IND vs SL 1st Test: ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11

ಟಿ20 ಸರಣಿಯನ್ನು ವೈಟ್ ವಾಶ್ ಮಾಡಿದ ಫಲಿತಾಂಶವನ್ನು ಟೆಸ್ಟ್ ಸರಣಿಯಲ್ಲೂ ಪುನರಾವರ್ತಿಸುವ ಆಶಯದೊಂದಿಗೆ, ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಮೊಹಾಲಿಯಲ್ಲಿ ಮೊದಲ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿದೆ. ಶುಕ್ರವಾರ (ಮಾ. 4) ನಡೆಯಲಿರುವ ಪಂದ್ಯದಲ್ಲಿ ಭಾರತ-ಶ್ರೀಲಂಕಾ ತಂಡಗಳು ಬಹಳ ಸಮಯದ ಬಳಿಕ ಟೆಸ್ಟ್ ಫಾರ್ಮೆಟ್‌ನಲ್ಲಿ ಮುಖಾಮುಖಿಯಾಗುತ್ತಿವೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಭಾರತ ಇದುವರೆಗೆ ಮೇಲುಗೈ ಸಾಧಿಸಿದೆ. ಉಭಯ ತಂಡಗಳು 44 ಟೆಸ್ಟ್‌ಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ ಗರಿಷ್ಠ 20 ಟೆಸ್ಟ್‌ಗಳಲ್ಲಿ ಗೆಲುವು ಸಾಧಿಸಿದ್ರೆ, ಶ್ರೀಲಂಕಾ 7 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ. ಇನ್ನುಳಿದ 17 ಟೆಸ್ಟ್ ಪಂದ್ಯಗಳು ಫಲಿತಾಂಶವಿಲ್ಲದೆ ಡ್ರಾದಲ್ಲಿ ಅಂತ್ಯಗೊಂಡಿವೆ. ತವರಿನಲ್ಲಿ ಭಾರತ 11 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ ಮತ್ತು ಶ್ರೀಲಂಕಾದಲ್ಲಿ 9 ಪಂದ್ಯಗಳನ್ನು ಗೆದ್ದಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಮೊದಲ ಟೆಸ್ಟ್ ಸರಣಿಯಲ್ಲಿ ಮುನ್ನಡೆಯುತ್ತಿರುವ ಟೀಂ ಇಂಡಿಯಾ ಈ ಸರಣಿಯನ್ನೂ ಗೆಲ್ಲುವ ವಿಶ್ವಾಸ ಹೊಂದಿದೆ. ದೀರ್ಘ ಸಮಯದ ನಂತರ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ರಹಾನೆ ಮತ್ತು ಪೂಜಾರ ನಿರ್ಗಮನ ಯುವ ಆಟಗಾರರಿಗೆ ಅವಕಾಶ ತಂದುಕೊಟ್ಟಿದೆ.
ಮಧ್ಯಮ ಕ್ರಮಾಂಕದಲ್ಲಿ ಹನುಮ ವಿಹಾರಿ, ಶ್ರೇಯಸ್ ಅಯ್ಯರ್ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, ಪ್ಲೇಯಿಂಗ್ ಇಲೆವೆನ್‌ನಲ್ಲಿ ಈ ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗಲಿದೆ. ಅದ್ರಲ್ಲೂ ಟೀಂ ಇಂಡಿಯಾ ಹನುಮ ವಿಹಾರಿಗೆ ಅವಕಾಶ ನೀಡಬಹುದು. ಮತ್ತೊಂದೆಡೆ, ಶ್ರೀಲಂಕಾ ವಿರುದ್ಧದ ಸರಣಿಯ ಆಟಗಾರ ಮತ್ತು ಚೊಚ್ಚಲ ಟೆಸ್ಟ್‌ನಲ್ಲಿ ಶತಕ ಸಿಡಿಸಿದ್ದ ಶ್ರೇಯಸ್ ಅಯ್ಯರ್ ಹೊರಗುಳಿಯಬೇಕಾಗಬಹುದು. ವಿಕೆಟ್ ಕೀಪಿಂಗ್ ಜವಾಬ್ದಾರಿ ಎಂದಿನಂತೆ ಪಂತ್ ಅವರದ್ದೇ ಆಗಿರುತ್ತದೆ. ಅದೇ ಸಮಯದಲ್ಲಿ ಜಡೇಜಾ ಮತ್ತು ಅಶ್ವಿನ್ ಜೋಡಿ ಮತ್ತೊಮ್ಮೆ ಮೈದಾನಕ್ಕಿಳಿಯಲಿದೆ. ಶಮಿ, ಬುಮ್ರಾ ಮತ್ತು ಸಿರಾಜ್ ವೇಗದ ಬೌಲರ್‌ಗಳ ವಿಭಾಗದಲ್ಲಿ ಆಡುವ ನಿರೀಕ್ಷೆ ಇದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ 11
ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಶುಭನನ್ ಗಿಲ್, ವಿರಾಟ್ ಕೊಹ್ಲಿ, ಹನುಮ ವಿಹಾರಿ, ರಿಷಭ್ ಪಂತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications