IND vs SL: ಭಾರತ vs ಶ್ರೀಲಂಕಾ ಮೊದಲ ಏಕದಿನ ಪಂದ್ಯ; ಸಂಭಾವ್ಯ ಆಡುವ 11ರ ಬಳಗ
ಶುಕ್ರವಾರ, ಆಗಸ್ಟ್ 2ರಂದು ಕೊಲಂಬೊದ ಆರ್ ಪ್ರೇಮದಾಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಮತ್ತು ಪ್ರವಾಸಿ ಭಾರತ ತಂಡಗಳು ಮುಖಾಮುಖಿಯಾಗಲಿವೆ.
ಇದಕ್ಕೂ ಮುನ್ನ ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ 3-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಇದೀಗ ಏಕದಿನ ತಂಡವನ್ನು ಅನುಭವಿ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.

ಇನ್ನು 2023ರ ಏಕದಿನ ವಿಶ್ವಕಪ್ ನಂತರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅನುಭವಿ ಜೋಡಿಯು 50-ಓವರ್‌ಗಳ ಸ್ವರೂಪದ ಆಟಕ್ಕೆ ಹಿಂದಿರುಗಿತ್ತಿದ್ದಾರೆ. ಮತ್ತೊಬ್ಬ ಅನುಭವಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ಮುಂದುವರೆಸಲಾಗಿದೆ.
ಗೌತಮ್ ಗಂಭೀರ್ ಅವರು ಭಾರತ ತಂಡದ ನೂತನ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ, ತಮ್ಮ ಮೊದಲ ಟಿ20 ಸರಣಿ ಗೆದ್ದಿರುವ ಹುಮ್ಮಸ್ಸಿನಲ್ಲಿದ್ದಾರೆ. ಏಕದಿನ ಸರಣಿಯಲ್ಲೂ ಅದೇ ಪ್ರದರ್ಶನ ಮುಂದುವರೆಸುವ ವಿಶ್ವಾಸ ಹೊಂದಿದ್ದಾರೆ.

ಮತ್ತೊಂದೆಡೆ, 2022ರಿಂದ ಏಕದಿನ ಕ್ರಿಕೆಟ್ ಪಂದ್ಯಗಳನ್ನು ಆಡದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಕೂಡ ತಂಡಕ್ಕೆ ಹಿಂದಿರುಗಿದ್ದಾರೆ. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದ್ದ ಕೆಎಲ್ ರಾಹುಲ್ ಸಹ ವಾಪಸ್ಸಾಗಿದ್ದಾರೆ.
ಸದ್ಯ ಏಕದಿನ ಪಂದ್ಯಗಳಲ್ಲಿ ಕೆಎಲ್ ರಾಹುಲ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಕೆಎಲ್ ರಾಹುಲ್, ಹಿಂದಿರುಗಿರುವ ರಿಷಭ್ ಪಂತ್‌ಗೆ ಸ್ಪರ್ಧೆ ನೀಡುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಆಡುವ 11ರ ಬಳಗದಲ್ಲಿ ಇಬ್ಬರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲಕಾರಿಯಾಗಿದೆ.
ಶುಭ್ಮನ್ ಗಿಲ್ ಉಪನಾಯಕನಾಗಿರುವುದರಿಂದ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಮೈದಾನಕ್ಕಿಳಿಯಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಐದನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕ್ರೀಸ್‌ಗೆ ಆಗಮಿಸಬಹುದು.
ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದಿರುವ ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಆಲ್‌ರೌಂಡರ್ ಸ್ಥಾನ ತುಂಬಬಹುದು. ಇನ್ನು ವಾಷಿಂಗ್ಟನ್ ಸುಂದರ್‌ಗಿಂತ ಮೊದಲು ರಿಯಾನ್ ಪರಾಗ್ ಚೊಚ್ಚಲ ಪಂದ್ಯಕ್ಕೆ ಅಣಿಯಾಗಬಹುದು.
ಮತ್ತೊಂದೆಡೆ, ಟಿ20 ಸರಣಿಯಲ್ಲಿ ಕ್ಲೀನ್ ಸ್ವೀಪ್ ಮುಖಭಂಗ ಅನುಭವಿಸಿರುವ ಚರಿತ್ ಅಸಲಂಕಾ ಪಡೆ, ಏಕದಿನ ಸರಣಿಯಲ್ಲಿ ಅದ್ಭುತವಾಗಿ ಪುನರಾಗಮನ ಮಾಡಲು ಎದುರು ನೋಡುತ್ತಿದೆ. ಇದೀಗ ದಿಲ್ಶನ್ ಮಧುಶಂಕ ಮತ್ತು ಮತೀಶ ಪತಿರಾನ ಗಾಯಗೊಂಡು ಸರಣಿಯಿಂದ ಹೊರಬಿದ್ದಿರುವುದು ದೊಡ್ಡ ಹಿನ್ನಡೆಗೆ ಕಾರಣವಾಗಿದೆ.
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್, ಖಲೀಲ್ ಅಹ್ಮದ್.
ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಶ್ರೀಲಂಕಾದ ಆಡುವ 11ರ ಬಳಗ
ಪಾಥುಮ್ ನಿಸ್ಸಾಂಕ, ಅವಿಷ್ಕಾ ಫೆರ್ನಾಂಡೋ, ಕುಸಾಲ್ ಮೆಂಡೀಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ (ನಾಯಕ), ಜನಿತ್ ಲಿಯನಗೆ, ವನಿಂದು ಹಸರಂಗ, ದುನಿತ್ ವೆಲ್ಲಲಗೆ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಅಸಿತ ಫೆರ್ನಾಂಡೋ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications