
ಸತತವಾಗಿ ಪಂದ್ಯಗಳನ್ನು ಆಡಲು ಸಾಧ್ಯವಿಲ್ಲ
ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೂ ಮುನ್ನ ರೋಹಿತ್ ಶರ್ಮಾ ತಮ್ಮ ಟಿ20 ಕ್ರಿಕೆಟ್ ಭವಿಷ್ಯದ ಬಗ್ಗೆ ಹಬ್ಬಿರುವ ಊಹಾಪೋಹಗಳಿಗೆ ಉತ್ತರಿಸಿದರು ಮತ್ತು ಚುಟುಕು ಕ್ರಿಕೆಟ್ ಅನ್ನು 'ಬಿಟ್ಟುಕೊಡಲು ನಿರ್ಧರಿಸಿಲ್ಲ' ಎಂದು ಖಚಿತಪಡಿಸಿದರು.
"ಮೊದಲನೆಯದಾಗಿ ಸತತವಾಗಿ ಪಂದ್ಯಗಳನ್ನು ಆಡಲು ಸಾಧ್ಯವಿಲ್ಲ. ಎಲ್ಲಾ ಸ್ವರೂಪದ ಕ್ರಿಕೆಟ್ ಆಡುವ ಆಟಗಾರರಿಗೆ ಹೆಚ್ಚಿನ ವಿಶ್ರಾಂತಿಯನ್ನು ನೀಡಬೇಕು. ನನಗೂ ಕೂಡ ವಿಶ್ರಾಂತಿಯ ಅಗತ್ಯವಿರುತ್ತದೆ," ಎಂದರು.

ನಾನು ಟಿ20 ಸ್ವರೂಪವನ್ನು ಬಿಟ್ಟುಕೊಡಲು ನಿರ್ಧರಿಸಿಲ್ಲ
"ನಾವು ಮುಂದೆ ನ್ಯೂಜಿಲೆಂಡ್ ವಿರುದ್ಧ ಮೂರು ಟಿ20 ಪಂದ್ಯಗಳನ್ನು ಆಡಲಿದ್ದೇವೆ. 2023ರ ಐಪಿಎಲ್ ನಂತರ ಏನಾಗುತ್ತದೆ ಎಂಬುದನ್ನು ನೋಡುತ್ತೇವೆ. ಸದ್ಯಕ್ಕೆ ನಾನು ಟಿ20 ಸ್ವರೂಪವನ್ನು ಬಿಟ್ಟುಕೊಡಲು ನಿರ್ಧರಿಸಿಲ್ಲ," ಎಂದು ರೋಹಿತ್ ಶರ್ಮಾ ಸೋಮವಾರ ನಡೆದ ಪಂದ್ಯದ ಪೂರ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಂಗಳವಾರ (ಜನವರಿ 10) ಗುವಾಹಟಿಯಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಜನವರಿ 12 ಮತ್ತು 15ರಂದು ಕ್ರಮವಾಗಿ ಕೋಲ್ಕತ್ತಾ ಮತ್ತು ತಿರುವನಂತಪುರದಲ್ಲಿ ಉಳಿದ ಎರಡು ಏಕದಿನ ಪಂದ್ಯಗಳು ನಡೆಯಲಿವೆ.
ಮಂಗಳವಾರದಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವು ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಅವರ ಸೇವೆಯನ್ನು ಹೊಂದಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.

ಟಿ20 ಸರಣಿಯನ್ನು ಭಾರತ ತಂಡ 2-1 ಅಂತರದಲ್ಲಿ ಗೆದ್ದುಕೊಂಡಿತ್ತು
ಇನ್ನು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಸ್ಟಾರ್ ಆಟಗಾರರು ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ವಿಶ್ರಾಂತಿ ಪಡೆದ ನಂತರ ಏಕದಿನ ತಂಡಕ್ಕೆ ಮರಳುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ 2-1 ಅಂತರದಲ್ಲಿ ಗೆದ್ದುಕೊಂಡಿತ್ತು.
ಆಸ್ಟ್ರೇಲಿಯ ವಿರುದ್ಧ ಫೆಬ್ರವರಿ-ಮಾರ್ಚ್‌ನಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿಯೊಂದಿಗೆ ಭಾರತ ತಂಡವು ಹೆಚ್ಚಿನ ಕ್ರಿಕೆಟ್ ಸರಣಿಗಳನ್ನು ಆಡಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅಗ್ರ ಎರಡು ಸ್ಥಾನಕ್ಕಾಗಿ ಸ್ಪರ್ಧೆಯಲ್ಲಿದ್ದಾರೆ. ವರ್ಷದ ಅಂತ್ಯದ ವೇಳೆಗೆ ಐಸಿಸಿ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯನ್ನು ಭಾರತ ಆಯೋಜಿಸಲಿದೆ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ಪೂರ್ಣ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಅರ್ಶ್‌ದೀಪ್ ಸಿಂಗ್.


Click it and Unblock the Notifications
