IND vs SL: ವಿರಾಟ್ ಕೊಹ್ಲಿಯ 45ನೇ ಏಕದಿನ ಶತಕಕ್ಕೂ ಮುನ್ನ ಬ್ರಿಯಾನ್ ಲಾರಾ ಹಾಕಿದ್ದ ಪೋಸ್ಟ್ ವೈರಲ್

ಮಂಗಳವಾರ, ಜನವರಿ 10ರಂದು ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ 73ನೇ ಅಂತಾರಾಷ್ಟ್ರೀಯ ಶತಕ ಬಾರಿಸಿದರು.
ಇನ್ನು ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 67 ರನ್‌ಗಳ ಅಮೋಘ ಗೆಲುವು ದಾಖಲಿಸಿತು ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿತು.
ಆತಿಥೇಯ ಭಾರತ ತಂಡದ ಬ್ಯಾಟ್ಸ್‌ಮನ್‌ಗಳು ಶ್ರೀಲಂಕಾ ವಿರುದ್ಧದ ಆರಂಭದಿಂದಲೂ ಆತ್ಮವಿಶ್ವಾಸದ ಬ್ಯಾಟಿಂಗ್ ಮಾಡಿದರು. ಇನ್ನು ವಿರಾಟ್ ಕೊಹ್ಲಿ ತಮ್ಮ ಶತಕದ ಹಾದಿಯಲ್ಲಿ 52 ಮತ್ತು ಇನ್ನೊಂದು 81 ರನ್ ಗಳಿಸಿದ್ದಾಗ, ಎರಡು ಜೀವದಾನಗಳನ್ನು ಪಡೆದರು.
ನಂತರ ಮಾಜಿ ನಾಯಕ ವಿರಾಟ್ ಕೊಹ್ಲಿ 80 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದರು ಮತ್ತು ಅಂತಿಮವಾಗಿ 87 ಎಸೆತಗಳಲ್ಲಿ 113 ರನ್ ಗಳಿಸಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು ಒಂದು ಸಿಕ್ಸರ್ ಒಳಗೊಂಡಿದ್ದವು.

ವಿರಾಟ್ ಕೊಹ್ಲಿ ಕ್ರೀಸ್‌ಗೆ ಬರುವುದಕ್ಕೂ ಮುನ್ನ ಇನ್ನಿಂಗ್ಸ್ ಆರಂಭಿಸಿದ್ದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್ ಜೊತೆಯಾಟಕ್ಕೆ 143 ರನ್ ಸೇರಿಸಿ, ತಂಡದ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿದರು.
ರೋಹಿತ್ ಶರ್ಮಾ 83 ರನ್ ಗಳಿಸಿದರೆ, ಶುಭಮನ್ ಗಿಲ್ 70 ರನ್ ಗಳಿಸಿದರು. ಹೀಗಾಗಿ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ನೋಡಲು ಅಭಿಮಾನಿಗಳು ಬಹಳ ಹೊತ್ತು ಕಾಯಬೇಕಾಯಿತು.
ಭಾರತದ ಸ್ಟಾರ್ ಬ್ಯಾಟರ್‌ನ ಬ್ಯಾಟಿಂಗ್ ನೋಡಲು ಕುತೂಹಲದಿಂದ ಕಾಯುತ್ತಿದ್ದ ಭಾರತೀಯ ಅಭಿಮಾನಿಗಳು ಮಾತ್ರವಲ್ಲ, ವೆಸ್ಟ್ ಇಂಡೀಸ್ ದಿಗ್ಗಜ ಬ್ರಿಯಾನ್ ಲಾರಾ ಕೂಡ ಯಾವಾಗ ಕೊಹ್ಲಿ ಕ್ರೀಸ್‌ಗೆ ಬರುತ್ತಾರೆ ಎಂದು ಕಾಯುತ್ತಿದ್ದರು.
"ನಾನು ಈ ವ್ಯಕ್ತಿಯ ಬ್ಯಾಟಿಂಗ್ ವೀಕ್ಷಿಸಲು ಕಾಯುತ್ತೇನೆ ಎಂದು ನಾನು ಭಾವಿಸುತ್ತೇನೆ" ಎಂದು ಬ್ರಿಯಾನ್ ಲಾರಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್‌ಗೂ ಮುನ್ನ ಡಗೌಟ್‌ನಲ್ಲಿ ಕುಳಿತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ಇನ್ನು ವಿರಾಟ್ ಕೊಹ್ಲಿ ತಮ್ಮ 45ನೇ ಏಕದಿನ ಶತಕ ಬಾರಿಸಿದಾಗ ಬ್ರಿಯಾನ್ ಲಾರಾ ಮತ್ತೊಂದು ಇನ್‌ಸ್ಟಾಗ್ರಾಮ್ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ಮಾಜಿ ದಿಗ್ಗಜ ಕ್ರಿಕೆಟಿಗನು ವಿರಾಟ್ ಕೊಹ್ಲಿಯ ಬ್ಯಾಟಿಂಗ್ ವೀಕ್ಷಿಸಲು ಉತ್ಸುಕರಾಗಿದ್ದರು ಎಂದು ಹೇಳಬಹುದು.
ಶುಕ್ರವಾರ, ಜನವರಿ 12ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಎದುರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications