ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs SL: ಭಾರತ ODI ತಂಡದಿಂದ ಕೈಬಿಟ್ಟ ನಂತರ ಮೊದಲ ಬಾರಿಗೆ ನೀಡಿದ ಶಿಖರ್ ಧವನ್

IND vs SL: Shikhar Dhawan Makes First Reaction After Being Dropped From Indias ODI Squad

ಪ್ರವಾಸಿ ಶ್ರೀಲಂಕಾ ತಂಡದ ವಿರುದ್ಧದ ಸರಣಿಗಾಗಿ ಭಾರತ ಏಕದಿನ ತಂಡದಿಂದ ಕೈಬಿಡಲ್ಪಟ್ಟ ನಂತರ ಹಿರಿಯ ಬ್ಯಾಟ್ಸ್‌ಮನ್ ಶಿಖರ್ ಧವನ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತದ ಆರಂಭಿಕ ಎಡಗೈ ಬ್ಯಾಟರ್ ಶಿಖರ್ ಧವನ್ ಈಗಾಗಲೇ ಟೆಸ್ಟ್ ಮತ್ತು ಟಿ20 ತಂಡದಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡಿಲ್ಲ ಮತ್ತು ಇದೀಗ 50-ಓವರ್ ಸ್ವರೂಪದಲ್ಲಿ ತನ್ನ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಶಿಖರ್ ಧವನ್ ಇತ್ತೀಚೆಗೆ ನ್ಯೂಜಿಲೆಂಡ್‌ನಲ್ಲಿ ನಡೆದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು.

Rishabh Pant: ರಿಷಭ್ ಪಂತ್ ಇದರಲ್ಲಿ ಹೆಚ್ಚು ಕೆಲಸ ಮಾಡಬೇಕಿದೆ; ಶ್ರೀಲಂಕಾ ಮಾಜಿ ಕ್ರಿಕೆಟಿಗ ಸಲಹೆRishabh Pant: ರಿಷಭ್ ಪಂತ್ ಇದರಲ್ಲಿ ಹೆಚ್ಚು ಕೆಲಸ ಮಾಡಬೇಕಿದೆ; ಶ್ರೀಲಂಕಾ ಮಾಜಿ ಕ್ರಿಕೆಟಿಗ ಸಲಹೆ

ಕಿವೀಸ್ ವಿರುದ್ಧ ಭಾರತ ತಂಡ ಸರಣಿ ಸೋತಿತು ಮತ್ತು ಶಿಖರ್ ಧವನ್ ಅವರ ಬ್ಯಾಟಿಂಗ್ ಪ್ರದರ್ಶನವೂ ಉತ್ತಮವಾಗಿರಲಿಲ್ಲ. ಇದರ ಬೆನ್ನಲ್ಲೇ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದರು.

ಭಾರತದಲ್ಲಿ ಹೊಸ ಪ್ರತಿಭೆಗಳು ಹೊರಹೊಮ್ಮುತ್ತಿದ್ದಾರೆ

ಭಾರತದಲ್ಲಿ ಹೊಸ ಪ್ರತಿಭೆಗಳು ಹೊರಹೊಮ್ಮುತ್ತಿದ್ದಾರೆ

ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ತಂಡದಿಂದ ಹೊರಗಿದ್ದಾಗಲೆಲ್ಲಾ ಶಿಖರ್ ಧವನ್ ಅವರನ್ನು ನಾಯಕನನ್ನಾಗಿ ಬಳಸಿಕೊಳ್ಳಲಾಗಿದೆ. ಆದರೆ ಕಳೆದೆರಡು ಸರಣಿಗಳಲ್ಲಿ ಅವರು ತಂಡದ ಮೇಲೆ ಹೆಚ್ಚಿನ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಶ್ರೀಲಂಕಾ ವಿರುದ್ಧ ಸರಣಿಯಿಂದ ಕಡೆಗಣಿಸಲ್ಪಟ್ಟಿದ್ದಾರೆ.

2023 ಏಕದಿನ ವಿಶ್ವಕಪ್ ವರ್ಷವಾಗಿದೆ. ಭಾರತವೇ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯ ಆತಿಥ್ಯ ವಹಿಸುತ್ತಿದೆ ಮತ್ತು ರುತುರಾಜ್ ಗಾಯಕ್ವಾಡ್ ಮತ್ತು ಶುಭಮನ್ ಗಿಲ್ ಅವರ ರೂಪದಲ್ಲಿ ಹೊಸ ಪ್ರತಿಭೆಗಳು ಹೊರಹೊಮ್ಮುತ್ತಿದ್ದಾರೆ.

ಭಾರತ ತಂಡದ ಆಯ್ಕೆಗಾರರು ಮನಸ್ಸು ಮಾಡಲಿಲ್ಲ

ಭಾರತ ತಂಡದ ಆಯ್ಕೆಗಾರರು ಮನಸ್ಸು ಮಾಡಲಿಲ್ಲ

ಇಂತಹ ಆಯ್ಕೆಗಳೊಂದಿಗೆ ರನ್‌ ಗಳಿಸಲು ಹೆಣಗಾಡುತ್ತಿರುವ ಶಿಖರ್ ಧವನ್ ಅವರನ್ನು ನಾಯಕ ರೋಹಿತ್ ಶರ್ಮಾರೊಂದಿಗೆ ಅಗ್ರಸ್ಥಾನದಲ್ಲಿ ಆಡಿಸಲು ಭಾರತ ತಂಡದ ಆಯ್ಕೆಗಾರರು ಮನಸ್ಸು ಮಾಡಿಲ್ಲ ಎಂದೆನಿಸಿದೆ.

ಆದರೆ, ಶಿಖರ್ ಧವನ್ ಇನ್ನೂ ಎಲ್ಲಾ ಭರವಸೆಗಳನ್ನು ಬಿಟ್ಟುಕೊಟ್ಟಿಲ್ಲ. ಅವರು ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು ನೆಟ್‌ನಲ್ಲಿ ಕಷ್ಟಪಟ್ಟು ಅಭ್ಯಾಸ ಮಾಡುವುದನ್ನು ಕಾಣಬಹುದು ಮತ್ತು ಅವರ ಫಿಟ್‌ನೆಸ್‌ನಲ್ಲಿಯೂ ಶ್ರಮಿಸುತ್ತಿದ್ದಾರೆ. ಸೋಲು-ಗೆಲುವಿನ ಬಗ್ಗೆ ತಲೆಕೆಡಿಸಿಕೊಳ್ಳದೆ ಶ್ರಮವಹಿಸಿ ಕೆಲಸ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಕಷ್ಟಪಟ್ಟು ಕೆಲಸ ಮಾಡುತ್ತಿರಿ, ದೇವರು ಭವಿಷ್ಯ ನಿರ್ಧರಿಸುತ್ತಾನೆ

"ಗಲ್ ಜೀತ್ ಹರ್ ದಿ ನಹೀ ಹುಂಡಿ, ಜಿಗ್ರೇ ಡಿ ಹುಂಡಿ ಹೈ. ಕಾಮ್ ಕರಿ ಚಲೋ ಬಾಕಿ ಹಮೇಶಾ ರಬ್ಬ್ ಡಿರ್ಜಾ ಚ್ ರಹೋ" (ಇದು ಗೆಲುವು ಮತ್ತು ಸೋಲುಗಳ ಬಗ್ಗೆ ಅಲ್ಲ, ಇದು ಧೈರ್ಯದ ಬಗ್ಗೆ ಮಾತನಾಡಬೇಕು. ಕಷ್ಟಪಟ್ಟು ಕೆಲಸ ಮಾಡುತ್ತಿರಿ ಮತ್ತು ದೇವರು ನಿಮ್ಮ ಭವಿಷ್ಯವನ್ನು ನಿರ್ಧರಿಸುತ್ತಾನೆ) ಎಂದು ಶಿಖರ್ ಧವನ್ ಅವರು ತಮ್ಮ ಅಭ್ಯಾಸದ ವಿಡಿಯೋದೊಂದಿಗೆ ಪೋಸ್ಟ್ ಮಾಡಿದ್ದಾರೆ.

ಭಾರತ ತಂಡವು ಶ್ರೀಲಂಕಾ ತಂಡವನ್ನು ತಲಾ 3 ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ಎದುರಿಸಲಿದೆ. ಜನವರಿ 3ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಟಿ20 ಪಂದ್ಯಗಳೊಂದಿಗೆ ಪ್ರವಾಸವು ಪ್ರಾರಂಭವಾಗುತ್ತದೆ. ಜನವರಿ 10ರಂದು ಗುವಾಹಟಿಯಲ್ಲಿ ಏಕದಿನ ಸರಣಿ ಆರಂಭವಾಗಲಿದೆ.

ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡ

ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡ

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್

ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

Story first published: Friday, December 30, 2022, 10:25 [IST]
Other articles published on Dec 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X