IND vs SL: ಭಾರತ vs ಶ್ರೀಲಂಕಾ 3ನೇ ಏಕದಿನ ಪಂದ್ಯದ ಸಂಭಾವ್ಯ 11ರ ಬಳಗ, ಟಿವಿ & ಲೈವ್‌ಸ್ಟ್ರೀಮಿಂಗ್ ವಿವರ

ಭಾನುವಾರ, ಜನವರಿ 15ರಂದು ದ್ವೀಪರಾಷ್ಟ್ರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವನ್ನು ಭಾರತ ತಂಡ ಕೇರಳದ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎದುರಿಸಲಿದೆ.
ಈಗಾಗಲೇ ಗುವಾಹಟಿ ಮತ್ತು ಕೋಲ್ಕತ್ತಾದಲ್ಲಿ ನಡೆದ ಮೊದಲೆರಡು ಏಕದಿನ ಪಂದ್ಯಗಳನ್ನು ಕ್ರಮವಾಗಿ 67 ರನ್ ಮತ್ತು 4 ವಿಕೆಟ್‌ಗಳ ಅಂತರದಲ್ಲಿ ಗೆಲ್ಲುವ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ 2-0 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದ್ದು, ಮೂರನೇ ಪಂದ್ಯ ಔಪಚಾರಿಕವೆನಿಸಿದೆ.
ಶ್ರೀಲಂಕಾ ವಿರುದ್ಧ ರೋಹಿತ್ ಶರ್ಮಾ ಪಡೆ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದ್ದು, ಕೊನೆಯ ಪಂದ್ಯದ ಆಡುವ 11ರ ಬಳಗದಲ್ಲಿ ಕೆಲವು ಬದಲಾವಣೆ ಮಾಡಲಿದೆ. ಕಳೆದೆರಡು ಪಂದ್ಯದಲ್ಲಿ ಬೆಂಚ್ ಕಾಯಿಸಿದವರನ್ನು ಆಡಿಸಬಹುದು. ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಅರ್ಶ್‌ದೀಪ್ ಸಿಂಗ್ ಅವರಂತಹ ಯುವ ಆಟಗಾರರು ಅವಕಾಶ ಪಡೆಯಲಿದ್ದಾರೆ.

ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಆಡುವ ಸಾಧ್ಯತೆ
ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ ಅವರು ಮೂರನೇ ಪಂದ್ಯದಿಂದ ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಅಕ್ಷರ್ ಪಟೇಲ್ ಬದಲಿಗೆ ಆಯ್ಕೆ ಮಾಡಬಹುದು. ಭಾರತ ತಂಡದ ಅಂತಿಮ ಬದಲಾವಣೆಯಲ್ಲಿ ಮೊಹಮ್ಮದ್ ಶಮಿ ಬದಲಿಗೆ ಅರ್ಷದೀಪ್ ಸಿಂಗ್ ಅವಕಾಶ ಪಡೆಯಬಹುದು.
ಶ್ರೀಲಂಕಾ ವಿರುದ್ಧದ ಸರಣಿಯ ನಂತರ ಭಾರತ ತಂಡ ಜನವರಿ 18ರಂದು ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ಏಕದಿನ ಸರಣಿಗೆ ಸಜ್ಜಾಗಲಿದೆ. ಈ ನಡುವೆ ಕೇವಲ ಮೂರು ದಿನಗಳ ಅಂತರವಿದ್ದು, ಕಿವೀಸ್ ಪಡೆಯಿಂದ ಕಠಿಣ ಸ್ಪರ್ಧೆ ಎದುರಿಸಲಿದ್ದಾರೆ.

ಕೊನೆಯ ಪಂದ್ಯ ಗೆಲ್ಲಲು ಶ್ರೀಲಂಕಾ ಪಣ
ಮತ್ತೊಂದೆಡೆ, ಭಾರತ ಪ್ರವಾಸದಲ್ಲಿ ಟಿ20 ಮತ್ತು ಏಕದಿನ ಸರಣಿಯನ್ನು ಸೋತಿರುವ ಶ್ರೀಲಂಕಾ ತಂಡ ಬಲಿಷ್ಠ ಭಾರತದ ವಿರುದ್ಧ ಕೊನೆಯ ಪಂದ್ಯವನ್ನಾದರೂ ಗೆಲ್ಲುವ ಮೂಲಕ ಉತ್ತಮ ಮುಕ್ತಾಯದ ಮೇಲೆ ಕಣ್ಣಿಟ್ಟಿದ್ದಾರೆ. ಎದುರಾಳಿ ತಂಡದ ನಾಯಕ ದಸುನ್ ಶನಕ ತಂಡವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿದರೂ, ಸರಣಿ ಗೆಲ್ಲಲು ವಿಫಲರಾದರು.
2023 ಏಕದಿನ ವಿಶ್ವಕಪ್ ವರ್ಷವಾಗಿದ್ದು, ಭಾರತದಲ್ಲಿ ನಡೆಯುವ ಐಸಿಸಿ ಪಂದ್ಯಾವಳಿಗೆ ತಯಾರಾಗಲು ಎರಡು ತಂಡಗಳಿಗೆ ಈ ಸರಣಿ ಹೆಚ್ಚಿನ ಸಹಾಯ ಮಾಡಿದೆ.

ಭಾರತ vs ಶ್ರೀಲಂಕಾ 3ನೇ ಏಕದಿನ ಪಂದ್ಯದ ವಿವರ
ದಿನಾಂಕ: ಭಾರತ vs ಶ್ರೀಲಂಕಾ ನಡುವಿನ 3ನೇ ಏಕದಿನ ಪಂದ್ಯ ಜನವರಿ 15, ಭಾನುವಾರ ನಡೆಯಲಿದೆ.
ಸ್ಥಳ: ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ.
3ನೇ ಪಂದ್ಯದ ಸಮಯ: ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಪ್ರಾರಂಭ, ಪಂದ್ಯದ ಟಾಸ್ ಮಧ್ಯಾಹ್ನ 1 ಗಂಟೆಗೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್: ಭಾರತ vs ಶ್ರೀಲಂಕಾ ನಡುವಿನ 3ನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್ ಮತ್ತು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಲೈವ್ ಆಗಿ ವೀಕ್ಷಿಸಬಹುದು.

ಭಾರತ vs ಶ್ರೀಲಂಕಾ 3ನೇ ಏಕದಿನ ಪಂದ್ಯದ ಸಂಭಾವ್ಯ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ಶ್ರೀಲಂಕಾ: ದಸುನ್ ಶನಕ (ನಾಯಕ), ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಅವಿಷ್ಕಾ ಫೆರ್ನಾಂಡೋ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ನುವಾನಿಡು ಫೆರ್ನಾಂಡೋ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications