For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ: ದ್ವಿತೀಯ ಟೆಸ್ಟ್ ಕೂಡ ಮೂರೇ ದಿನಕ್ಕೆ ಮುಕ್ತಾಯವಾಗುವತ್ತ; ಲೈವ್ ಸ್ಕೋರ್ ಇಲ್ಲಿದೆ

IND vs SL: India vs Sri Lanka Second test Day 3 live score

ಭಾರತ ಪ್ರವಾಸ ಕೈಗೊಂಡಿರುವ ಶ್ರೀಲಂಕಾ ಟೀಮ್ ಇಂಡಿಯಾ ಮೊದಲಿಗೆ ನಡೆದ ಟಿ ಟ್ವೆಂಟಿ ಸರಣಿಯ ಎಲ್ಲಾ ಪಂದ್ಯಗಳಲ್ಲಿಯೂ ಜಯ ಸೋಲುವುದರ ಮೂಲಕ ವೈಟ್‌ವಾಷ್ ಮುಖಭಂಗಕ್ಕೆ ಒಳಗಾಗಿದೆ. ಇತ್ತ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಸಾಲು ಸಾಲು ಸರಣಿಗಳಲ್ಲಿ ವೈಟ್‌ವಾಷ್ ಸಾಧನೆ ಮಾಡುವುದರ ಮೂಲಕ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಹೀಗೆ ಟಿ ಟ್ವೆಂಟಿ ಸರಣಿಯನ್ನು ಗೆದ್ದ ಟೀಮ್ ಇಂಡಿಯಾ ಸದ್ಯ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿಯೂ ಸಹ ವೈಟ್‌ವಾಷ್ ಬಳಿಯುವ ಸನಿಹದಲ್ಲಿದೆ. ಹೌದು, ಮೊದಲಿಗೆ ಇತ್ತಂಡಗಳ ನಡುವೆ ಮೊಹಾಲಿಯಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ 222 ರನ್‌ಗಳ ಇನ್ನಿಂಗ್ಸ್ ಜಯ ಸಾಧಿಸಿದ ಟೀಮ್ ಇಂಡಿಯಾ ಸದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದ್ವಿತೀಯ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ಇನ್ನು ಈ ಪಂದ್ಯ ಹಗಲು ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿದ್ದು, ಇಂದು ( ಮಾರ್ಚ್ 14 ) ಈ ಪಂದ್ಯದ ಮೂರನೇ ದಿನದಾಟ ಆರಂಭವಾಗಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ 252 ರನ್‌ಗಳಿಗೆ ಆಲ್ಔಟ್ ಆಯಿತು. ಹಾಗೂ ಶ್ರೀಲಂಕಾ ಮೊದಲನೇ ಇನ್ನಿಂಗ್ಸ್‌ನಲ್ಲಿ 109 ರನ್‌ಗಳಿಗೆ ಆಲ್ಔಟ್ ಆಗುವುದರ ಮೂಲಕ 143 ರನ್‌ಗಳ ಹಿನ್ನಡೆಯನ್ನು ಅನುಭವಿಸಿತು. ಇತ್ತ ಮೊದಲನೇ ಇನ್ನಿಂಗ್ಸ್‌ನಲ್ಲಿ ಸಾಮಾನ್ಯ ಮೊತ್ತ ದಾಖಲಿಸಿದರೂ ಮುನ್ನಡೆಯನ್ನು ಕಾಯ್ದುಕೊಂಡ ಟೀಮ್ ಇಂಡಿಯಾ ಶ್ರೀಲಂಕಾ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕುವ ಮೂಲಕ ಎರಡನೇ ಇನ್ನಿಂಗ್ಸ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 303 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡು ಶ್ರೀಲಂಕಾಗೆ ಗೆಲ್ಲಲು 446 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ. ಇತ್ತ ಎರಡನೇ ದಿನದಾಟದಂತ್ಯಕ್ಕೆ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 1 ವಿಕೆಟ್ ಕಳೆದುಕೊಂಡಿರುವ ಶ್ರೀಲಂಕಾ 28 ರನ್ ಗಳಿಸಿದ್ದು ಗೆಲ್ಲಲು ಇನ್ನೂ 419 ರನ್ ಬಾರಿಸಲೇಬೇಕಾದ ಅನಿವಾರ್ಯತೆಯಲ್ಲಿದೆ. ಎರಡನೇ ಇನ್ನಿಂಗ್ಸ್ ಆರಂಭಿಸಿದ ಶ್ರೀಲಂಕಾ ಆರಂಭದಲ್ಲಿಯೇ ಲಹಿರು ತಿರಿಮನ್ನೆ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ನಂತರ ಮೂರನೇ ಕ್ರಮಾಂಕದಲ್ಲಿ ಕುಸಾಲ್ ಮೆಂಡಿಸ್ ಕಣಕ್ಕಿಳಿದಿದ್ದು ಅಜೇಯ ರನ್ ಗಳಿಸಿದ್ದಾರೆ ಹಾಗೂ ಮತ್ತೋರ್ವ ಆರಂಭಿಕ ಆಟಗಾರ ದಿಮುತ್ ಕರುಣರತ್ನೆ ಅಜೇಯ 10 ರನ್ ಗಳಿಸಿದ್ದಾರೆ. ಈ ಮೂಲಕ ಈ ಜೋಡಿ 28 ರನ್‌ಗಳ ಜತೆಯಾಟವಾಡಿದ್ದು, ಮೂರನೇ ದಿನದಾಟದಲ್ಲಿ ವಿಕೆಟ್ ಕಾಯ್ದುಕೊಳ್ಳುತ್ತಾರಾ ಅಥವಾ ಶ್ರೀಲಂಕಾ ಮೊದಲನೇ ಇನ್ನಿಂಗ್ಸ್ ರೀತಿಯೇ ಈ ಇನ್ನಿಂಗ್ಸ್‌ನಲ್ಲಿಯೂ ವಿಕೆಟ್ ಕಳೆದಕೊಳ್ಳುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಇನ್ನು ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಮೊಹಾಲಿಯಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಮುಕ್ತಾಯಗೊಂಡಿತ್ತು. ಸದ್ಯ ಇತ್ತಂಡಗಳ ನಡುವಿನ ದ್ವಿತಿಯ ಟೆಸ್ಟ್ ಪಂದ್ಯ ಕೂಡ ಮೂರನೇ ದಿನವೇ ಮುಕ್ತಾಯವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು, ಟೀಮ್ ಇಂಡಿಯಾ ಬೌಲಿಂಗ್ ವಿಭಾಗ ಹಿಂದಿನ ಇನ್ನಿಂಗ್ಸ್‌ಗಳ ರೀತಿಯೇ ಬೌಲಿಂಗ್ ಮಾಡಿದರೆ ಪಂದ್ಯ ಮೂರೇ ದಿನಕ್ಕೆ ಖಚಿತವಾಗಿ ಮುಕ್ತಾಯಗೊಳ್ಳಲಿದೆ.

ಭಾರತ vs ಶ್ರೀಲಂಕಾ ದ್ವಿತೀಯ ಟೆಸ್ಟ್ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ.

1
51928

ಭಾರತ ಪ್ಲೇಯಿಂಗ್ ಇಲೆವೆನ್: ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ (ನಾಯಕ), ಹನುಮ ವಿಹಾರಿ, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ದಿಮುತ್ ಕರುಣಾರತ್ನೆ (ನಾಯಕ), ಲಹಿರು ತಿರಿಮನ್ನೆ, ಕುಸಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಸುರಂಗ ಲಕ್ಮಲ್, ಲಸಿತ್ ಎಂಬುಲ್ದೇನಿಯ, ವಿಶ್ವ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ

Story first published: Monday, March 14, 2022, 16:01 [IST]
Other articles published on Mar 14, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+