ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾದ ಈ ಆಟಗಾರರು ಭಾರತಕ್ಕೆ ಅಪಾಯಕಾರಿ: ಟಿ20 ಸರಣಿಗೂ ಮುನ್ನ ಪಠಾಣ್ ಎಚ್ಚರಿಕೆ

Ind vs SL T20 series: Irfan Pathan said These Sri Lankan players can be threat to India

ಭಾರತ ಹಾಗೂ ಶ್ರೀಲಂಕಾ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಲು ಸಜ್ಜಾಗಿದೆ. ಜನವರಿ 3ರಂದು ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜನೆಯಾಗುವ ಮೂಲಕ ಈ ಸರಣಿಗೆ ಚಾಲನೆ ದೊರೆಯಲಿದೆ. ಟೀಮ್ ಇಂಡಿಯಾ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಈ ಸರಣಿಯಲ್ಲಿ ಕಣಕ್ಕಿಳಿಯುತ್ತಿದ್ದರೆ ಶ್ರೀಲಂಕಾ ಪೂರ್ಣ ಸಾಮರ್ಥ್ಯದೊಂದಿಗೆ ಕಣಕ್ಕಿಳಿಯಲು ಸಿದ್ಧವಾಗಿದೆ.

ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಭಾರತ ತಂಡ ಕಣಕ್ಕಿಳಿಯುತ್ತಿದ್ದು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಭುವನೇಶ್ವರ್ ಕುಮಾರ್ ಮೊದಲಾದ ಆಟಗಾರರು ಈ ಸರಣಿಯಲ್ಲಿ ಆಡುತ್ತಿಲ್ಲ. ಹಾರ್ದಿಕ್ ಪಾಂಡ್ಯ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಿದರೆ ಸೂರ್ಯಕುಮಾರ್ ಯಾದವ್ ಉಪನಾಯಕನ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ಇನ್ನು ಈ ಸರಣಿಯ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಪ್ರತಿಕ್ರಿಯೆ ನೀಡಿದ್ದು ಟೀಮ್ ಇಂಡಿಯಾ ಆಟಗಾರರಿಗೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

Team India 2023 : ಈ ಮೂರು ಪ್ರಮುಖ ಪಂದ್ಯಾವಳಿಗಳಲ್ಲಿ ಗೆಲ್ಲಲೇಬೇಕಿದೆ ಟೀಂ ಇಂಡಿಯಾTeam India 2023 : ಈ ಮೂರು ಪ್ರಮುಖ ಪಂದ್ಯಾವಳಿಗಳಲ್ಲಿ ಗೆಲ್ಲಲೇಬೇಕಿದೆ ಟೀಂ ಇಂಡಿಯಾ

ಶ್ರೀಲಂಕಾ ಕಳಪೆ ತಂಡವಲ್ಲ

ಶ್ರೀಲಂಕಾ ಕಳಪೆ ತಂಡವಲ್ಲ

ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಹಿನ್ನೆಲೆಯಲ್ಲಿ ಮಾತನಾಡಿರುವ ಇರ್ಫಾನ್ ಪಠಾಣ್ ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. "ಶ್ರೀಲಂಕಾ ಕಳಪೆ ತಂಡವಲ್ಲ. ಏಷ್ಯಾ ಕಪ್‌ನಲ್ಲಿ ಅವರು ಏನು ಮಾಡಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ. ಅವರು ನಿಜಕ್ಕೂ ಅದ್ಭುತವಾಗಿ ಆಡಿದ್ದರು. ಹಾಗಾಗಿ ನಾವು ಎಚ್ಚರಿಕೆಯಿಂದ ಆಡಬೇಕಿದೆ" ಎಂದಿದ್ದಾರೆ ಇರ್ಫಾನ್ ಪಠಾನ್. ಏಷ್ಯಾ ಕಪ್ ಟೂರ್ನಿಯ ಸೂಪರ್ 4 ಹಂತದಕಲ್ಲಿ ಭಾರತ ತಂಡಕ್ಕೆ ಎದುರಾಳಿಯಾಗಿದ್ದ ಶ್ರೀಲಂಕಾ 6 ವಿಕೆಟ್‌ಗಳಿಂದ ಸೋಲುಣಿಸಿತ್ತು. ಈ ಸೋಲಿನಿಂದಾಗಿ ಭಾರತ ತನ್ನ ಹೋರಾಟವನ್ನು ಸೂಪರ್ 4 ಹಂತಕ್ಕೆ ಅಂತ್ಯಗೊಳಿಸಿತ್ತು.

ಇವರಿಂದ ಇದೆ ಅಪಾಯ ಎಂದ ಪಠಾಣ್

ಇವರಿಂದ ಇದೆ ಅಪಾಯ ಎಂದ ಪಠಾಣ್

ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡಕ್ಕೆ ಅಪಾಯವನ್ನುಂಟು ಮಾಡುವ ಲಂಕಾದ ಆಟಗಾರರನ್ನು ಹೆಸರಿಸಿದ್ದಾರೆ ಪಠಾಣ್. ಕುಸಾಲ್ ಮೆಂಡಿಸ್, ವನಿಂದು ಹಸರಂಗಾ, ಲಹಿರು ಕುಮಾರ, ಮಹೀಶ್ ತೀಕ್ಷಣ ಮತ್ತು ನಾಯಕ ದಸುನ್ ಶನಕ ಭಾರತ ತಂಡಕ್ಕೆ ಈ ಸರಣಿಯಲ್ಲಿ ನಿಜವಾಗಿಯೂ ಅಪಾಯವನ್ನು ತಂದೊಡ್ಡುವ ಆಟಗಾರರಾಗಿದ್ದಾರೆ ಎಂದಿದ್ದಾರೆ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಪಠಾಣ್. ಇನ್ನು ಶ್ರೀಲಂಕಾ ನಾಯಕ ದಸುನ್ ಶನಕ ಅವರನ್ನು ವಿಶೇಷವಾಗಿ ಉಲ್ಲೇಖಿಸಿರುವ ಪಠಾಣ್ ಆತನೋರ್ವ ನಿರ್ಭೀತ ಆಟಗಾರ ಎಂದಿದ್ದಾರೆ.

ಮೂರು ಪಂದ್ಯಗಳ ಟಿ20 ಸರಣಿ

ಮೂರು ಪಂದ್ಯಗಳ ಟಿ20 ಸರಣಿ

ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದ್ದು ಜನವರಿ 3 ಮಂಗಳವಾರದಂದು ಈ ಪಂದ್ಯ ನಡೆಯಲಿದೆ. ಎರಡನೇ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಜನವರಿ 5ರಂದು ನಡೆಯಲಿದೆ. ಇನ್ನು ಮೂರನೇ ಹಾಗೂ ಅಂತಿಮ ಪಂದ್ಯ ಜನವರಿ 7ರಂದು ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಟಿ20 ಸರಣಿಯ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಟೀಮ್ ಇಂಡಿಯಾ: ಹಾರ್ದಿಕ್ ಪಾಂಡ್ಯ (ನಾಯಕ), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ಮಾವಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಸದೀರ ಸಮರವಿಕ್ರಮ, ಕುಸಲ್ ಮೆಂಡಿಸ್, ಭಾನುಕಾ ರಾಜಪಕ್ಸೆ, ಅಶೇನ್ ಬಂಡಾರ, ಮಹೇಶ್ ತೀಕ್ಷಣ, ದಿಲ್ಶನ್ ಮಧುಶಂಕ, ಕಸುನ್ ರಜಿತ, ದುನಿತ್ ವೆಲ್ಲಲಾಗೆ, ಪ್ರಮೋದ್ ಮದುಶನ್, ಲಹಿರು ಕುಮಾರ, ನುವಾನ್ ತುಷಾರ

Story first published: Sunday, January 1, 2023, 18:47 [IST]
Other articles published on Jan 1, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X