
ಸಂಜು ಸ್ಯಾಮ್ಸನ್ ಮತ್ತೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಜನವರಿ 3ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟಿ20 ಸರಣಿಗಾಗಿ ಸಂಜು ಸ್ಯಾಮ್ಸನ್ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅವರು ತಂಡಕ್ಕೆ ಆಯ್ಕೆಯಾಗಿದ್ದರು ಆಡುವ ಬಳಗದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದರು. ನಂತರ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯ ಒಂದು ಪಂದ್ಯದಲ್ಲಿ ಮಾತ್ರ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದರು, ನಂತರ ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಗೆ ಮತ್ತೆ ಅವರನ್ನು ತಂಡದಿಂದ ಕೈಬಿಡಲಾಯಿತು.
2022ರ ಟಿ20 ವಿಶ್ವಕಪ್ ತಂಡಕ್ಕೆ ಸಂಜು ಸ್ಯಾಮ್ಸನ್ ಆಯ್ಕೆಯಾಗಲಿಲ್ಲ, ಇದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದಾಗ ಅವರನ್ನು ಏಕದಿನ ಸರಣಿಗಾಗಿ ಭಾರತ ತಂಡಕ್ಕೆ ಆಯ್ಕೆ ಮಾಡುವ ಮೂಲಕ ಬಿಸಿಸಿಐ ಕಣ್ಣೊರಿಸುವ ತಂತ್ರ ಮಾಡಿತು.
ಇದೀಗ ಕೂಡ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್‌ರನ್ನು ಆಯ್ಕೆ ಮಾಡಿದ್ದು, ಏಕದಿನ ತಂಡಕ್ಕೆ ಆಯ್ಕೆ ಮಾಡಿಲ್ಲ. 2023ರಲ್ಲಿ ಏಕದಿನ ವಿಶ್ವಕಪ್‌ಗೆ ಮುನ್ನ ಸಂಜು ಸ್ಯಾಮ್ಸನ್‌ರನ್ನು ಕೈಬಿಟ್ಟಿರುವುದು ಬಿಸಿಸಿಐ ಮತ್ತೆ ಅವರನ್ನು ಕಡೆಗಣಿಸುವ ಸೂಚನೆ ನೀಡಿದೆ.

ಏಕದಿನ ವಿಶ್ವಕಪ್ ಇರುವಾಗ ಟಿ20 ತಂಡಕ್ಕೆ ಆಯ್ಕೆ
ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಸಂಜು ಸ್ಯಾಮ್ಸನ್‌ರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಿಲ್ಲ. ಅವರ ಆಯ್ಕೆ ಮಾಡದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದಾಗ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಯಿತು.
ವಿಶ್ವಕಪ್ ಮುಗಿದ ನಂತರ ಸಂಜು ಸ್ಯಾಮ್ಸನ್ ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಆಯ್ಕೆ ಮಾಡಲಾಯಿತು. ಆದರೆ, ಟಿ20 ಸರಣಿಯಲ್ಲಿ ಒಂದು ಪಂದ್ಯದಲ್ಲಿ ಕೂಡ ಅವರಿಗೆ ಆಡಲು ಅವಕಾಶ ಸಿಗಲಿಲ್ಲ, ನಂತರ ಏಕದಿನ ಸರಣಿಯ ಒಂದು ಪಂದ್ಯದಲ್ಲಿ ಮಾತ್ರ ಅವಕಾಶ ಪಡೆದರು. ಈಗ 2023ರ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಸಜ್ಜಾಗುತ್ತಿದ್ದು, ಈ ವೇಳೆಯಲ್ಲಿ ಸಂಜು ಸ್ಯಾಮ್ಸನ್‌ರನ್ನು ಟಿ20 ತಂಡಕ್ಕೆ ಆಯ್ಕೆ ಮಾಡಿ, ಏಕದಿನ ಸರಣಿಗೆ ಕಡೆಗಣಿಸಲಾಗಿದೆ.
ಬಿಸಿಸಿಐ ಕಣ್ಣೊರೆಸುವ ತಂತ್ರ
ಉದ್ದೇಶಪೂರ್ವಕವಾಗಿಯೇ ಸಂಜು ಸ್ಯಾಮ್ಸನ್‌ರನ್ನು ಏಕದಿನ ಸರಣಿಗಾಗಿ ಕೈಬಿಡಲಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜು ಸ್ಯಾಮ್ಸನ್ ಟಿ20 ಮತ್ತು ಏಕದಿನ ತಂಡದಲ್ಲಿ ಸ್ಥಾನ ಪಡೆಯಬೇಕಿತ್ತು ಎಂದು ಹೇಳಿದ್ದಾರೆ.
ಬಿಸಿಸಿಐನ ಈ ನಡೆಯಿಂದ 2023ರ ಏಕದಿನ ವಿಶ್ವಕಪ್‌ನಲ್ಲಿ ಸಂಜು ಸ್ಯಾಮ್ಸನ್ ಸ್ಥಾನ ಪಡೆಯುವುದು ಅನುಮಾನವಾಗಿದೆ.