T20 Captain ಭಾರತ ಟಿ20 ತಂಡಕ್ಕೆ ನೂತನ ನಾಯಕ, ಡಿಸೆಂಬರ್ 27ರಂದು ಅಧಿಕೃತ ಘೋಷಣೆ

ಬಿಸಿಸಿಐ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಗೆ ಹೊಸ ವರ್ಷಕ್ಕೆ ಭರ್ಜರಿ ಉಡುಗೊರೆ ನೀಡಲಿದೆ. ಹಾರ್ದಿಕ್ ಪಾಂಡ್ಯ ಭಾರತ ಟಿ20 ತಂಡದ ನಾಯಕತ್ವ ವಹಿಸಿಕೊಳ್ಳಲು ಸಜ್ಜಾಗಿದ್ದು, ಡಿಸೆಂಬರ್ 27ರಂದು ಅಧಿಕೃತವಾಗಿ ಘೋಷಣೆ ಮಾಡಲಿದೆ.

ವಜಾಗೊಂಡಿರುವ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ಮಂಗಳವಾರ ಶ್ರೀಲಂಕಾ ವಿರುದ್ಧ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲು ಸಿದ್ಧವಾಗಿದೆ. ರೋಹಿತ್ ಶರ್ಮಾ ಟಿ20 ನಾಯಕತ್ವದಿಂದ ಕೆಳಗಿಳಿಯಲಿದ್ದು, ಹಾರ್ದಿಕ್ ಪಾಂಡ್ಯ ಟಿ20 ತಂಡದ ನಾಯಕನಾಗಲಿದ್ದಾರೆ. 2024ರ ವರೆಗೆ ಅವರು ಭಾರತ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ.

"ಭಾರತ ಟಿ20 ತಂಡಕ್ಕೆ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಘೋಷಣೆ ಮಾಡುವ ಸಮಯ ಬಂದಿದೆ. ಪ್ರಸ್ತುತ ತಂಡದಲ್ಲಿರುವ ರೋಹಿತ್ ಶರ್ಮಾ ಸೇರಿದಂತೆ ಹಲವು ಆಟಗಾರರು 2024 ರವರೆಗೆ ತಂಡದಲ್ಲಿ ಇರುವ ಸಾಧ್ಯತೆ ಕಡಿಮೆ ಇದೆ. ಭಾರತೀಯ ಟಿ20 ತಂಡದ ಭವಿಷ್ಯದ ದೃಷ್ಟಿಯಿಂದ ಹಾರ್ದಿಕ್ ಪಾಂಡ್ಯ ಅವರನ್ನು ಟಿ20 ತಂಡಕ್ಕೆ ನಾಯಕರನ್ನಾಗಿ ನೇಮಿಸಲಾಗುವುದು ಎಂದು" ಬಿಸಿಸಿಐನ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಹಿರಿಯ ಆಟಗಾರರಿಗೆ ವಿಶ್ರಾಂತಿ

ಹಿರಿಯ ಆಟಗಾರರಿಗೆ ವಿಶ್ರಾಂತಿ

ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಹಿರಿಯ ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ವಿಶ್ರಾಂತಿ ತೆಗೆದುಕೊಳ್ಳಲಿದ್ದು, ಮದುವೆಯ ಕಾರಣ ಕೆಎಲ್ ರಾಹುಲ್ ಸರಣಿಯಿಂದ ಹೊರಗುಳಿಯಲಿದ್ದಾರೆ.

ಗಾಯಗೊಂಡಿರುವ ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಟಿ20 ಸರಣಿಯಲ್ಲಿ ಆಡುವ ಸಾಧ್ಯತೆ ಇಲ್ಲ. ಆದರೆ, ಎಲ್ಲಾ ಆಟಗಾರರು ಏಕದಿನ ಸರಣಿಗೆ ತಂಡಕ್ಕೆ ಮರಳಲು ಸಿದ್ಧವಾಗಿದ್ದಾರೆ. ರಿಷಬ್ ಪಂತ್ ಕೂಡ ಟಿ20 ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇಲ್ಲ ಎನ್ನಲಾಗಿದ್ದು, ಸಂಜು ಸ್ಯಾಮ್ಸನ್ ಅಥವಾ ಇಶಾನ್‌ ಕಿಶನ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಮಯಾಂಕ್ ಬೇಡ, ಭಾರತದ ಈ ವೇಗಿಯನ್ನು ಸನ್‌ರೈಸರ್ಸ್ ನಾಯಕನನ್ನಾಗಿ ಘೋಷಿಸಲಿ: ಆಕಾಶ್ ಚೋಪ್ರ

ಫಿಟ್ನೆಸ್ ಪರೀಕ್ಷೆ ಎದುರಿಸಲಿರುವ ಬುಮ್ರಾ, ಜಡೇಜಾ

ಫಿಟ್ನೆಸ್ ಪರೀಕ್ಷೆ ಎದುರಿಸಲಿರುವ ಬುಮ್ರಾ, ಜಡೇಜಾ

ರೋಹಿತ್ ಶರ್ಮಾ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ, ಗಾಯಗೊಂಡಿರುವ ಆಟಗಾರರ ವಿಚಾರದಲ್ಲಿ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ. ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಎನ್‌ಸಿಎಗೆ ಮರಳಿದ್ದಾರೆ. ಅವರು ಫಿಟ್ನೆಸ್ ಪರೀಕ್ಷೆ ಎದುರಿಸಲಿದ್ದು, ತೇರ್ಗಡೆಯಾದರೆ ಮಾತ್ರ ಆಯ್ಕೆಗೆ ಪರಿಗಣಿಸಲಾಗುತ್ತದೆ.

2023ರಲ್ಲಿ ಏಕದಿನ ವಿಶ್ವಕಪ್‌ ಇರುವುದರಿಂದ ಟಿ20 ಸರಣಿಗಿಂತ ಏಕದಿನ ಪಂದ್ಯಗಳತ್ತ ಬಿಸಿಸಿಐ ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಟಿ20 ಸರಣಿಯಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ, ಅವರನ್ನು ಏಕದಿನ ಕ್ರಿಕೆಟ್‌ನಲ್ಲಿ ಹೆಚ್ಚಿನದಾಗಿ ತೊಡಗಿಸಿಕೊಳ್ಳುವಂತೆ ಕೇಳಿದೆ.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಕೂಡ ಮುಖ್ಯ

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಕೂಡ ಮುಖ್ಯ

ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-0 ಅಂತರದಲ್ಲಿ ಜಯ ಸಾಧಿಸುವ ಮೂಲಕ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ ಸುಲಭವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿ ಭಾರತಕ್ಕೆ ಈಗ ಮುಖ್ಯವಾಗಿದೆ.

4 ಪಂದ್ಯಗಳ ಸರಣಿಯಲ್ಲಿ ಭಾರತ ಕನಿಷ್ಠ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆಯಲಿದೆ. 2023ರ ಫೆಬ್ರವರಿಯಲ್ಲಿ ಸರಣಿ ಆರಂಭವಾಗಲಿದ್ದು, ಹಲವು ಹಿರಿಯ ಆಟಗಾರರ ಫಿಟ್ನೆಸ್‌ ಬಗ್ಗೆ ಬಿಸಿಸಿಐ ಹೆಚ್ಚಿನ ಕಾಳಜಿ ವಹಿಸುತ್ತಿದೆ.

ರಿಷಬ್ ಪಂತ್‌ ಆಯ್ಕೆ ಅನುಮಾನ

ರಿಷಬ್ ಪಂತ್‌ ಆಯ್ಕೆ ಅನುಮಾನ

ಟಿ20 ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ರಿಷಬ್ ಪಂತ್ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ತಂಡದಲ್ಲಿ ಸ್ಥಾನ ಪಡೆಯುವುದು ಅನುಮಾನವಾಗಿದೆ. ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯಲ್ಲಿ ದ್ವಿಶತಕ ಸಿಡಿಸುವ ಮೂಲಕ ಇಶಾನ್ ಕಿಶನ್ ಆಯ್ಕೆದಾರರ ಗಮನ ಸೆಳೆದಿದ್ದಾರೆ. ರಣಜಿಯಲ್ಲಿ ಕೂಡ ಇಶಾನ್ ಕಿಶನ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ರಣಜಿ ಟ್ರೋಫಿಯಲ್ಲಿ ಸಂಜು ಸ್ಯಾಮ್ಸನ್ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು, ಆಯ್ಕೆದಾರರು ಇವರಿಬ್ಬರನ್ನು ಮೊದಲ ಆಯ್ಕೆಯಾಗಿ ಪರಿಗಣಿಸುವ ಸಾಧ್ಯತೆ ಇದೆ.

For Quick Alerts
ALLOW NOTIFICATIONS
For Daily Alerts
Story first published: Monday, December 26, 2022, 11:07 [IST]
Other articles published on Dec 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X