IND vs SL ODI Series: ಭಾರತ vs ಶ್ರೀಲಂಕಾ ಏಕದಿನ ಸರಣಿ ವೇಳಾಪಟ್ಟಿ, ತಂಡಗಳು, ಲೈವ್‌ಸ್ಟ್ರೀಮಿಂಗ್ ವಿವರ

ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮುಗಿದ ನಂತರ, ಇದೀಗ ಎಲ್ಲರ ಕಣ್ಣುಗಳು ಮೂರು ಪಂದ್ಯಗಳ ಏಕದಿನ ಸರಣಿಯ ಮೇಲೆ ನೆಟ್ಟಿವೆ.
ಇದೇ 2023ರಲ್ಲಿ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್‌ಗೆ ಪೂರ್ಣ ಆತಿಥ್ಯ ವಹಿಸಲು ಭಾರತ ತಂಡ ಸಜ್ಜಾಗಿರುವುದರಿಂದ, ಈಗ ಗಮನವು 50 ಓವರ್‌ಗಳ ಸ್ವರೂಪದತ್ತ ಹರಿಯುತ್ತಿದೆ.
ಗಾಯದಿಂದ ಚೇತರಿಸಿಕೊಂಡಿರುವ ನಾಯಕ ರೋಹಿತ್ ಶರ್ಮಾ ಅವರು ಶ್ರೀಲಂಕಾ ತಂಡದ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಗಾಗಿ ಭಾರತ ತಂಡವನ್ನು ಮುನ್ನಡೆಸಲು ಆಟಕ್ಕೆ ಮರಳಲಿದ್ದಾರೆ. ರೋಹಿತ್ ಶರ್ಮಾ ಜೊತೆಗೆ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದ ನಂತರ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಆರು ತಿಂಗಳ ನಂತರ ವೇಗಿ ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರು ಹಿಂದಿರುಗಲಿದ್ದಾರೆ.
ಏಕದಿನ ಸರಣಿಯ ಮೊದಲ ಪಂದ್ಯ ಜನವರಿ 10ರಂದು ಗುವಾಹಟಿಯಲ್ಲಿ ನಡೆಲಿದ್ದು, ನಂತರ ಮುಂದಿನ ಎರಡು ಪಂದ್ಯಗಳು ಕ್ರಮವಾಗಿ ಜನವರಿ 12 ಮತ್ತು 15ರಂದು ಕೋಲ್ಕತ್ತಾ ಮತ್ತು ತಿರುವನಂತಪುರಂನಲ್ಲಿ ನಡೆಯಲಿದೆ.

ಕೊನೆಯದಾಗಿ ಜುಲೈ 2021ರಲ್ಲಿ ಶ್ರೀಲಂಕಾ ವಿರುದ್ಧ ಏಕದಿನ ಸರಣಿ
ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಅನುಭವಿ ಆಟಗಾರರ ಅನುಪಸ್ಥಿತಿಯ ನಡುವೆಯೂ, ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತದ ತಂಡ ಏಷ್ಯಾ ಕಪ್ ಚಾಂಪಿಯನ್ಸ್ ಶ್ರೀಲಂಕಾ ವಿರುದ್ಧ ಸರಣಿಯನ್ನು 2-1 ಅಂತರದಿಂದ ಗೆದ್ದಿತು. ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ 91 ರನ್‌ಗಳ ಪ್ರಚಂಡ ಗೆಲುವು ಸಾಧಿಸಿತು.
ಇನ್ನು ಭಾರತ ತಂಡವು ಕೊನೆಯದಾಗಿ ಜುಲೈ 2021ರಲ್ಲಿ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಆಡಿದೆ. ದ್ವೀಪ ರಾಷ್ಟ್ರದಲ್ಲಿ ಶಿಖರ್ ಧವನ್ ನಾಯಕತ್ವದ ತಂಡ 2-1 ಅಂತರದಲ್ಲಿ ಗೆದ್ದುಕೊಂಡಿತ್ತು.

ಭಾರತ vs ಶ್ರೀಲಂಕಾ ಏಕದಿನ ಸರಣಿಯ ವೇಳಾಪಟ್ಟಿ
ಭಾರತ vs ಶ್ರೀಲಂಕಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲೈವ್ ಆಗಿ ವೀಕ್ಷಿಸಬಹುದು ಮತ್ತು Disney+ Hotstar ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಣೆ ಮಾಡಬಹುದು.
ಭಾರತ vs ಶ್ರೀಲಂಕಾ 1ನೇ ಏಕದಿನ ಪಂದ್ಯ- ಗುವಾಹಟಿ (ಜನವರಿ 10)
ಭಾರತ vs ಶ್ರೀಲಂಕಾ 2ನೇ ಏಕದಿನ ಪಂದ್ಯ- ಕೋಲ್ಕತ್ತಾ (ಜನವರಿ 12)
ಭಾರತ vs ಶ್ರೀಲಂಕಾ 3ನೇ ಏಕದಿನ ಪಂದ್ಯ- ತಿರುವನಂತಪುರಂ (ಜನವರಿ 15)

ಭಾರತ vs ಶ್ರೀಲಂಕಾ ಏಕದಿನ ಸರಣಿಯ ಪೂರ್ಣ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಅವಿಷ್ಕಾ ಫೆರ್ನಾಂಡೋ, ಅಶೆನ್ ಬಂಡಾರ, ನುವಾನಿಡು ಫೆರ್ನಾಂಡೋ, ದಸುನ್ ಶನಕ (ನಾಯಕ), ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಚಮಿಕಾ ಕರುಣಾರತ್ನೆ, ವನಿಂದು ಹಸರಂಗ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಜೆಫ್ರಿ ವಂಡರ್ಸೆ, ಪ್ರಮೋದ್ ಮದುಶನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications