IND vs WI 1st T20: ಟಿ20 ಕ್ರಿಕೆಟ್‌ನಲ್ಲಿ 200ನೇ ಪಂದ್ಯವಾಡಲು ಸಿದ್ಧವಾದ ಭಾರತ; ಈ ಸಾಧನೆ ಮಾಡಿದ 2ನೇ ತಂಡ
ಕೆರಿಬಿಯನ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ, ಟೆಸ್ಟ್ ಮತ್ತು ಏಕದಿನ ಸರಣಿಗಳು ಮುಗಿದ ನಂತರ, ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯತ್ತ ಗಮನ ಹರಿಸಿದೆ.
ಗುರುವಾರ, ಆಗಸ್ಟ್ 3ರಂದು ಟ್ರಿನಿಡಾಡ್‌ನ ತರೂಬಾದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಆರಂಭವಾಗುವ ಮೊದಲ ಟಿ20 ಪಂದ್ಯದಲ್ಲಿ ಎರಡು ತಂಡಗಳು ಮುಖಾಮುಖಿಯಾಗಲಿವೆ.

ಗಮನಾರ್ಹವಾಗಿ, ಇದು ಭಾರತ ತಂಡಕ್ಕೆ ಐತಿಹಾಸಿಕ ಪಂದ್ಯವಾಗಲಿದೆ. ಏಕೆಂದರೆ ಮೆನ್ ಇನ್ ಬ್ಲ್ಯೂ 2006ರಲ್ಲಿ ತಮ್ಮ ಮೊದಲ ಟಿ20 ಪಂದ್ಯವನ್ನು ಆಡಿದ ನಂತರ, ಇದೀಗ 200ನೇ ಟಿ20 ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ.
ಭಾರತ ತಂಡ ಇದುವರೆಗೆ 199 ಟಿ20 ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ 127 ಪಂದ್ಯಗಳನ್ನು ಗೆದ್ದಿದೆ ಮತ್ತು ಭಾರತ ತಂಡದ ಹೆಸರಿಗೆ ಒಂದು ಟಿ20 ವಿಶ್ವಕಪ್ ಕೂಡ ಸೇರಿದೆ.
ಪಂದ್ಯಗಳ ಗೆಲ್ಲುವ ವಿಷಯದಲ್ಲಿ ಭಾರತ ಟಿ20 ಸ್ವರೂಪದಲ್ಲಿ ಎರಡನೇ ಅತ್ಯಂತ ಯಶಸ್ವಿ ತಂಡವಾಗಿದೆ. 223 ಪಂದ್ಯಗಳಲ್ಲಿ 134 ಪಂದ್ಯಗಳನ್ನು ಗೆದ್ದಿರುವ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡ ಮೊದಲ ಯಶಸ್ವಿ ತಂಡವಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಮೈದಾನಕ್ಕಿಳಿಯುವ ಮೂಲಕ ಭಾರತ 200 ಟಿ20 ಪಂದ್ಯಗಳನ್ನು ಆಡಿದ ಎರಡನೇ ತಂಡವಾಗಲಿದೆ.
ಭಾರತ ತಂಡ ಡಿಸೆಂಬರ್ 1, 2006ರಂದು ಜೋಹಾನ್ಸ್‌ಬರ್ಗ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ವೀರೇಂದ್ರ ಸೆಹ್ವಾಗ್ ನಾಯಕತ್ವದಲ್ಲಿ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿತು. ಮೊದಲ ಪಂದ್ಯವನ್ನು ಆರು ವಿಕೆಟ್‌ಗಳಿಂದ ಗೆದ್ದಿತ್ತು.
ನಂತರ ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತಂಡವು 2007ರಲ್ಲಿ ಟಿ20 ಸ್ವರೂಪದಲ್ಲಿ ಕೇವಲ ಒಂದು ಪಂದ್ಯವನ್ನು ಆಡುವ ಮೂಲಕ ಚೊಚ್ಚಲ ಟಿ20 ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆದಿತ್ತು.
2007ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ಚೊಚ್ಚಲ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.
ಅಂದಿನ ಭಾರತ ತಂಡವು ಟಿ20 ಸ್ವರೂಪದ ಮೊದಲ ವಿಶ್ವ ಚಾಂಪಿಯನ್‌ಗಳೆಂದು ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಹೆಸರನ್ನು ಸ್ಥಾಪಿಸಿಕೊಂಡಿತು.
ವೆಸ್ಟ್ ಇಂಡೀಸ್ ವಿರುದ್ಧದ ಭಾರತ ಟಿ20 ತಂಡ
ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ತಿಲಕ್ ವರ್ಮ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಕುಲದೀಪ್ ಯಾದವ್, ಅವೇಶ್ ಖಾನ್, ರವಿ ಬಿಷ್ಣೋಯ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications