Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

2022ರ ಫಾರ್ಮ್ ಮುಗಿಯಿತು ಈಗ ಹೊಸ ಆರಂಭ: 3ನೇ ಟಿ20 ಶತಕದ ಬಳಿಕ ಸೂರ್ಯ ಪ್ರತಿಕ್ರಿಯೆ

IND vs SL: Suryakumar Yadav statement on his form said 2022 form is gone, it is a fresh start in 2023

ಟೀಮ್ ಇಂಡಿಯಾ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದು ಶತಕ ಸಿಡಿಸಿದ್ದಾರೆ. ಈ ಮೂಲಕ ಚುಟುಕು ಮಾದರಿಯಲ್ಲಿ ಸೂರ್ಯ 3ನೇ ಶತಕ ಸಿಡಿಸಿದ್ದು ತಮ್ಮ ಅದ್ಭುತ ಫಾರ್ಮ್ ಮುಂದುವರಿದಿದ್ದಾರೆ. ಈ ಬ್ಯಾಟಿಂಗ್‌ನ ಬಳಿಕ ಸೂರ್ಯಕುಮಾರ್ ಪ್ರತಿಕ್ರಿಯೆ ನೀಡಿರುವ ಸೂರ್ಯಕುಮಾರ್ ಯಾದವ್ 2022ರ ಫಾರ್ಮ್ ಮುಗಿಯಿತು ಈಗ 2023ಕ್ಕೆ ಹೊಸ ಆರಂಭ ಎಂದಿದ್ದಾರೆ.

"ಈ ಇನ್ನಿಂಗ್ಸ್ ಆಡಿರುವ ರೀತಿಗೆ ನಾನು ಬಹಳ ಸಂತುಷ್ಟನಾಗಿದ್ದೇನೆ. ನಾಯಕ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಬ್ಯಾಟರ್‌ಗಳ ಮೇಲೆ ಅವರಿಟ್ಟ ನಂಬಿಕೆ ತೋರಿಸುತ್ತದೆ. ಕೆಲ ಹೊಡೆತಗಳನ್ನು ಮೊದಲೇ ಯೋಚಿಸಿದ್ದೆ. ಆದರೆ ಈ ಶಾಟ್‌ಗಳು ಕಳೆದ ಕೆಲ ವರ್ಷಗಳಿಂದ ನಾನು ಆಡುತ್ತಿದ್ದು ಅದರಲ್ಲೇನೂ ವಿಶೇಷತೆಯಿರಲಿಲ್ಲ" ಎಂದು ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯೆ ನೀಡಿದ್ದಾರೆ.

ನಂಬರ್ 1 ಟಿ20 ಬ್ಯಾಟರ್ ಆಗಿರುವ ಸೂರ್ಯಕುಮಾರ್ ಯಾದವ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಆರಂಭದಿಂದಲೇ ತಮ್ಮ ಎಂದಿನ ಶೈಲಿಯ ಆಕ್ರಮಣಕಾರಿ ಆಟಕ್ಕೆ ಮುಂದಾದರು. ರಾಜ್‌ಕೋಟ್ ಮೈದಾನದಲ್ಲಿ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಸೂರ್ಯಕುಮಾರ್ ತಮ್ಮ ಅರ್ಧಶತಕವನ್ನು 26 ಎಸೆತಗಲ್ಲಿ ಪೂರ್ಣಗೊಳಿಸಿದರೆ ಕೇವಲ 45 ಎಸೆತದಲ್ಲಿ ಶತಕದ ಗಡಿದಾಟಿದರು. ಈ ಮೂಲಕ ಚುಟುಕು ಮಾದರಿಯಲ್ಲಿ ತಮ್ಮ ಮೂರನೇ ಶತಕ ಪೂರ್ಣಗೊಳಿಸಿದರು.

ಈ ಪಂದ್ಯದಲ್ಲಿ ಒಟ್ಟು 51 ಎಸೆತ ಎದುರಿಸಿದ ಸೂರ್ಯಕುಮಾರ್ ಯಾದವ್ 7 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸಿ ಅಬ್ಬರಿಸಿದ್ದಾರೆ. 219ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿರುವ ಸೂರ್ಯ 112 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ. ಅಂತಿಮ ಹಂತದಲ್ಲಿ ಅಕ್ಷರ್ ಪಟೇಲ್ ಕೂಡ ಸ್ಪೋಟಕ ಆಟವಾಡುವ ಮೂಲಕ ತಂಡದ ಸ್ಕೋರ್ ಮತ್ತಷ್ಟು ಹೆಚ್ಚಲು ಕಾರಣವಾದರು. 9 ಎಸೆತ ಎದುರಿಸಿದ ಅಕ್ಷರ್ 21 ರನ್‌ಗಳಿಸಿ ಅಜೇಯವಾಗುಳಿದರು.

ಭಾರತ ಆಡುವ ಬಳಗ
ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಅರ್ಷ್‌ದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
ಬೆಂಚ್: ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಮುಖೇಶ್ ಕುಮಾರ್

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಅವಿಷ್ಕಾ ಫರ್ನಾಂಡೋ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬೆಂಚ್: ಲಹಿರು ಕುಮಾರ, ಭಾನುಕಾ ರಾಜಪಕ್ಸೆ,, ಅಶೇನ್ ಬಂಡಾರ, ಪ್ರಮೋದ್ ಮದುಶನ್, ದುನಿತ್ ವೆಳ್ಳಾಲಗೆ, ನುವಾನ್ ತುಷಾರ, ಸದೀರ ಸಮರವಿಕ್ರಮ

Story first published: Sunday, January 8, 2023, 2:30 [IST]
Other articles published on Jan 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+