For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ: ಮಹತ್ವದ ಮೈಲುಗಲ್ಲು ನೆಡಲು ರೋಹಿತ್ ಶರ್ಮಾ ಸಜ್ಜು

Ind vs SL: Indian skipper Rohit Sharma set to play 400th international match

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದ್ದು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಹತ್ವದ ಮೈಲಿಗಲ್ಲೊಂದನ್ನು ನೆಡಲಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಪ್ರಕ್ರಿಯೆಗಾಗಿ ಮೈದಾನಕ್ಕಿಳಿಯುವ ಮೂಲಕ 400ಕ್ಕೂ ಅಧಿಕ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ 9ನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರವಾಗಲಿದ್ದಾರೆ.

ರೋಹಿತ್ ಶರ್ಮಾ ಭಾರತದ ಪರವಾಗಿ ಈವರೆಗೆ 44 ಟೆಸ್ಟ್ ಪಂದ್ಯಗಳನ್ನಾಡಿದ್ದು 230 ಏಕದಿನ ಮತ್ತು 125 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ಮೂಲಕ ಒಟದಟು 399 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ರೋಹಿತ್ ಇದೀಗ 400ಕ್ಕೂ ಅಧಿಕ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಭಾರತೀಯ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

ರೋಹಿತ್ ಶರ್ಮಾ 2007ರಲ್ಲಿ ಏಕದಿನ ಕ್ರಿಕೆಟ್‌ಗೆ ಭಾರತದ ಪರವಾಗಿ ಪದಾರ್ಪಣೆ ಮಾಡಿದ್ದರು. ಅದೇ ವರ್ಷ ಟಿ20 ಮಾದರಿಯಲ್ಲಿಯೂ ಭಾರತ ತಂಡವನ್ನು ರೋಹಿತ್ ಪ್ರತಿನಿಧಿಸಿದ್ದಾರೆ. ಆದರೆ ಆರಂಭೀಕ ವರ್ಷಗಳಲ್ಲಿ ರೋಹಿತ್ ಶರ್ಮಾ ಹೆಚ್ಚಿನ ಯಶಸ್ಸು ಸಾಧಿಸಲು ಸಾಧ್ಯವಾಗಿರಲಿಲ್ಲ. ಆದರೆ ಅದಾದ ಬಳಿಕ ಟೀಮ್ ಇಂಡಿಯಾದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡರು.

ಇನ್ನು ಭಾರತದ ಪರವಾಗಿ 400ಕ್ಕೂ ಅಧಿಕ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ಒಟ್ಟು 664 ಪಂದ್ಯಗಳನ್ನು ಆಡಿದ್ದರೆ ಎರಡನೇ ಸ್ಥಾನದಲ್ಲಿ ಎಂಎಸ್ ಧೋನಿ ಇದ್ದು 538 ಪಂದ್ಯಗಳನ್ನು ಆಡಿದ್ದಾರೆ. 509 ಪಂದ್ಯಗಳನ್ನಾಡಿರುವ ರಾಹುಲ್ ದ್ರಾವಿಡ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ವಿರಾಟ್ ಕೊಹ್ಲಿ 457 ಪಂದ್ಯಗಳನ್ನಾಡಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 433 ಪಂದ್ಯಗಳನ್ನಾಡಿರುವ ಮೊಹಮ್ಮದ್ ಅಜರುದ್ದೀನ್ ಐದನೇ ಸ್ಥಾನ, 424 ಪಂದ್ಯಗಳನ್ನಾಡಿರುವ ಸೌರವ್ ಗಂಗೂಲಿ 6ನೇ ಸ್ಥಾನದಲ್ಲಿದ್ದಾರೆ. 403 ಪಂದ್ಯಗಳನ್ನಾಡಿರುವ ಅನಿಲ್ ಕುಂಬ್ಳೆ 7ನೇ ಸ್ಥಾನದಲ್ಲಿದ್ದು ನಂತರದ ಸ್ಥಾನದಲ್ಲಿ 402 ಪಂದ್ಯಗಳನ್ನಾಡಿರುವ ಯುವರಾಜ್ ಸಿಂಗ್ ಇದ್ದಾರೆ. ಇದೀಗ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 9ನೇ ಆಟಗಾರನಾಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.

ಮೊದಲ ಟೆಸ್ಟ್ ಪಂದ್ಯ ಮೊಹಾಲಿಯಲ್ಲಿ ನಡೆದಿದ್ದು ಈ ಪಂದ್ಯವನ್ನು ಭಾರತ ಇನ್ನಿಂಗ್ಸ್ ಹಾಗೂ 222 ರನ್‌ಗಳ ಅಂತರದಿಂದ ಭರ್ಜರಿಯಾಗಿ ಗೆದ್ದುಕೊಂಡಿತ್ತು. ಈ ಪಂದ್ಯದಲ್ಲಿ ಭಾರತದ ಪರವಾಗಿ ಸರ್ವಾಂಗೀಣ ಪ್ರದರ್ಶನ ಬಮದಿದ್ದು ಆಲ್‌ರೌಂಡರ್ ರವೀಂದ್ರ ಜಡೇಜಾ 175 ರನ್ ಹಾಗೂ 9 ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.

ಇದೀಗ ಭಾರತ ಹಾಗೂ ಶ್ರಿಲಂಕಾ ತಂಡಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಈ ಪಂದ್ಯ ಅಹರ್ನಿಶಿಯಾಗಿ ನಡೆಯಲಿದೆ. ಮೊದಲ ಪಂದ್ಯವನ್ನು ಗೆದ್ದು ಉತ್ಸಾಹದಲ್ಲಿರುವ ಭಾರತ ವೈಟ್‌ವಾಶ್ ಮಾಡುವ ಗುರಿಯಿಟ್ಟುಕೊಂಡಿದ್ದರೆ ಸರಣಿಯಲ್ಲಿ ಒಂದಾದರೂ ಪಂದ್ಯವನ್ನು ಗೆದ್ದು ಮತ್ತೊಂದು ವೈಟ್‌ವಾಶ್‌ನಿಂದ ತಪ್ಪಿಸಿಕೊಳ್ಳಲು ಶ್ರೀಲಂಕಾ ಪಡೆ ಸರ್ವ ಪ್ರಯತ್ನ ನಡೆಸಲಿದೆ.

Story first published: Friday, March 11, 2022, 15:04 [IST]
Other articles published on Mar 11, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+