ಭಾರತ V/S ದಕ್ಷಿಣ ಆಫ್ರಿಕಾ: ಪ್ರೊಮೊ ರಿಲೀಸ್ ಮಾಡಿದ ಕ್ರಿಕೆಟ್ ಸೌತ್‌ಆಫ್ರಿಕಾ

ಡಿಸೆಂಬರ್ 26ರಿಂದ ಪ್ರಾರಂಭಗೊಳ್ಳಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕಾವು ದಿನೇ ದಿನೇ ಹೆಚ್ಚಾಗಿದೆ. ಎರಡು ಬಲಿಷ್ಠ ತಂಡಗಳ ಮುಖಾಮುಖಿಗೆ ವೇದಿಕೆ ಸಜ್ಜಾಗಿದ್ದು, ಕೌಂಟ್‌ಡೌನ್ ಶುರುವಾಗಿದೆ.
ಕ್ರಿಕೆಟ್ ಸೌತ್ ಆಫ್ರಿಕಾ (CSA) ಭಾರತ ಹಾಗೂ ದಕ್ಷಿಣ ಆಫ್ರಿಕಾ ಪ್ರವಾಸದ ಪ್ರೋಮೋವನ್ನು ಬಿಡುಗಡೆ ಮಾಡಿದೆ. ಈ ಪ್ರವಾಸದ ಮೊದಲ ಪಂದ್ಯಕ್ಕೆ ಎರಡು ದಿನಗಳಿಗಿಂತ ಕಡಿಮೆ ಸಮಯವಿದೆ. ಮಹಾತ್ಮಾ ಗಾಂಧಿ ಮತ್ತು ಮದರ್ ತೆರೇಸಾ ಕೂಡ ಕಾಣಿಸಿಕೊಂಡ ಒಂದು ನಿಮಿಷದ ಪ್ರೋಮೋ ಇದಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸವು ಮೂರು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಪ್ರಾರಂಭವಾಗುತ್ತದೆ. ಭಾನುವಾರ, ಡಿಸೆಂಬರ್ 26 ರಂದು ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಪ್ರಾರಂಭವಾಗುತ್ತದೆ. ಇನ್ನೆರಡು ಟೆಸ್ಟ್ ಪಂದ್ಯಗಳು ಜೋಹಾನ್ಸ್ ಬರ್ಗ್ ಮತ್ತು ಕೇಪ್ ಟೌನ್ ನಲ್ಲಿ ನಡೆಯಲಿವೆ.
ಪ್ರೊಮೊದಲ್ಲಿ ಭಾರತ ಹಾಗೂ ಹಿಂದಿನ ದಕ್ಷಿಣ ಆಫ್ರಿಕಾ ಪ್ರವಾಸದ ಒಂದು ನೋಟವನ್ನು ನೀಡಿದೆ. ಮಹಾತ್ಮ ಗಾಂಧಿಯವರೊಂದಿಗೆ ವೀಡಿಯೋ ಪ್ರಾರಂಭವಾದ್ರೆ, ನಂತರ ಮೊಹಮ್ಮದ್ ಅಜರುದ್ದೀನ್ ನೇತೃತ್ವದ ಭಾರತ ತಂಡದೊಂದಿಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ಗೆ ಮರಳುತ್ತಿರುವ ದೃಶ್ಯ ಕಂಡುಬಂತು. ಈ ಸಂದರ್ಭದಲ್ಲಿ, ದಕ್ಷಿಣ ಆಫ್ರಿಕಾ ಕೂಡ ಥ್ಯಾಂಕ್ ಯೂ ಇಂಡಿಯಾ ಬ್ಯಾನರ್ ಅನ್ನು ಹಾಕುತ್ತಿರುವುದು ಕಂಡುಬಂದಿದೆ. ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿ ಮಾತನಾಡುತ್ತಿರುವ ದೃಶ್ಯಗಳೂ ಇವೆ.
ಈ ಮೊದಲು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಡಿಸೆಂಬರ್ 17 ರಂದು ಜೋಹಾನ್ಸ್‌ಬರ್ಗ್‌ನ ಪ್ರತಿಷ್ಠಿತ ವಾಂಡರರ್ಸ್‌ನಲ್ಲಿ ಆರಂಭಿಕ ಟೆಸ್ಟ್‌ನೊಂದಿಗೆ ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಕೋವಿಡ್-19 ವೈರಸ್‌ನ ಓಮಿಕ್ರಾನ್ ರೂಪಾಂತರದಿಂದಾಗಿ ಟೂರ್ನಮೆಂಟ್ ಒಂದು ವಾರಕ್ಕೂ ಹೆಚ್ಚು ದಿನಗಳ ಕಾಲ ಮುಂದೂಡಿತು. ಕ್ರಿಕೆಟಿಗರ ಸುರಕ್ಷತೆ ಮತ್ತು ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪಂದ್ಯಗಳನ್ನು ಮುಂದೂಡಬೇಕಾಯಿತು. ಅಲ್ಲದೆ ನಡೆಯಬೇಕಿದ್ದ ಟಿ20 ಸರಣಿಯನ್ನು ಮುಂದಿನ ವರ್ಷಕ್ಕೆ ಫಿಕ್ಸ್ ಮಾಡಲಾಗಿದೆ.
ಇದಕ್ಕೂ ಮೊದಲು, ನೆದರ್ಲೆಂಡ್ಸ್ ವಿರುದ್ಧದ ದಕ್ಷಿಣ ಆಫ್ರಿಕಾ ಏಕದಿನ ಸರಣಿಯನ್ನು ಮಧ್ಯದಲ್ಲಿ ನಿಲ್ಲಿಸಬೇಕಾಯಿತು. ಇದರ ನಂತರ, ಕೊರೊನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಅಗತ್ಯ ವ್ಯವಸ್ಥೆಗಳನ್ನು ಒದಗಿಸುವುದಾಗಿ ಸಿಎಸ್ಎ ಬಿಸಿಸಿಐಗೆ ಭರವಸೆ ನೀಡಿತು.
ಇದೇ ವೇಳೆ ಭಾರತ ಟೆಸ್ಟ್ ಸರಣಿಗೆ 18 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಅಭ್ಯಾಸದ ವೇಳೆ ರೋಹಿತ್ ಶರ್ಮಾ ಮಂಡಿರಜ್ಜು ಗಾಯಕ್ಕೆ ಒಳಗಾದ ಕಾರಣ ಗಾಯದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಪ್ರಿಯಾಂಕ್ ಪಾಂಚಾಲ್ ಬಂದಿದ್ದಾರೆ.
ದಕ್ಷಿಣ ಆಫ್ರಿಕಾ ಎ ವಿರುದ್ಧ ಭಾರತ ಎ ಪರ ಪಾಂಚಾಲ್ ಆಡಿದ್ದಾರೆ. ಡಿಸೆಂಬರ್ 26ರ ಭಾನುವಾರದಂದು ಬಿಸಿಸಿಐ ಏಕದಿನ ತಂಡವನ್ನು ಹೆಸರಿಸಲಿದೆ ಎಂಬ ವರದಿಗಳೂ ಇವೆ. ಇತ್ತೀಚೆಗಷ್ಟೇ ಏಕದಿನ ಮತ್ತು ಟಿ20 ನಾಯಕತ್ವ ಕಳೆದುಕೊಂಡಿರುವ ವಿರಾಟ್ ಕೊಹ್ಲಿ ಏಕದಿನ ಸರಣಿಯಿಂದ ಹಿಂದೆ ಸರಿಯುತ್ತಾರೆ ಎಂಬ ಊಹಾಪೋಹಗಳ ನಡುವೆಯಲ್ಲಿ 50 ಓವರ್‌ಗಳ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ.
ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್
ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್(ಉಪನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಪ್ರಿಯಾಂಕ್ ಪಾಂಚಾಲ್, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.
ಸ್ಟ್ಯಾಂಡ್ ಬೈ ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಾಹರ್, ಅರ್ಜಾನ್ ನಾಗ್ವಾಸ್ವಾಲ್ಲಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications