ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs SL: 2ನೇ ಏಕದಿನ ಪಂದ್ಯದಲ್ಲಿ ಯುಜ್ವೇಂದ್ರ ಚಹಾಲ್ ಕೈಬಿಟ್ಟಿದ್ದಕ್ಕೆ ನಿಜ ಕಾರಣ ಬಹಿರಂಗ!

IND vs SL: BCCI Reveals Reason for Yuzvendra Chahals Misses Out From 2nd ODI

ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಒಂದು ಬದಲಾವಣೆ ಮಾಡಿತು. ಟಾಸ್ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಬಲವಂತದ ಬದಲಾವಣೆಯನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.

ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಬದಲಿಗೆ ಎಡಗೈ ಲೆಗ್ ಸ್ಪಿನ್ನರ್ ಕುಲದೀಪ್ ಯಾದವ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡರು. ಇಂದು ಬೆಳಗ್ಗೆ ಚಹಾಲ್ ಎದ್ದಾಗ, ಅವರಿಗೂ ಈ ಪಂದ್ಯದಿಂದ ಹೊರಗುಳಿಲಾಗುತ್ತದೆ ಎಂದು ಸರಿಯಾಗಿ ಗೊತ್ತಿರಲಿಲ್ಲವೆಂದು ನಾಯಕ ರೋಹಿತ್ ಶರ್ಮಾ ಬಹಿರಂಗಪಡಿಸಿದರು.

Ranji Trophy: ದಾಖಲೆಯ 379 ರನ್ ಗಳಿಸಿದ ನಂತರ ಪೃಥ್ವಿ ಶಾ ಬಗ್ಗೆ ಜಯ್ ಶಾ ಹೇಳಿದ್ದೇನು?Ranji Trophy: ದಾಖಲೆಯ 379 ರನ್ ಗಳಿಸಿದ ನಂತರ ಪೃಥ್ವಿ ಶಾ ಬಗ್ಗೆ ಜಯ್ ಶಾ ಹೇಳಿದ್ದೇನು?

ನಂತರ ಯುಜ್ವೇಂದ್ರ ಚಹಾಲ್ ಅವರ ಗಾಯದ ಬಗ್ಗೆ ಬಿಸಿಸಿಐ ಅಪ್‌ಡೇಟ್ ನೀಡಿತು. ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯಕ್ಕೆ ಚಹಾಲ್ ಅಲಭ್ಯತೆಯ ಹಿಂದಿನ ನಿಜವಾದ ಕಾರಣವನ್ನು ಬಿಸಿಸಿಐ ಟ್ವೀಟ್ ಮಾಡಿದೆ. "ಯುಜ್ವೇಂದ್ರ ಚಹಾಲ್ ಬಲ ಭುಜದ ನೋವಿನಿಂದಾಗಿ 2ನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ," ಎಂದು ಬರೆದಿದೆ.

IND vs SL: BCCI Reveals Reason for Yuzvendra Chahals Misses Out From 2nd ODI

"ಕಳೆದ ಪಂದ್ಯದಲ್ಲಿ ಯುಜ್ವೇಂದ್ರ ಚಾಹಲ್ ಡೈವ್ ಮಾಡಿದ್ದು, ಇಂದು ಕೂಡ ಚೇತರಿಸಿಕೊಂಡಿಲ್ಲ. ಆದ್ದರಿಂದ ಕುಲದೀಪ್ ಯಾದವ್ ಆಡಲಿದ್ದಾರೆ," ಎಂದು ಟಾಸ್ ಸಮಯದಲ್ಲಿ ರೋಹಿತ್ ಶರ್ಮಾ ತಿಳಿಸಿದರು.

ಯುಜ್ವೇಂದ್ರ ಚಹಾಲ್ ಏಕದಿನ ಸ್ವರೂಪದಲ್ಲಿ ಭಾರತಕ್ಕೆ ಅತಿದೊಡ್ಡ ಪಂದ್ಯ ಸ್ಪಿನ್ನರ್‌ಗಳಲ್ಲಿ ಒಬ್ಬರು. ಅವರ ಬದಲಿ ಬೌಲರ್ ಆಗಿ ಆಯ್ಕೆಯಾದ ಎಡಗೈ ಮಣಿಕಟ್ಟಿನ ಸ್ಪಿನ್ನರ್ ಕುಲದೀಪ್ ಯಾದವ್ 10 ಓವರ್‌ ಬೌಲಿಂಗ್ ಮಾಡಿ 51 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.

ಶ್ರೀಲಂಕಾ ವಿರುದ್ಧ ಗುವಾಹಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯವನ್ನು ಭಾರತ ತಂಡ 67 ರನ್‌ಗಳಿಂದ ಗೆದ್ದುಕೊಂಡಿತ್ತು. ಇದೀಗ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಇದೇ ವೇಳೆ ಸರಣಿಯನ್ನು ಸಮಬಲಗೊಳಿಸಲು ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ಗೆಲ್ಲುವ ಕನಸು ಕಾಣುತ್ತಿದ್ದಾರೆ.

ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧ ದ್ವಿಶತಕ ಸಿಡಿಸಿದ ಇಶಾನ್ ಕಿಶನ್ ಮತ್ತು ಶ್ರೀಲಂಕಾ ವಿರುದ್ಧ ಟಿ20ಯಲ್ಲಿ ಶತಕ ಬಾರಿಸಿದ್ದ ಸೂರ್ಯಕುಮಾರ್ ಯಾದವ್ ಅವರನ್ನು ಆಡುವ 11ರ ಬಳಗದಿಂದ ಮತ್ತೆ ಹೊರಗಿಡಲಾಗಿದೆ.

ಶ್ರೀಲಂಕಾ ತಂಡ ಕೂಡ ಒಂದು ಬದಲಾವಣೆ ಮಾಡಿದ್ದು, ಈಡನ್ ಗಾರ್ಡನ್ಸ್‌ನಲ್ಲಿ ನುವಾನಿಡು ಫೆರ್ನಾಂಡೋಗೆ ಚೊಚ್ಚಲ ಅವಕಾಶವನ್ನು ನೀಡಿತು. ಆರಂಭಿಕ ಬ್ಯಾಟರ್ ಪಾಥುಮ್ ನಿಸ್ಸಾಂಕಾ ಅವರು ಪಂದ್ಯದ ಮುನ್ನಾದಿನದಂದು ಗಾಯದ ಕಾರಣದಿಂದ ಹೊರಗುಳಿದರು.

ಭಾರತ ಮತ್ತು ಶ್ರೀಲಂಕಾ ತಂಡಗಳ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ: ದಸುನ್ ಶನಕ(ನಾಯಕ), ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಅವಿಷ್ಕ ಫೆರ್ನಾಂಡೊ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ನುವಾನಿಡು ಫೆರ್ನಾಂಡೊ, ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತಾ.

Story first published: Thursday, January 12, 2023, 17:06 [IST]
Other articles published on Jan 12, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X