲ್
ಇದೇ ವೇಳೆ ಆಲ್‌ರೌಂಡರ್ ಅಕ್ಷರ್ ಪಟೇಲ್ ಟಿ20 ಸರಣಿಯುದ್ದಕ್ಕೂ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಸ್ಥಿರವಾಗಿ ಆಡಿದರು ಮತ್ತು ಇದರಿಂದ 'ಸರಣಿ ಶ್ರೇಷ್ಠ ಆಟಗಾರ' ಪ್ರಶಸ್ತಿಯನ್ನು ಪಡೆದರು. ಮತ್ತೊಬ್ಬ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಅನುಪಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿದರು.
ಅಕ್ಷರ್ ಪಟೇಲ್ ಎರಡನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು ಮತ್ತು ಮೂರನೇ ಟಿ20 ಪಂದ್ಯದಲ್ಲಿ 9 ಎಸೆತಗಳಲ್ಲಿ 21 ರನ್ ಗಳಿಸಿದರು. ಬೌಲಿಂಗ್‌ನಲ್ಲಿ ಅವರು ಕುಸಾಲ್ ಮೆಂಡಿಸ್ ಅವರ ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಮೊದಲ ಮುನ್ನಡೆ ನೀಡಿದರು.

ಈ ಸರಣಿಯು ಅಕ್ಷರ್ ಪಟೇಲ್‌ಗೆ ಹೆಚ್ಚಿನ ಆತ್ಮವಿಶ್ವಾಸ ನೀಡಿದೆ
"ಅಕ್ಷರ್ ಪಟೇಲ್ ಬಗ್ಗೆ ತುಂಬಾ ಹೆಮ್ಮೆ ಇದೆ. ಈ ಸರಣಿಯು ಅವರಿಗೆ ಹೆಚ್ಚಿನ ಆತ್ಮವಿಶ್ವಾಸವನ್ನು ನೀಡುತ್ತದೆ. ಇದು ತಂಡಕ್ಕೆ ಹೆಚ್ಚಿನ ಮೌಲ್ಯವನ್ನು ತಂದುಕೊಡುತ್ತದೆ. ಆಡುವ ಬಳಗದಲ್ಲಿ ಅವರು ಯಾವಾಗಲೂ ಪರಿಗಣನೆಯಲ್ಲಿರುತ್ತಾರೆ," ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದರು.
ಪದೇ ಪದೇ ಗಾಯಕ್ಕೆ ತುತ್ತಾಗುತ್ತಿರುವ ರವೀಂದ್ರ ಜಡೇಜಾ ಬದಲಿಗೆ ಟಿ20 ತಂಡದಲ್ಲಿ ಅಕ್ಷರ್ ಪಟೇಲ್ ಖಾಯಂ ಆಟಗಾರನಾಗುತ್ತಾರಾ ಎಂಬುದಕ್ಕೆ ಹಾರ್ದಿಕ್ ಪಾಂಡ್ಯ ಅವರ ಈ ಮಾತುಗಳು ಸುಳಿವು ನೀಡಿದೆ. ಆದರೆ, ರವೀಂದ್ರ ಜಡೇಜಾ ತಂಡಕ್ಕೆ ಹಿಂದಿರುಗಿನ ನಂತರ ಮುಂದಿನ ಪಂದ್ಯಗಳಲ್ಲಿ ಆಡುವ ಬಳಗದ ಆಯ್ಕೆ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಜನವರಿ 10ರಂದು ಏಕದಿನ ಸರಣಿಯ ಮೊದಲ ಪಂದ್ಯ
ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡವು ಶ್ರೀಲಂಕಾ ವಿರುದ್ಧ 2-1 ಅಂತರದಲ್ಲಿ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಇನ್ನು ರೋಹಿತ್ ಶರ್ಮಾ ಮಂಗಳವಾರ (ಜನವರಿ 10) ಗುವಾಹಟಿಯಲ್ಲಿ ನಡೆಯಲಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದು, ಆ ವೇಳೆಗೆ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾರಂತಹ ಸ್ಟಾರ್ ಆಟಗಾರರು ಮರಳಲಿರುವುದು ತಂಡಕ್ಕೆ ಮತ್ತಷ್ಟು ಬಲ ತಂದುಕೊಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications