For Quick Alerts
ALLOW NOTIFICATIONS  
For Daily Alerts
 

IND vs SL 1st T20: ಮೊದಲ ಟಿ20 ಪಂದ್ಯಕ್ಕೆ ಆಡುವ 11ರ ಬಳಗ ಆಯ್ಕೆ ಮಾಡಿದ ವಾಸಿಂ ಜಾಫರ್

IND vs SL: Former Cricketer Wasim Jaffer Picks Indias Playing 11 For 1st T20 Against Sri Lanka

ಬಾಂಗ್ಲಾದೇಶ ವಿರುದ್ಧ ಏಕದಿನ ಮತ್ತು ಟೆಸ್ಟ್ ಸರಣಿಯ ಪ್ರವಾಸದ ನಂತರ ಭಾರತ ಕ್ರಿಕೆಟ್ ತಂಡವು ವೈಟ್ ಬಾಲ್ ಸರಣಿಗಾಗಿ ಶ್ರೀಲಂಕಾ ತಂಡಕ್ಕೆ ಆತಿಥ್ಯ ವಹಿಸಲು ಸಜ್ಜಾಗಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ವರ್ಷದ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದೆ. ಮೊದಲ ಟಿ20 ಪಂದ್ಯವು ಇಂದು (ಜನವರಿ 3, ಮಂಗಳವಾರ) ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ.

ಈ ಕಾರಣಕ್ಕಾಗಿ ಬಿಸಿಸಿಐ ಮತ್ತು ಭಾರತ ತಂಡವನ್ನು ಶ್ಲಾಘಿಸಿದ ಪಾಕಿಸ್ತಾನ ಮಾಜಿ ಕ್ರಿಕೆಟಿಗ

ಇದೇ ವೇಳೆ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಇತ್ತೀಚೆಗೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯಕ್ಕಾಗಿ ತಮ್ಮ ಭಾರತದ ಆಡುವ 11ರ ಬಳಗವನ್ನು ಆಯ್ಕೆ ಮಾಡಿದ್ದಾರೆ.

ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭ

ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭ

ವಾಸಿಂ ಜಾಫರ್ ಅವರು ಆಡುವ 11ರ ಬಳಗದಲ್ಲಿ ಆರಂಭಿಕ ಸ್ಥಾನಕ್ಕೆ ರುತುರಾಜ್ ಗಾಯಕ್ವಾಡ್ ಅವರಿಗಿಂತ ಮುಂಚಿತವಾಗಿ ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ಅವರನ್ನು ಹೆಸರಿಸಿದ್ದಾರೆ. ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ಸದ್ಯ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ ಮತ್ತು ಆಡುವ ಬಳಗದಲ್ಲಿರಲು ಅರ್ಹರಾಗಿದ್ದಾರೆ.

ನಂತರದ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ ಮತ್ತು ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮಾಡಲಿದ್ದಾರೆ. ವಿಶ್ವದ ನಂ.1 ಟಿ20 ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು 46.56 ಸರಾಸರಿಯಲ್ಲಿ 1164 ರನ್‌ಗಳೊಂದಿಗೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ 2022 ವರ್ಷವನ್ನು ಮುಗಿಸಿದರು.

ಹಾರ್ದಿಕ್ ಪಾಂಡ್ಯ ಅವರು 2022ರಲ್ಲಿ ಅದ್ಭುತ ವರ್ಷ

ಹಾರ್ದಿಕ್ ಪಾಂಡ್ಯ ಅವರು 2022ರಲ್ಲಿ ಅದ್ಭುತ ವರ್ಷ

ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಕಳೆದ ವರ್ಷವೂ ಉತ್ತಮ ಪ್ರದರ್ಶನ ನೀಡಿದ್ದರು, ಆರು ಪಂದ್ಯಗಳಲ್ಲಿ 179 ರನ್‌ಗಳನ್ನು ಬಾರಿಸಿದ್ದರು.

ಮತ್ತೊಂದೆಡೆ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಅವರು 2022ರಲ್ಲಿ ಅದ್ಭುತ ವರ್ಷವನ್ನು ಹೊಂದಿದ್ದರು. ಗುಜರಾತ್ ಟೈಟನ್ಸ್‌ನೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದ ನಂತರ ಅವರಲ್ಲಿ ಹೆಚ್ಚಿನ ತಪ್ಪು ಕಂಡುಬಂದಿಲ್ಲ.

ಆಲ್‌ರೌಂಡ್ ಪ್ರದರ್ಶನದಿಂದಾಗಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ

ಆಲ್‌ರೌಂಡ್ ಪ್ರದರ್ಶನದಿಂದಾಗಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ

ಹಾರ್ದಿಕ್ ಪಾಂಡ್ಯ ತಮ್ಮ ಆಲ್‌ರೌಂಡ್ ಪ್ರದರ್ಶನದಿಂದಾಗಿ ಅವರು ನಾಯಕತ್ವದ ಕರ್ತವ್ಯಗಳೊಂದಿಗೆ ಬಹುಮಾನ ಪಡೆದರು. ಹಾರ್ದಿಕ್ ಅವರು ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ನಾಯಕತ್ವ ವಹಿಸಿದ್ದ ಐದು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳಲ್ಲಿ ಗೆದ್ದು ಉತ್ತಮ ದಾಖಲೆ ಹೊಂದಿದ್ದಾರೆ.

ಮಾಜಿ ಆರಂಭಿಕ ಬ್ಯಾಟರ್ ವಾಸಿಂ ಜಾಫರ್ ಅವರು ನಂತರದ ಕ್ರಮಾಂಕವನ್ನು ದೀಪಕ್ ಹೂಡಾ, ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಅವರ ಆಯ್ಕೆ ಮಾಡಿದ್ದಾರೆ. ಅಲ್ಲದೆ, ಸ್ಪಿನ್ ಬೌಲಿಂಗ್ ಆಲ್‌ರೌಂಡರ್‌ಗಳಾಗಿ ಆಯ್ಕೆ ಮಾಡಿದರು.

ಹರ್ಷಲ್ ಪಟೇಲ್ ಮತ್ತು ಅರ್ಶ್‌ದೀಪ್ ಸಿಂಗ್ ಅವರು ಸ್ಪೆಷಲಿಸ್ಟ್ ವೇಗಿಗಳಾಗಿದ್ದರೆ, ಯುಜ್ವೇಂದ್ರ ಚಾಹಲ್ ಅವರನ್ನು ಮುಂಚೂಣಿಯ ಸ್ಪಿನ್ನರ್ ಎಂದು ಹೆಸರಿಸಿದ್ದಾರೆ. ಆದರೆ, ಬಲಗೈ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಈ ಪಂದ್ಯಕ್ಕಾಗಿ ವಾಸಿಂ ಜಾಫರ್ ಅವರ ಆಡುವ 11ರ ಬಳಗದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ.

ವಾಸಿಂ ಜಾಫರ್ ಆಡುವ 11ರ ಬಳಗ

ವಾಸಿಂ ಜಾಫರ್ ಆಡುವ 11ರ ಬಳಗ

ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್ ಮತ್ತು ಅರ್ಶ್‌ದೀಪ್ ಸಿಂಗ್.

Story first published: Tuesday, January 3, 2023, 10:20 [IST]
Other articles published on Jan 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+