ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ ಟೆಸ್ಟ್: ಬುಮ್ರಾ ಪಡೆಯಲಿರುವ ವಿಕೆಟ್ ಸಂಖ್ಯೆ ನೋಡಿ ಅಚ್ಚರಿ ಪಡಬೇಡಿ ಎಂದ ಗವಾಸ್ಕರ್

IND vs SL: Dont be surprised if you see 2 five wickets hauls from Bumrah in test series says Gavaskar

ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲುವುದರ ಮೂಲಕ ವೈಟ್ ವಾಷ್ ಸಾಧನೆ ಮಾಡಿದ್ದ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ವಿರುದ್ಧದ ಟಿ ಟ್ವೆಂಟಿ ಹಾಗೂ ಟೆಸ್ಟ್ ಸರಣಿಗಳಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಇನ್ನು ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆದಿದ್ದು, ಈ ಸರಣಿಯಲ್ಲಿನ ಎಲ್ಲಾ ಪಂದ್ಯಗಳನ್ನು ಗೆದ್ದ ಟೀಮ್ ಇಂಡಿಯಾ ಮತ್ತೊಂದು ವೈಟ್ ವಾಷ್ ಸಾಧನೆ ಮಾಡುವುದರ ಮೂಲಕ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ.

ಅತ್ತ ಭಾರತ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯನ್ನು ಕೈಚೆಲ್ಲಿರುವ ಶ್ರೀಲಂಕಾ ಇದೀಗ ಬಲಿಷ್ಠ ಟೀಮ್ ಇಂಡಿಯಾವನ್ನು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎದುರಿಸುತ್ತಿದ್ದು, ಈ ಸರಣಿಯಲ್ಲಿ ಜಯ ಸಾಧಿಸುವುದರ ಮೂಲಕ ಸೋಲಿನ ಮುಖಭಂಗದಿಂದ ಪಾರಾಗಬೇಕಿದೆ. ಇನ್ನು ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಮಾರ್ಚ್ 4ರಿಂದ ಆರಂಭವಾಗಲಿದ್ದು ಮೊಹಾಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ಭಾರತ vs ಶ್ರೀಲಂಕಾ: ಮೂವರಲ್ಲಿ ಯಾರನ್ನು ಆರಿಸುತ್ತಾರೆ ರೋಹಿತ್? ರೋಹಿತ್‌ಗೆ ತಲೆನೋವಾದ ಆ ಮೂವರು!ಭಾರತ vs ಶ್ರೀಲಂಕಾ: ಮೂವರಲ್ಲಿ ಯಾರನ್ನು ಆರಿಸುತ್ತಾರೆ ರೋಹಿತ್? ರೋಹಿತ್‌ಗೆ ತಲೆನೋವಾದ ಆ ಮೂವರು!

ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ಸಾಕಷ್ಟು ವಿಶೇಷತೆಗಳನ್ನು ಹೊಂದಿದ್ದು, ರೋಹಿತ್ ಶರ್ಮಾ ಭಾರತ ಟೆಸ್ಟ್ ತಂಡದ ಪೂರ್ಣಾವಧಿ ನಾಯಕನಾಗಿ ಕಣಕ್ಕಿಳಿಯಲಿರುವ ಪ್ರಥಮ ಟೆಸ್ಟ್ ಪಂದ್ಯ ಇದಾಗಿದೆ ಹಾಗೂ ವಿರಾಟ್ ಕೊಹ್ಲಿ ಆಡಲಿರುವ ನೂರನೇ ಟೆಸ್ಟ್ ಪಂದ್ಯ ಕೂಡ ಇದಾಗಿದೆ. ಹೀಗೆ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿರುವ ಈ ಟೆಸ್ಟ್ ಪಂದ್ಯದ ಕುರಿತು ಈಗಾಗಲೇ ಹಲವಾರು ಮಾಜಿ ಕ್ರಿಕೆಟಿಗರು ಮಾತನಾಡಿದ್ದು, ಸದ್ಯ ಭಾರತದ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಕೂಡ ಮಾತನಾಡಿ ಜಸ್ಪ್ರೀತ್ ಬುಮ್ರಾ ಈ ಸರಣಿಯಲ್ಲಿ 2 ಬಾರಿ 5 ವಿಕೆಟ್ ಗೊಂಚಲು ಪಡೆದರೂ ಅಚ್ಚರಿಪಡಬೇಕಿಲ್ಲ ಎಂದಿದ್ದಾರೆ.

ಎಂತಹ ಸಂದರ್ಭದಲ್ಲಿ ಬೇಕಾದರೂ ವಿಕೆಟ್ ಪಡೆಯಬಲ್ಲ ಸಾಮರ್ಥ್ಯವನ್ನು ಹೊಂದಿರುವ ಜಸ್ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ನಂತರ ವಿಕೆಟ್ ಪಡೆಯುವ ಹಸಿವನ್ನು ಹೊಂದಿದ್ದು, ಶ್ರೀಲಂಕಾ ವಿರುದ್ಧದ ಈ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2 ಬಾರಿ 5 ವಿಕೆಟ್ ಗೊಂಚಲು ಪಡೆದರೂ ಯಾವುದೇ ಅಚ್ಚರಿ ಪಡಬೇಕಿಲ್ಲ ಎಂದು ಸುನಿಲ್ ಗವಾಸ್ಕರ್ ಊಹೆಯೊಂದನ್ನು ಮಾಡಿದ್ದಾರೆ.

ರಣಜಿ ಟ್ರೋಫಿ: ಕರ್ನಾಟಕದ ಪರ ಅಬ್ಬರಿಸಿ, ಶತಕ ಸಿಡಿಸಿ ಫಾರ್ಮ್‌ಗೆ ಮರಳಿದ ದೇವದತ್ ಪಡಿಕ್ಕಲ್ರಣಜಿ ಟ್ರೋಫಿ: ಕರ್ನಾಟಕದ ಪರ ಅಬ್ಬರಿಸಿ, ಶತಕ ಸಿಡಿಸಿ ಫಾರ್ಮ್‌ಗೆ ಮರಳಿದ ದೇವದತ್ ಪಡಿಕ್ಕಲ್

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್ (ಫಿಟ್‌ನೆಸ್ ‌ಆಧಾರದ ಮೇಲೆ), ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್, ಜೆ ಬುಮ್ರಾ, ಎಂ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್

ಟೆಸ್ಟ್ ಗೂ ಮುಂಚೆ ಕೊಹ್ಲಿಗೆ ಸಿಕ್ತು ಸ್ಪೆಷಲ್ ಕ್ಯಾಪ್ ದ್ರಾವಿಡ್ ವಿರಾಟ್ ಮಾತುಕತೆ ಸೂಪರ್ | Oneindia Kannada

ಟೆಸ್ಟ್ ಸರಣಿಗೆ ಪ್ರಕಟವಾಗಿರುವ ಶ್ರೀಲಂಕಾ ತಂಡ: ದಿಮುತ್ ಕರುಣಾರತ್ನೆ (ನಾಯಕ), ಪಾತುಮ್ ನಿಸ್ಸಾಂಕ, ಲಹಿರು ತಿರಿಮನ್ನೆ, ಧನಂಜಯ ಡಿ ಸಿಲ್ವಾ (ಉಪನಾಯಕ), ಕುಸಾಲ್ ಮೆಂಡಿಸ್ (ಫಿಟ್‌ನೆಸ್‌ ಆಧಾರದ ಮೇಲೆ), ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಾಂಡಿಮಲ್, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ, ಚಮಿಕಾ ಕರುಣಾರತ್ನೆ, ಲಹಿರು ಎಫ್‌ಕ್ ಕುಮಾರ, ಸುರಂಗ ಕುಮಾರ, ಸುರಂಗ , ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಲಸಿತ್ ಎಂಬುಲ್ದೇನಿಯ.

Story first published: Friday, March 4, 2022, 9:59 [IST]
Other articles published on Mar 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X