49ನೇ ಶತಕದ ಅಂಚಿನಲ್ಲಿ ಮತ್ತೆ ಎಡವಿದ ಕೊಹ್ಲಿ: ಪ್ರಿನ್ಸ್‌ಗೂ ದಕ್ಕದ ಶತಕ
ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಮತ್ತೊಂದು ಶತಕ ಸಿಡಿಸುವ ಅದ್ಭುತ ಅವಕಾಶವನ್ನು ಕಳೆದುಕೊಂಡಿದ್ದಾರೆ. ಅಭಿಮಾನಿಗಳೆಲ್ಲರೂ ನಿರೀಕ್ಷಿಸುತ್ತಿದ್ದ 49ನೇ ಶತಕದ ಅತ್ಯಂತ ಸನಿಹಕ್ಕೆ ಬಂದಿದ್ದ ವಿರಾಟ್ ಕೊಹ್ಲಿ 88 ರನ್‌ಗಳಿಸಿದ್ದಾಗ ಎಡವಿ ವಿಕೆಟ್ ಕಳೆದುಕೊಂಡರು. ಈ ಮೂಲಕ ಏಕದಿನ ಶತಕದ ವಿಶ್ವದಾಖಲೆ ಸರಿಗಟ್ಟುವ ಅವಕಾಶದಿಂದ ಮತ್ತೊಮ್ಮೆ ವಂಚಿತವಾಗಿದ್ದಾರೆ.
ಈ ಪಂದ್ಯದಲ್ಲಿ 94 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 11 ಬೌಂಡರಿ ಸಿಡಿಸಿ ಶತಕದತ್ತ ಹೆಜ್ಜೆಯಿಟ್ಟಿದ್ದರು. ಆದರೆ ಮದುಶಂಕ ಎಸೆತವನ್ನು ಸರಿಯಾಗಿ ಗುರಿತಿಸಲಾಗದ ಕೊಹ್ಲಿ ಕ್ಯಾಚ್ ನೀಡಿ ನಿರ್ಗಮಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಶತಕವನ್ನು ಸಿಡಿಸುವ ಅದ್ಭುತ ಅವಕಾಶವನ್ನು ಕಳೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಕಳೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿಯೂ ಕೊಹ್ಲಿ ಶತಕ ಸಿಡಿಸುವ ಅವಕಾಶವನ್ನು ಕೊನೆಯ ಕ್ಷಣದಲ್ಲಿ ಕಳೆದುಕೊಂಡು ನಿರಾಸೆ ಅನುಭವಿಸಿದ್ದರು. ಆ ಪಂದ್ಯದಲ್ಲಿ ಕೊಹ್ಲಿ 95 ರನ್‌ಗೆ ವಿಕೆಟ್ ಕಳೆದುಕೊಂಡಿದ್ದರು.

ಇನ್ನು ಶತಕದಿಂದ ಚಂಚಿತವಾದರೂ ಈ ಪಂದ್ಯದಲ್ಲಿ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಶ್ರೀಲಂಕಾ ತಂಡದ ವಿರುದ್ಧವೇ 4000ಕ್ಕೂ ಅಧಿಕ ರನ್‌ಗಳನ್ನು ಸಿಡಿಸಿದ ಆಟಗಾರ ಎನಿಸಿಕೊಂಡಿರುವ ಕೊಹ್ಲಿ ಸಚಿನ್ ತೆಂಡೂಲ್ಕರ್ ಬಳಿಕ ಈ ಸಾಧನೆ ಮಾಡಿದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ವಿರಾಟ್ ಕೊಹ್ಲಿ 118ನೇ 50+ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಸಾರ್ವಕಾಲಿಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಕುಮಾರ್ ಸಂಗಕ್ಕರ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈಗ ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಮಾತ್ರವೇ ಕೊಹ್ಲಿಗಿಂತ ಮುಂದಿದ್ದು 145 ಬಾರಿ 50+ ರನ್ ಬಾರಿಸಿ ಈ ದಾಖಲೆಯನ್ನು ತಮ್ಮಲ್ಲಿ ಹೊಂದಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಯುವ ಆಟಗಾರ ಶುಬ್ಮನ್ ಗಿಲ್ ಕೂಡ ಶತಕದ ಅಂಚಿನಲ್ಲಿ ಎಡವಿ ನಿರಾಸೆ ಅನುಭವಿಸಿದರು. ಶುಬ್ಮನ್ ಗಿಲ್ 92 ರನ್‌ಗಳಿಸಿದಾ ಮದುಶಂಕ ಅವರಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿಕೊಂಡರು. ಈ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳು ಸೇರಿಕೊಂಡಿದೆ.
ಕೊಹ್ಲಿ ಹಾಗೂ ಶುಬ್ಮನ್ ಗಿಲ್ ಈ ಪಂದ್ಯದಲ್ಲಿ ಎರಡನೇ ವಿಕೆಟ್‌ಗೆ ಭರ್ಜರಿ 189 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದ ಬಳಿಕ ಎರಡನೇ ಎಸೆತದಲ್ಲಿ ಬೌಲ್ಡ್ ಆಗಿ ಆಘಾತ ಅನುಭವಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications