ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs SL ODI Series: ವಿರಾಟ್ ಕೊಹ್ಲಿಯೊಂದಿಗೆ ಈತನಿಗೂ ಸರಣಿಶ್ರೇಷ್ಠ ಪ್ರಶಸ್ತಿ ನೀಡಬೇಕಿತ್ತು; ಗಂಭೀರ್

IND vs SL: Mohammed Siraj Should Have Been Awarded Player Of The Series Along With Virat Kohli Says Gambhir

ಭಾನುವಾರ, ಜನವರಿ 15ರಂದು ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಸರಣಿಯ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ ವಿಶ್ವದಾಖಲೆಯ 317 ರನ್‌ಗಳ ಅಂತರದ ಗೆಲುವು ಸಾಧಿಸಿತು ಮತ್ತು ಈ ಮೂಲಕ ಸರಣಿಯನ್ನು 3-0 ಅಂತರದಿಂದ ಕ್ಲೀನ್‌ಸ್ವೀಪ್ ಮಾಡಿತು.

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತಂಡ ಗೆಲ್ಲುತ್ತಿದ್ದಂತೆಯೇ ಮೊದಲ ಮತ್ತು ಮೂರನೇ ಪಂದ್ಯ ಭರ್ಜರಿ ಶತಕ ಬಾರಿಸಿದ್ದ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ವಿರಾಟ್ ಕೊಹ್ಲಿ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಎರಡು ಶತಕಗಳು ಸೇರಿ ಒಟ್ಟು 283 ರನ್ ಗಳಿಸಿದರು.

IND vs SL: ಹೀಗಾದರೆ ಮಾತ್ರ ವಿರಾಟ್ ಕೊಹ್ಲಿ 100 ಅಂತಾರಾಷ್ಟ್ರೀಯ ಶತಕ ಗಳಿಸುತ್ತಾರೆ; ಸುನಿಲ್ ಗವಾಸ್ಕರ್IND vs SL: ಹೀಗಾದರೆ ಮಾತ್ರ ವಿರಾಟ್ ಕೊಹ್ಲಿ 100 ಅಂತಾರಾಷ್ಟ್ರೀಯ ಶತಕ ಗಳಿಸುತ್ತಾರೆ; ಸುನಿಲ್ ಗವಾಸ್ಕರ್

ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆಯುವುದರೊಂದಿಗೆ ಮೊದಲ ಹಾಗೂ ಮೂರನೇ ಏಕದಿನ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಬಾಚಿಕೊಂಡರು. ಇನ್ನೂ ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ 10 ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿಕೊಂಡಂತಾಯಿತು. ಇದು ಯಾವುದೇ ಆಟಗಾರನಿಗಿಂತಲೂ ಹೆಚ್ಚಾಗಿದೆ.

ಸಿರಾಜ್‌ರನ್ನು ಏಕದಿನ ಸರಣಿಶ್ರೇಷ್ಠ ಆಟಗಾರ ಎಂದು ಹೆಸರಿಸಬೇಕಿತ್ತು

ಸಿರಾಜ್‌ರನ್ನು ಏಕದಿನ ಸರಣಿಶ್ರೇಷ್ಠ ಆಟಗಾರ ಎಂದು ಹೆಸರಿಸಬೇಕಿತ್ತು

ಇದೇ ವೇಳೆ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಅವರಿಂದಿಗೆ ಯುವ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಏಕದಿನ ಸರಣಿಶ್ರೇಷ್ಠ ಆಟಗಾರ ಎಂದು ಹೆಸರಿಸಬೇಕಿತ್ತು ಎಂದು ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಭಾವಿಸಿದ್ದಾರೆ.

ಮೊಹಮ್ಮದ್ ಸಿರಾಜ್ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿದರು. ಮೂರು ಪಂದ್ಯಗಳಲ್ಲಿ ಮೊಹಮ್ಮದ್ ಸಿರಾಜ್ 4.05 ಎಕಾನಮಿ ದರದಲ್ಲಿ ಒಂಬತ್ತು ವಿಕೆಟ್ ಪಡೆದರು. ಸರಣಿಯಲ್ಲಿ ಪಂದ್ಯದಿಂದ ಪಂದ್ಯಕ್ಕೆ ಉತ್ತಮ ಪ್ರದರ್ಶನ ನೀಡಿದರು.

ಕೊನೆಯ ಏಕದಿನ ಪಂದ್ಯದಲ್ಲಿ 10 ಓವರ್‌ಗಳಲ್ಲಿ 32 ರನ್‌ಗಳಿಗೆ ನಾಲ್ಕು ವಿಕೆಟ್‌

ಕೊನೆಯ ಏಕದಿನ ಪಂದ್ಯದಲ್ಲಿ 10 ಓವರ್‌ಗಳಲ್ಲಿ 32 ರನ್‌ಗಳಿಗೆ ನಾಲ್ಕು ವಿಕೆಟ್‌

ಗುವಾಹಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಎರಡು ವಿಕೆಟ್‌ಗಳನ್ನು ಪಡೆದರೆ, ನಂತರ ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್‌ ಪಡೆದರು.

ತಿರುವನಂತಪುರಂನಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ತಮ್ಮ ಕೋಟಾದ 10 ಓವರ್‌ಗಳಲ್ಲಿ 32 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಪಡೆದರು. ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ 392 ಬೃಹತ್ ಮೊತ್ತ ಬೆನ್ನತ್ತಿದ ಶ್ರೀಲಂಕಾ ತಂಡವನ್ನು ಭಾರತ 22 ಓವರ್‌ಗಳಲ್ಲಿ 73 ರನ್‌ಗಳಿಗೆ ಆಲೌಟ್ ಮಾಡಿ 317 ರನ್‌ಗಳ ಜಯ ಸಾಧಿಸಿತು.

ಮೊಹಮ್ಮದ್ ಸಿರಾಜ್ ಭಾರತದ ಭವಿಷ್ಯದ ಬೌಲರ್

ಮೊಹಮ್ಮದ್ ಸಿರಾಜ್ ಭಾರತದ ಭವಿಷ್ಯದ ಬೌಲರ್

"ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಹೆಚ್ಚು ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ ಅವರು ವಿರಾಟ್ ಕೊಹ್ಲಿಗೆ ಸರಿಸಮಾನ ಪ್ರದರ್ಶನ ನೀಡಿದ್ದರು. ಇಬ್ಬರಿಗೂ ಜಂಟಿ ಸರಣಿ ಶ್ರೇಷ್ಠ ಪ್ರಶಸ್ತಿ ಸಿಗಬೇಕಿತ್ತು. ಸಿರಾಜ್ ಅವರು ಅತ್ಯುತ್ತಮ ಬ್ಯಾಟಿಂಗ್ ವಿಕೆಟ್‌ಗಳಲ್ಲಿ ವಿಕೆಟ್ ಪಡೆದರು. ಯಾವಾಗಲೂ ಬ್ಯಾಟ್ಸ್‌ಮನ್‌ಗಳನ್ನು ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಆದರೆ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ ಸಂಪೂರ್ಣವಾಗಿ ಅಸಾಧಾರಣವಾಗಿದ್ದರು," ಎಂದು ಮಾಜಿ ಆರಂಭಿಕ ಬ್ಯಾಟರ್ ಗೌತಮ್ ಗಂಭೀರ್ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ತಿಳಿಸಿದ್ದಾರೆ.

ಮತ್ತೊಂದೆಡೆ, ಕೊಹ್ಲಿ ಸರಣಿಯನ್ನು ಅಗ್ರ ರನ್ ಗಳಿಸಿದ ಆಟಗಾರನಾಗಿ ಮುಗಿಸಿದರು. ಮೂರು ಪಂದ್ಯಗಳಲ್ಲಿ, ಕೊಹ್ಲಿ 141.50 ಸರಾಸರಿಯಲ್ಲಿ 283 ರನ್ ಗಳಿಸಿದರು ಮತ್ತು ಎರಡು ಶತಕಗಳೊಂದಿಗೆ 137.37 ಸ್ಟ್ರೈಕ್ ರೇಟ್‌ಗಳನ್ನು ಗಳಿಸಿದರು.

ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ 34 ವರ್ಷದ ವಿರಾಟ್ ಕೊಹ್ಲಿ 110 ಎಸೆತಗಳಲ್ಲಿ 13 ಬೌಂಡರಿ ಮತ್ತು 8 ಸಿಕ್ಸರ್‌ಗಳ ನೆರವಿನಿಂದ ಅಜೇಯ 166 ರನ್ ಗಳಿಸಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ 46ನೇ ಶತಕ ಬಾರಿಸಿದರು ಮತ್ತು ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 74ನೇ ಶತಕ ಗಳಿಸಿದಂತಾಗಿದೆ.

Story first published: Monday, January 16, 2023, 11:46 [IST]
Other articles published on Jan 16, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X