Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಶ್ರೀಲಂಕಾ: ಕೊಹ್ಲಿ ಔಟ್ ಆಗಿದ್ದಕ್ಕೆ ಬೇಸರ ಹೊರಹಾಕಿದ ರೋಹಿತ್ ಶರ್ಮಾ, ವಿಡಿಯೋ ವೈರಲ್

IND vs SL: Rohit Sharmas sad reaction to Virat Kohlis dismissal in first test goes viral

ಭಾರತ ಪ್ರವಾಸ ಕೈಗೊಂಡಿರುವ ಶ್ರಿಲಂಕಾ ಟೀಮ್ ಇಂಡಿಯಾ ವಿರುದ್ಧ ಟಿ ಟ್ವೆಂಟಿ ಸರಣಿ ಹಾಗೂ ಟೆಸ್ಟ್ ಸರಣಿಗಳಲ್ಲಿ ಭಾಗವಹಿಸುತ್ತಿದ್ದು, ಈಗಾಗಲೇ ಇತ್ತಂಡಗಳ ನಡುವೆ ನಡೆದ ೩ ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ಎಲ್ಲಾ ಪಂದ್ಯಗಳಲ್ಲಿಯೂ ಜಯ ಸಾಧಿಸುವುದರ ಮೂಲಕ ಶ್ರೀಲಂಕಾಗೆ ವೈಟ್ ವಾಷ್ ಬಳಿದಿದೆ. ಈ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿ, ವೆಸ್ಟ್ ಇಂಡಿಸ್ ವಿರುದ್ದದ ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗಳ ಜಯದ ನಂತರ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಮುಕ್ತಾಯಗೊಂಡ ನಂತರ ಸದ್ಯ ೨ ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಿದ್ದು, ಮೊದಲ ಪಂದ್ಯ ಮೊಹಾಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದಿನಿಂದ ( ಮಾರ್ಚ್ 4 ) ಆರಂಭಗೊಂಡಿದೆ.

ಇನ್ನು ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಈ ಮೊದಲ ಟೆಸ್ಟ್ ಪಂದ್ಯ ರೋಹಿತ್ ಶರ್ಮಾ ಭಾರತ ಟೆಸ್ಟ್ ತಂಡದ ಪೂರ್ಣಾವಧಿ ನಾಯಕನಾಗಿ ಆಯ್ಕೆಗೊಂಡ ನಂತರ ಆಡುತ್ತಿರುವ ಮೊದಲ ಪಂದ್ಯವಾಗಿದ್ದು, ವಿರಾಟ್ ಕೊಹ್ಲಿ ಆಡುತ್ತಿರುವ ನೂರನೇ ಟೆಸ್ಟ್ ಪಂದ್ಯ ಕೂಡ ಇದಾಗಿದೆ. ಹೌದು, ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನ್ನು ಕಂಡ ನಂತರ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆಯನ್ನು ನೀಡಿದ್ದರು ಹಾಗೂ ರೋಹಿತ್ ಶರ್ಮಾ ನೂತನ ನಾಯಕನಾಗಿ ನೇಮಕಗೊಂಡಿದ್ದರು. ಹೀಗೆ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದು, ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಪಂದ್ಯ ಎಂಬ ಕಾರಣಕ್ಕೆ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು.

ಹೀಗೆ ವಿರಾಟ್ ಕೊಹ್ಲಿ ತಾವಾಡುತ್ತಿರುವ ನೂರನೇ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಎರಡು ವರ್ಷಗಳ ಕಾಲ ಶತಕ ಬಾರಿಸದೇ ಇದ್ದದ್ದಕ್ಕೆ ಬ್ರೇಕ್ ಹಾಕಲಿದ್ದಾರೆ ಎಂದು ದೊಡ್ಡ ಮಟ್ಟದಲ್ಲಿ ಊಹಿಸಲಾಗಿತ್ತು. ಆದರೆ ಅಭಿಮಾನಿಗಳ ಈ ಊಹೆ ತಪ್ಪಾಗಿದ್ದು ವಿರಾಟ್ ಕೊಹ್ಲಿ 45 ರನ್ ಗಳಿಸಿ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದ್ದಾರೆ. ಹೌದು, ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 75 ಎಸೆತಳಿಗೆ 5 ಬೌಂಡರಿ ಸಹಿತ 45 ರನ್ ಬಾರಿಸಿ ಲಸಿತ್ ಎಂಬುಲ್ಡೆನಿಯಾ ಎಸೆತಕ್ಕೆ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಔಟ್ ಆಗುತ್ತಿದ್ದಂತೆ ಮೊಹಾಲಿ ಕ್ರೀಡಾಂಗಣದಲ್ಲಿ ಕೊಹ್ಲಿ ನೂರನೇ ಟೆಸ್ಟ್ ಪಂದ್ಯ ವೀಕ್ಷಿಸಲು ನೆರೆದಿದ್ದ ಅಭಿಮಾನಿಗಳು ಬೇಸರಕ್ಕೊಳಗಾದರು. ಕೇವಲ ಅಭಿಮಾನಿಗಳು ಮಾತ್ರವಲ್ಲದೇ ನಾಯಕ ರೋಹಿತ್ ಶರ್ಮಾ ಕೂಡ ವಿರಾಟ್ ಕೊಹ್ಲಿ ಔಟ್ ಆದದ್ದನ್ನು ಕಂಡು ಬೇಸರಕ್ಕೊಳಗಾಗಿದ್ದಾರೆ. ಸದ್ಯ ರೋಹಿತ್ ಶರ್ಮಾ ಬೇಸರಕ್ಕೊಳಗಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆ ವಿಡಿಯೋ ಮುಂದೆ ಇದೆ ನೋಡಿ.

ತಲೆ ಮೇಲೆ ಕೈಹೊತ್ತ ರೋಹಿತ್

ತಲೆ ಮೇಲೆ ಕೈಹೊತ್ತ ರೋಹಿತ್

ತಮ್ಮ ನೂರನೇ ಪಂದ್ಯದ ಮೊದಲ ಇನ್ನಿಂಗ್ಸಿನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ೭೫ ಎಸೆತಗಳಿಗೆ ೪೫ ರನ್ ಗಳಿಸಿ ಲಸಿತ್ ಎಂಬುಲ್ಡೆನಿಯಾ ಎಸೆತಕ್ಕೆ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದ್ದಾರೆ. ವಿರಾಟ್ ಕೊಹ್ಲಿ ಇತ್ತ ವಿಕೆಟ್ ಒಪ್ಪಿಸುತ್ತಿದ್ದಂತೆ ಅತ್ತ ಪೆವಿಲಿಯನ್ ಒಳಗೆ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ರೋಹಿತ್ ಶರ್ಮಾ ತಲೆ ಮೇಲೆ ತನ್ನ ಎರಡೂ ಕೈಗಳನ್ನು ಹಾಕಿಕೊಳ್ಳುವುದರ ಮೂಲಕ ಬೇಸರವನ್ನು ಹೊರಹಾಕಿದ್ದಾರೆ.

ಕೊಹ್ಲಿ - ರೋಹಿತ್ ನಡುವೆ ಉತ್ತಮ ಸ್ನೇಹವಿದೆ

ಕೊಹ್ಲಿ - ರೋಹಿತ್ ನಡುವೆ ಉತ್ತಮ ಸ್ನೇಹವಿದೆ

ಇನ್ನು ಕೊಹ್ಲಿ ಆಡುತ್ತಿರುವ ತನ್ನ ನೂರನೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಶತಕ ಬಾರಿಸಲಿ ಎಂದು ಹಲವಾರು ಕ್ರಿಕಟ್ ಅಭಿಮಾನಿಗಳು ಆಸೆಪಟ್ಟಿದ್ದರು. ಅದೇ ರೀತಿ ನಾಯಕ ರೋಹಿತ್ ಶರ್ಮಾ ಕೂಡ ಆಸೆಯನ್ನು ಹೊಂದಿದ್ದರು ಎಂಬುದು ಕೊಹ್ಲಿ ವಿಕೆಟ್ ಬಿದ್ದ ನಂತರ ರೋಹಿತ್ ಶರ್ಮಾ ನೀಡಿರುವ ಈ ಪ್ರತಿಕ್ರಿಯೆಯಿಂದಲೇ ತಿಳಿದುಬಂದಿದೆ. ಸದ್ಯ ವೈರಲ್ ಆಗಿರುವ ಈ ವಿಡಿಯೋ ವೀಕ್ಷಿಸಿರುವ ಕ್ರಿಕೆಟ್ ಪ್ರೇಕ್ಷಕರು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಯಾವುದೇ ರೀತಿಯ ದ್ವೇಷವಿಲ್ಲ ಎನ್ನುವುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಪ್ಲೇಯಿಂಗ್ ಇಲೆವೆನ್

ಪ್ಲೇಯಿಂಗ್ ಇಲೆವೆನ್

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ ( ವಿಕೆಟ್ ಕೀಪರ್ ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ದಿಮುತ್ ಕರುಣಾರತ್ನೆ (ನಾಯಕ), ಲಹಿರು ತಿರಿಮನ್ನೆ, ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಸುರಂಗ ಲಕ್ಮಲ್, ವಿಶ್ವ ಫೆರ್ನಾಂಡೋ, ಲಸಿತ್ ಎಂಬುಲ್ದೇನಿಯ, ಲಹಿರು ಕುಮಾರ

Story first published: Saturday, March 5, 2022, 10:28 [IST]
Other articles published on Mar 5, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+