ಭಾರತ vs ಶ್ರೀಲಂಕಾ: ಶೋಯೆಬ್ ಮಲಿಕ್ ಹಿಂದಿಕ್ಕಿ ನೂತನ ದಾಖಲೆ ಬರೆದ ರೋಹಿತ್ ಶರ್ಮಾ

ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಹೀನಾಯವಾಗಿ ಸೋಲನ್ನು ಅನುಭವಿಸಿದ್ದ ಶ್ರೀಲಂಕಾ ಇದೀಗ ಭಾರತ ಪ್ರವಾಸವನ್ನು ಕೈಗೊಂಡಿದ್ದು ಟೀಮ್ ಇಂಡಿಯಾ ವಿರುದ್ಧ ಟಿ ಟ್ವೆಂಟಿ ಹಾಗೂ ಟೆಸ್ಟ್ ಸರಣಿಗಳಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಇತ್ತ ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಸೆಣಸಾಟ ನಡೆಸಿದ್ದ ಟೀಂ ಇಂಡಿಯಾ ಎಲ್ಲಾ ಪಂದ್ಯಗಳಲ್ಲಿಯೂ ಕೂಡ ಕೆರಿಬಿಯನ್ನರಿಗೆ ಸೋಲುಣಿಸುವುದರ ಮೂಲಕ ಎರಡೂ ಸರಣಿಗಳಲ್ಲಿಯೂ ವೈಟ್ ವಾಷ್ ಸಾಧನೆ ಮಾಡಿತ್ತು. ಹೀಗೆ ರೋಹಿತ್ ಶರ್ಮಾ ಭಾರತ ತಂಡದ ಪೂರ್ಣಾವಧಿ ನಾಯಕನಾಗಿ ಆಯ್ಕೆಯಾದ ನಂತರ ನಡೆದ ಎಲ್ಲಾ ಸರಣಿಗಳಲ್ಲಿಯೂ ವೈಟ್ ವಾಷ್ ಸಾಧನೆ ಮಾಡಿರುವ ಟೀಮ್ ಇಂಡಿಯಾ ಇದೀಗ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟಿ ಟ್ವೆಂಟಿ ಸರಣಿಯಲ್ಲಿಯೂ ಕೂಡ ವೈಟ್ ವಾಷ್ ಮಾಡುವ ಸನಿಹದಲ್ಲಿದೆ. ಹೌದು, ಭಾರತ ಪ್ರವಾಸವನ್ನು ಕೈಗೊಂಡು ಮೊದಲಿಗೆ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿದಿರುವ ಶ್ರೀಲಂಕಾ ಮೊದಲೆರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ.
ಹೌದು, ಮೊದಲನೇ ಟಿ 20 ಪಂದ್ಯದಲ್ಲಿ 62 ರನ್‌ಗಳ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಫೆಬ್ರವರಿ 26ರಂದು ಧರ್ಮಶಾಲಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತು. ಹೀಗೆ ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲೆರಡು ಟಿ ಟ್ವೆಂಟಿ ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 2 - 0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡು ಸರಣಿ ಕೈವಶಮಾಡಿಕೊಂಡಿರುವ ಟೀಮ್ ಇಂಡಿಯಾ ಇಂದು ( ಫೆಬ್ರವರಿ 27 ) ನಡೆಯುತ್ತಿರುವ ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿಯೂ ಸಹ ಜಯ ಸಾಧಿಸುವ ಗುರಿಯನ್ನು ಹೊಂದಿದೆ. ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಸತತವಾಗಿ ಅತಿಹೆಚ್ಚು ಟಿ ಟ್ವೆಂಟಿ ಪಂದ್ಯಗಳನ್ನು ಗೆದ್ದಿರುವ ತಂಡ ಎಂಬ ದಾಖಲೆಯಲ್ಲಿ ಅಫ್ಘಾನಿಸ್ತಾನವನ್ನು ಸರಿದೂಗಿಸಲಿದೆ. ಅಫ್ಘಾನಿಸ್ತಾನ ಸತತ 12 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ಜಯ ಸಾಧಿಸಿದ ದಾಖಲೆಯನ್ನು ಮಾಡಿದೆ. ಸದ್ಯ 11 ಅಂತರರಾಷ್ಟ್ರೀಯ ಟ್ವೆಂಟಿ ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧದ ಅಂತಿಮ ಟಿ ಟ್ವೆಂಟಿ ಪಂದ್ಯವನ್ನು ಗೆದ್ದರೆ ಈ ದಾಖಲೆಯಲ್ಲಿ ಅಫ್ಘಾನಿಸ್ತಾನವನ್ನು ಸರಿದೂಗಿಸಲಿದೆ.
ಹೀಗೆ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಮೂರನೇ ಟಿ ಟ್ವೆಂಟಿ ಪಂದ್ಯ ಮಹತ್ವದ ದಾಖಲೆಗೆ ಕಾರಣವಾಗಬಹುದಾದ ಪಂದ್ಯವಾಗಿದ್ದು, ಈ ಪಂದ್ಯದ ಮೂಲಕ ರೋಹಿತ್ ಶರ್ಮಾ ಪಾಕಿಸ್ತಾನದ ಶೋಯಬ್ ಮಲಿಕ್ ಅವರನ್ನು ಹಿಂದಿಕ್ಕಿ ವಿನೂತನ ದಾಖಲೆಯೊಂದನ್ನು ಬರೆದಿದ್ದಾರೆ. ಈ ದಾಖಲೆಯ ವಿವರ ಈ ಕೆಳಕಂಡಂತಿದೆ..

ಅತಿ ಹೆಚ್ಚು ಟಿ ಟ್ವೆಂಟಿ ಪಂದ್ಯಗಳನ್ನಾಡಿದ ಆಟಗಾರ ರೋಹಿತ್ ಶರ್ಮಾ
ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ತೃತೀಯ ಟಿ ಟ್ವೆಂಟಿ ಪಂದ್ಯ ರೋಹಿತ್ ಶರ್ಮಾ ಆಡುತ್ತಿರುವ 125ನೇ ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯವಾಗಿದೆ. ಹೀಗೆ 125 ಪಂದ್ಯಗಳನ್ನು ಆಡುವುದರ ಮೂಲಕ ಅತಿ ಹೆಚ್ಚು ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ.

ಶೋಯೆಬ್ ಮಲಿಕ್ ಹಿಂದಿಕ್ಕಿದ ರೋಹಿತ್ ಶರ್ಮಾ
ಈ ಹಿಂದೆ ಪಾಕಿಸ್ತಾನದ ಶೋಯೆಬ್ ಮಲಿಕ್ 124 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳನ್ನು ಆಡುವುದರ ಮೂಲಕ ಅತಿ ಹೆಚ್ಚು ಅಂತರರಾಷ್ಟ್ರೀಯ ಟ್ವೆಂಟಿ ಪಂದ್ಯಗಳನ್ನು ಆಡಿದ ಆಟಗಾರ ಎನಿಸಿಕೊಂಡಿದ್ದರು. ಈಗ 125 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳನ್ನು ಪೂರೈಸಿರುವ ರೋಹಿತ್ ಶರ್ಮಾ ಈ ದಾಖಲೆಯಲ್ಲಿ ಶೋಯೆಬ್ ಮಲಿಕ್ ಅವರನ್ನು ಹಿಂದಿಕ್ಕಿದ್ದಾರೆ. ಇನ್ನು ರೋಹಿತ್ ಶರ್ಮಾ 100ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಏಕೈಕ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಭಾರತದ ಮಾಜಿ ನಾಯಕ ಎಂಎಸ್ ಧೋನಿ 98 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳನ್ನಾಡಿದ್ದರೆ, ವಿರಾಟ್ ಕೊಹ್ಲಿ 97 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳನ್ನಾಡಿದ್ದಾರೆ.

ಪಂದ್ಯದ ಆಡುವ ಬಳಗಗಳು
ಭಾರತ ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಅವೇಶ್ ಖಾನ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದನುಷ್ಕ ಗುಣತಿಲಕ, ಚರಿತ್ ಅಸಲಂಕ, ದಿನೇಶ್ ಚಂಡಿಮಲ್(ವಿಕೆಟ್ ಕೀಪರ್), ಜನಿತ್ ಲಿಯಾನಗೆ, ದಸುನ್ ಶನಕ(ನಾಯಕ), ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಜೆಫ್ರಿ ವಾಂಡರ್ಸೆ, ಬಿನೂರ ಫೆರ್ನಾಂಡೋ, ಲಹಿರು ಕುಮಾರ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications