ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ ಟೆಸ್ಟ್: ಕಪಿಲ್ ದೇವ್ ದಾಖಲೆ ಮುರಿಯಲಿದ್ದಾರಾ ರವಿಚಂದ್ರನ್ ಅಶ್ವಿನ್?

IND vs SL: Ravinchandran Ashwin likely to surpass Kapil Dev in most test wicket record

ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ವಿರುದ್ಧ ಟಿ ಟ್ವೆಂಟಿ ಹಾಗೂ ಟೆಸ್ಟ್ ಸರಣಿಗಳಲ್ಲಿ ಸೆಣಸಾಟ ನಡೆಸುತ್ತಿರುವ ಟೀಮ್ ಇಂಡಿಯಾ ಈಗಾಗಲೇ ಶ್ರೀಲಂಕಾ ವಿರುದ್ಧ ಮುಕ್ತಾಯಗೊಂಡಿರುವ ಟಿ ಟ್ವೆಂಟಿ ಸರಣಿಯಲ್ಲಿ ವೈಟ್ ವಾಷ್ ಸಾಧನೆ ಮಾಡಿದೆ. ಹೌದು, ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ನಡೆದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದು, ಇದೀಗ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿದು ಈ ಸರಣಿಯನ್ನೂ ಕೈವಶ ಮಾಡಿಕೊಳ್ಳುವ ಯೋಜನೆಯಲ್ಲಿದೆ.

ಇನ್ನು ವಿಶ್ರಾಂತಿಯ ಕಾರಣದಿಂದ ಶ್ರೀಲಂಕಾ ವಿರುದ್ಧದ ಈ ಟ್ವೆಂಟಿ ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಇದೀಗ ಶ್ರೀಲಂಕಾ ವಿರುದ್ಧ ಮಾರ್ಚ್ 4ರಂದು ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಹೌದು, ಶ್ರೀಲಂಕಾ ವಿರುದ್ಧ ಮೊಹಾಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಥಮ ಟೆಸ್ಟ್ ಪಂದ್ಯದ ಮೂಲಕ ವಾಪಸ್ ಟೀಮ್ ಇಂಡಿಯಾ ಸೇರಲಿರುವ ವಿರಾಟ್ ಕೊಹ್ಲಿಗೆ ಈ ಪಂದ್ಯ ಮೈಲಿಗಲ್ಲಾಗಿದೆ. ಹೌದು, ಶ್ರೀಲಂಕಾ ವಿರುದ್ಧ ನಡೆಯಲಿರುವ ಈ ಮೊಹಾಲಿ ಟೆಸ್ಟ್ ಪಂದ್ಯ ವಿರಾಟ್ ಕೊಹ್ಲಿ ಆಡಲಿರುವ ನೂರನೇ ಟೆಸ್ಟ್ ಪಂದ್ಯವಾಗಿದೆ. ಈ ಕಾರಣದಿಂದಾಗಿ ಈ ಪಂದ್ಯ ಸಾಕಷ್ಟು ಮಹತ್ವ ಹಾಗೂ ವಿಶೇಷತೆಯನ್ನು ಹೊಂದಿದ್ದು, ದಿನದಿಂದ ದಿನಕ್ಕೆ ಈ ಪಂದ್ಯದ ವಿಷಯವಾಗಿ ಕ್ರೇಜ್ ಹೆಚ್ಚಾಗುತ್ತಿದೆ.

2022ರ ಟಿ20 ವಿಶ್ವಕಪ್‌ ಗೆಲ್ಲಲು ಭಾರತ ತಂಡ ಹೀಗಿರಲಿ, ಆದರೆ ಈ ಆಟಗಾರ ಬೇಡ ಎಂದ ಮಾಜಿ ಕ್ರಿಕೆಟಿಗ!2022ರ ಟಿ20 ವಿಶ್ವಕಪ್‌ ಗೆಲ್ಲಲು ಭಾರತ ತಂಡ ಹೀಗಿರಲಿ, ಆದರೆ ಈ ಆಟಗಾರ ಬೇಡ ಎಂದ ಮಾಜಿ ಕ್ರಿಕೆಟಿಗ!

ಇನ್ನು ಮೊಹಾಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ವಿರಾಟ್ ಕೊಹ್ಲಿಯ ನೂರನೇ ಟೆಸ್ಟ್ ಪಂದ್ಯ ಎನ್ನುವ ವಿಶೇಷತೆಯನ್ನು ಹೊಂದಿದ್ದರೆ, ಮತ್ತೊಂದೆಡೆ ಈ ಪಂದ್ಯ ಟೀಮ್ ಇಂಡಿಯಾದ ಇತರೆ ಆಟಗಾರರಿಗೆ ವೈಯಕ್ತಿಕ ದಾಖಲೆಗಳ ಮೈಲಿಗಲ್ಲನ್ನು ಮುಟ್ಟುವ ಅವಕಾಶವನ್ನು ಕಲ್ಪಿಸಿಕೊಡಬಲ್ಲ ಪಂದ್ಯವಾಗಿದೆ. ಹೌದು, ವಿರಾಟ್ ಕೊಹ್ಲಿ ಆಡಲಿರುವ ನೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಯಲ್ಲಿ ಭಾರತದ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರುವ ಅವಕಾಶವಿದೆ.

ಕೊಹ್ಲಿಯಿಂದ ಸಿರಾಜ್‌ಗೆ ಸಿಕ್ಕ ಬೆಂಬಲ ಈತನಿಗೂ ಸಿಗಬೇಕು ಎಂದ ಇರ್ಫಾನ್ ಪಠಾಣ್ಕೊಹ್ಲಿಯಿಂದ ಸಿರಾಜ್‌ಗೆ ಸಿಕ್ಕ ಬೆಂಬಲ ಈತನಿಗೂ ಸಿಗಬೇಕು ಎಂದ ಇರ್ಫಾನ್ ಪಠಾಣ್

ಕೊಹ್ಲಿಯ 100 ನೇ ಟೆಸ್ಟ್ ಗೆ ಶುಭಾಶಯ ಕೋರಲು BCCI ಮಾಡಿದ ಪ್ಲ್ಯಾನ್ ನೋಡಿ | Oneindia Kannada

ಹೌದು, 84 ಟೆಸ್ಟ್ ಪಂದ್ಯಗಳನ್ನಾಡಿ 430 ವಿಕೆಟ್‍ಗಳನ್ನು ಪಡೆದಿರುವ ರವಿಚಂದ್ರನ್ ಅಶ್ವಿನ್ 434 ಟೆಸ್ಟ್ ವಿಕೆಟ್‍ಗಳನ್ನು ಪಡೆದಿರುವ ಕಪಿಲ್ ದೇವ್ ಅವರನ್ನು ಹಿಂದಿಕ್ಕುವ ಸಾಧ್ಯತೆಗಳಿದ್ದು , 619 ವಿಕೆಟ್‍ಗಳನ್ನು ಪಡೆದಿರುವ ಅನಿಲ್ ಕುಂಬ್ಳೆ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

Story first published: Wednesday, March 2, 2022, 22:53 [IST]
Other articles published on Mar 2, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X