ಕೊಹ್ಲಿ 100ನೇ ಟೆಸ್ಟ್ ಪಂದ್ಯದ ಕುರಿತು ಹೊರಬಿತ್ತು ಮತ್ತೊಂದು ಬೇಸರದ ಸುದ್ದಿ

ಕ್ರಿಕೆಟ್ ಜಗತ್ತಿನಲ್ಲಿ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚಾಗಿ ವಿವಾದಕ್ಕೀಡಾದ ಕ್ರಿಕೆಟಿಗ ಯಾರು ಎಂಬ ಪ್ರಶ್ನೆ ಎದುರಾದರೆ ಬಹುತೇಕ ಕ್ರಿಕೆಟ್ ಅಭಿಮಾನಿಗಳು ಹೆಚ್ಚಾಗಿ ವಿರಾಟ್ ಕೊಹ್ಲಿ ಎಂದೇ ಉತ್ತರವನ್ನು ನೀಡುತ್ತಾರೆ. ಹೌದು, ಭಾರತ ಕ್ರಿಕೆಟ್ ತಂಡದ ನಾಯಕತ್ವ ಕಳೆದುಕೊಂಡ ಕಾರಣದಿಂದಾಗಿ ವಿರಾಟ್ ಕೊಹ್ಲಿ ಕೆಲ ವಿವಾದಗಳಿಗೆ ಒಳಗಾಗಿದ್ದರು. ಅದರಲ್ಲಿಯೂ ಕಳೆದ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ತಾವೇ ಸ್ವತಃ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವಕ್ಕೆ ರಾಜೀನಾಮೆಯನ್ನು ನೀಡಿದ ನಂತರದ ವಿದ್ಯಮಾನಗಳಿಂದ ವಿರಾಟ್ ಕೊಹ್ಲಿ ಹೆಚ್ಚು ವಿವಾದಕ್ಕೆ ಒಳಗಾದರು ಎಂದೇ ಹೇಳಬಹುದು. ಹೌದು, ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸಿದ ನಂತರ ಏಕದಿನ ತಂಡದ ನಾಯಕತ್ವದಿಂದಲೂ ಕೂಡ ಕೆಳಗಿಳಿಸಲ್ಪಟ್ಟರು.
ಹೀಗೆ ಭಾರತ ಟಿ ಟ್ವೆಂಟಿ ಹಾಗೂ ಏಕದಿನ ತಂಡಗಳ ನಾಯಕತ್ವವನ್ನು ಕಳೆದುಕೊಂಡ ವಿರಾಟ್ ಕೊಹ್ಲಿ ಕಳೆದ ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ಪತ್ರಿಕಾಗೋಷ್ಠಿಯೊಂದನ್ನು ನಡೆಸುವುದರ ಮೂಲಕ ಬಿಸಿಸಿಐ ಹಾಗೂ ಸೌರವ್ ಗಂಗೂಲಿ ವಿರುದ್ಧ ನೇರವಾದ ಹೇಳಿಕೆಗಳನ್ನು ನೀಡಿ ಭಾರೀ ವಿವಾದಕ್ಕೆ ಒಳಗಾಗಿದ್ದರು. ತನ್ನ ಈ ಪತ್ರಿಕಾಗೋಷ್ಠಿಯಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದ್ದ ವಿರಾಟ್ ಕೊಹ್ಲಿ ನಂತರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯಗೊಂಡ ಬಳಿಕ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ಕೂಡ ರಾಜೀನಾಮೆಯನ್ನು ಸಲ್ಲಿಸಿದರು. ಹೀಗೆ ವಿರಾಟ್ ಕೊಹ್ಲಿ 99 ಟೆಸ್ಟ್ ಪಂದ್ಯಗಳನ್ನಾಡಿದ ಕೂಡಲೇ ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದು, ಸದ್ಯ ತಮ್ಮ ನೂರನೇ ಟೆಸ್ಟ್ ಪಂದ್ಯದಲ್ಲಿ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ.
ಹೌದು, ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ಕಳೆದುಕೊಂಡಿರುವ ವಿರಾಟ್ ಕೊಹ್ಲಿ ತಮ್ಮ ನೂರನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಅಡಿಯಲ್ಲಿ ಕಣಕ್ಕಿಳಿಯಲಿದ್ದಾರೆ ಹಾಗೂ ಶ್ರೀಲಂಕಾ ವಿರುದ್ಧ ವಿರಾಟ್ ಕೊಹ್ಲಿಯವರ ಈ ನೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಮೊದಲಿಗೆ ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ನಂತರದ ದಿನಗಳಲ್ಲಿ ವಿರಾಟ್ ಕೊಹ್ಲಿಯ ನೂರನೇ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯುವುದಿಲ್ಲ ಬದಲಾಗಿ ಮೊಹಾಲಿಯಲ್ಲಿ ನಡೆಯಲಿದೆ ಎಂದು ಬಿಸಿಸಿಐ ಖಚಿತಪಡಿಸಿತು. ಬಿಸಿಸಿಐ ನೀಡಿದ ಈ ಸುದ್ದಿ ವಿರಾಟ್ ಕೊಹ್ಲಿ ಅಭಿಮಾನಿಗಳ ಬೇಸರಕ್ಕೂ ಕೂಡ ಕಾರಣವಾಗಿತ್ತು. ಹೀಗೆ ಆರಂಭದಲ್ಲಿಯೇ ಅಭಿಮಾನಿಗಳಿಗೆ ನಿರಾಸೆಯನ್ನು ಮೂಡಿಸಿದ್ದ ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಪಂದ್ಯ ಇದೀಗ ಮತ್ತೊಮ್ಮೆ ನಿರಾಸೆಯನ್ನು ಮೂಡಿಸಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಮುಂದೆ ಇದೆ..

ಅಭಿಮಾನಿಗಳಿಗಿಲ್ಲ ಪಂದ್ಯ ವೀಕ್ಷಿಸುವ ಭಾಗ್ಯ
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎನ್ನಲಾಗುತ್ತಿದ್ದ ವಿರಾಟ್ ಕೊಹ್ಲಿಯ ನೂರನೇ ಟೆಸ್ಟ್ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಮಾರ್ಚ್ 4ರಿಂದ ಶ್ರೀಲಂಕಾ ವಿರುದ್ಧ ಆರಂಭವಾಗಲಿದ್ದು ಈ ಪಂದ್ಯ ವೀಕ್ಷಿಸಲು ಅಭಿಮಾನಿಗಳಿಗೆ ಅವಕಾಶವಿರುವುದಿಲ್ಲ ಎಂದು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸಿಇಒ ದೀಪಕ್ ಶರ್ಮಾ ತಿಳಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಪಂದ್ಯವನ್ನು ಮೈದಾನದಲ್ಲಿ ವೀಕ್ಷಿಸಿ ಸಂಭ್ರಮಿಸಬೇಕು ಎಂದುಕೊಂಡಿದ್ದ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಭಾರಿ ನಿರಾಸೆಯುಂಟಾಗಿದೆ.

ವಿರಾಟ್ ಕೊಹ್ಲಿ ಟೆಸ್ಟ್ ಅಂಕಿ ಅಂಶ
ಇನ್ನು ಇದುವರೆಗೂ ಒಟ್ಟು 99 ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 7962 ರನ್ ಕಲೆಹಾಕಿದ್ದು 29 ಶತಕಗಳನ್ನು ಬಾರಿಸಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ಶತಕ ಬಾರಿಸದೇ 2 ವರ್ಷಗಳೇ ಕಳೆದಿದ್ದು ತಮ್ಮ ನೂರನೇ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್ (ಫಿಟ್‌ನೆಸ್ ಆಧಾರದ ಮೇಲೆ), ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್, ಜೆ ಬುಮ್ರಾ, ಎಂ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications