Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಶ್ರೀಲಂಕಾ, ಮೊದಲ ಟಿ20 ಪಂದ್ಯ; Live ಸ್ಕೋರ್‌ ಹಾಗೂ ಪ್ಲೇಯಿಂಗ್ ‍XI

Ind vs SL: t20 series, 1st match, Toss report, Playing XI and Live score details

ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ತೀವ್ರ ಪೈಪೋಟಿಯನ್ನು ನಡೆಸಲಿದೆ.

ಇನ್ನು ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಬರಿಬ್ಬರಿ 6 ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಭಾಗಿಯಾಗಿದ್ದ ಕೆಲ ಪ್ರಮುಖ ಆಟಗಾರರ ಅಲಭ್ಯತೆ ಹಾಗೂ ಕೆಲ ಆಟಗಾರರು ಸೇರ್ಪಡೆಯಾಗಿರುವ ಕಾರಣ ಈ ಬದಲಾವನೆಗಳು ಆಗಿದೆ. ಇನ್ನು ಯುವ ಆಟಗಾರ ಋತುರಾಜ್ ಗಾಯಕ್ವಾಡ್ ಈ ಪಮದ್ಯದಲ್ಲಿಯೂ ಅವಕಾಶ ಪಡೆದಿಲ್ಲ. ಟಾಸ್ ಸಂದರ್ಬದಲ್ಲಿ ನಾಯಕ ರೋಹಿತ್ ಶರ್ಮಾ ಈ ಬಗ್ಗೆ ಪ್ರಸ್ತಾಪಿಸಿದ್ದು ಋತುರಾಜ್ ಗಾಯಕ್ವಾಡ್ ಈ ಪಮದ್ಯದಲ್ಲಿ ಆಡಬೇಕಾಗಿತ್ತು. ಆದರೆ ಮೊಣಕೈ ಗಾಯಕ್ಕೆ ಒಳಗಾಗಿರುವ ಕಾರಣ ಈ ಪಂದ್ಯದಲ್ಲಿ ಅವರು ಆಡುತ್ತಿಲ್ಲ ಎಂದು ತಿಳಿಸಿದ್ದಾರೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
51929

ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದ ಆಡುವ ಬಳಗದಲ್ಲಿ ಇಲ್ಲದ ಆಡು ಆಟಗಾರರು ಈ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬೂಮ್ರಾ, ಯುಜುವೇಂದ್ರ ಚಾಹಲ್ ಹಾಗೂ ದೀಪಕ್ ಹೂಡಾ ಈ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಈ ಪಂದ್ಯಕ್ಕಾಗಿ ಶ್ರೀಲಂಕಾ ತಂಡ ಕೂಡ ಎರಡು ಬದಲಾವಣೆ ಮಾಡಿಕೊಂಡಿದ್ದು ಚಾಂಡಿಮಲ್ ಹಾಗೂ ವಂಡರ್ಸೆ ಗಾಯದಿಂದ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ಮಹೀಶ್ ತೀಕ್ಷಣ ಹಾಗೂ ಕುಸಾಲ್ ಮೆಂಡಿಸ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್

ಶ್ರೀಲಂಕಾಪ್ಲೇಯಿಂಗ್ XI: ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ, ಚರಿತ್ ಅಸಲಂಕಾ, ದಿನೇಶ್ ಚಂಡಿಮಲ್(ವಿಕೆಟ್ ಕೀಪರ್), ಜನಿತ್ ಲಿಯಾನಗೆ, ದಸುನ್ ಶನಕಾ(ನಾಯಕ), ಚಾಮಿಕಾ ಕರುಣಾರತ್ನೆ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ದುಷ್ಮಂತ ಚಮೀರ, ಲಹಿರು ಕುಮಾರ

Story first published: Thursday, February 24, 2022, 19:55 [IST]
Other articles published on Feb 24, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+