Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಶ್ರೀಲಂಕಾ: ಬ್ಯಾಟಿಂಗ್‌, ಬೌಲಿಂಗ್‌ ಎರಡರಲ್ಲೂ ಮಿಂಚಿ ಇನ್ನಿಂಗ್ಸ್ ಗೆಲುವು ದಾಖಲಿಸಿದ ಭಾರತ

IND vs SL First Test: India beat Sri Lanka by an innings and 222 runs

ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಮಾರ್ಚ್ 4ರಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾದ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಮುಕ್ತಾಯಗೊಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರೋಹಿತ್ ಶರ್ಮಾ ಪಡೆ ಮೊದಲನೇ ಇನ್ನಿಂಗ್ಸ್‌ನಲ್ಲಿ 8 ವಿಕೆಟ್ ನಷ್ಟಕ್ಕೆ 574 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಮೊದಲನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಅಜೇಯ 175 ರನ್, ರಿಷಭ್ ಪಂತ್ 96 ರನ್, ರವಿಚಂದ್ರನ್ ಅಶ್ವಿನ್ 61 ರನ್, ಹನುಮ ವಿಹಾರಿ 58 ರನ್ ಹಾಗೂ ವಿರಾಟ್ ಕೊಹ್ಲಿ 45 ರನ್ ಗಳಿಸಿ ಮಿಂಚಿದರು. ಹೀಗೆ ರವೀಂದ್ರ ಜಡೇಜಾ ಅತ್ಯಮೋಘ ಬ್ಯಾಟಿಂಗ್‌ನೊಂದಿಗೆ 574 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿದ ಟೀಮ್ ಇಂಡಿಯಾ ಎರಡನೇ ದಿನದಾಟದಂದು ಡಿಕ್ಲೇರ್ ಮಾಡಿಕೊಂಡಿತು. ಹೀಗೆ ಟೀಮ್ ಇಂಡಿಯಾ ವಿರುದ್ಧ ಬೌಲಿಂಗ್‌ನಲ್ಲಿ ಮಂಕಾದ ಶ್ರೀಲಂಕಾ ಮೊದಲನೇ ಇನ್ನಿಂಗ್ಸ್‌ನ ಬ್ಯಾಟಿಂಗ್‌ನಲ್ಲೂ ಮಕಾಡೆ ಮಲಗಿತು. ಮೊದಲ ಇನ್ನಿಂಗ್ಸ್‌ನಲ್ಲಿ 174 ರನ್‌ಗಳಿಗೆ ಆಲ್ ಔಟ್ ಆದ ಶ್ರೀಲಂಕಾ 400 ರನ್‌ಗಳ ಹಿನ್ನಡೆಯೊಂದಿಗೆ ಫಾಲೋ ಆನ್ ನಿಯಮಕ್ಕೆ ಒಳಪಟ್ಟಿತು.

ಹೀಗೆ ಮೊದಲನೇ ಇನ್ನಿಂಗ್ಸ್‌ನಲ್ಲಿ ಕಳಪೆಯಾದ ಶ್ರೀಲಂಕಾ ಮೂರನೇ ದಿನದಾಟದಂದು ತನ್ನ ದ್ವಿತೀಯ ಇನ್ನಿಂಗ್ಸ್ ಆರಂಭಿಸಿ 178 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್‍ಗಳನ್ನು ಕಳೆದುಕೊಳ್ಳುವುದರ ಮೂಲಕ 222 ರನ್‌ಗಳ ಇನ್ನಿಂಗ್ಸ್ ಸೋಲನ್ನು ಅನುಭವಿಸಿದೆ. ಇತ್ತ ಪಂದ್ಯದ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಆಟಗಾರರು ಬೃಹತ್ ಗೆಲುವನ್ನು ದಾಖಲಿಸಿದ್ದಾರೆ. ಶ್ರೀಲಂಕಾದ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್‌ನಲ್ಲಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ತಲಾ 4 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರು.

ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಲಂಕಾ ಫ್ಲಾಪ್

ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಲಂಕಾ ಫ್ಲಾಪ್

ಭಾರತ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾದ ಈ ಹೀನಾಯ ಸೋಲಿಗೆ ಶ್ರೀಲಂಕಾದ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳೂ ಕಾರಣವೆನ್ನಬಹುದು. ಮೊದಲಿಗೆ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಶ್ರೀಲಂಕಾ ಬೌಲಿಂಗ್ ಪಡೆ ವಿಫಲವಾದರೆ, ನಂತರ ಎರಡೂ ಇನ್ನಿಂಗ್ಸ್‌ನಲ್ಲೂ ಬ್ಯಾಟಿಂಗ್ ಪಡೆ ನೀರಸ ಪ್ರದರ್ಶನ ನೀಡಿತು. ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿದ ಶ್ರೀಲಂಕಾ ಪಂದ್ಯದಲ್ಲಿ ಸಂಪೂರ್ಣವಾಗಿ ನೆಲಕಚ್ಚಿದೆ ಎಂದೇ ಹೇಳಬಹುದು.

ರವೀಂದ್ರ ಜಡೇಜಾ ಅಬ್ಬರ

ರವೀಂದ್ರ ಜಡೇಜಾ ಅಬ್ಬರ

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ರವೀಂದ್ರ ಜಡೇಜಾ ಅಕ್ಷರಶಃ ಅಬ್ಬರಿಸಿದ್ದಾರೆ. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೊದಲಿಗೆ ಬ್ಯಾಟಿಂಗ್‌ನಲ್ಲಿ ಅಜೇಯ 175 ರನ್ ಗಳಿಸಿದರೆ ನಂತರ ಶ್ರೀಲಂಕಾದ ಮೊದಲನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದು ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದಾರೆ. ಅತ್ತ ಮೊದಲ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಪಡೆದಿದ್ದ ರವಿಚಂದ್ರನ್ ಅಶ್ವಿನ್ ಈ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದಾರೆ.

ಜಡೇಜಾ ಡಬಲ್ ಸೆಂಚುರಿಗೆ ಅಡ್ಡಗಾಲಿಟ್ರಾ ರೋಹಿತ್?ಜಡೇಜಾ ಹೇಳಿದ್ದೇನು? | Oneindia Kannada
ಪ್ಲೇಯಿಂಗ್ ಇಲೆವೆನ್ಸ್

ಪ್ಲೇಯಿಂಗ್ ಇಲೆವೆನ್ಸ್

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ


ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ದಿಮುತ್ ಕರುಣಾರತ್ನೆ (ನಾಯಕ), ಲಹಿರು ತಿರಿಮನ್ನೆ, ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಸುರಂಗ ಲಕ್ಮಲ್, ವಿಶ್ವ ಫೆರ್ನಾಂಡೋ, ಲಸಿತ್ ಎಂಬುಲ್ದೇನಿಯ, ಲಹಿರು ಕುಮಾರ

Story first published: Monday, March 7, 2022, 9:50 [IST]
Other articles published on Mar 7, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+