For Quick Alerts
ALLOW NOTIFICATIONS  
For Daily Alerts
 

IND vs WI 1st T20: ವಿಂಡೀಸ್ ವಿರುದ್ಧ ಭಾರತದ ಸಂಭಾವ್ಯ ಆಡುವ ಬಳಗ; ಯಶಸ್ವಿ, ತಿಲಕ್ ವರ್ಮಾ ಪದಾರ್ಪಣೆ?

ಗುರುವಾರ, ಆಗಸ್ಟ್ 3ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸೆಣಸಾಡಲಿವೆ.

ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತೀಯ ಯುವ ತಂಡವು ಟಿ20 ಸರಣಿಗೆ ಸಜ್ಜಾಗಿದ್ದು, ವೆಸ್ಟ್ ಇಂಡೀಸ್ ವಿರುದ್ಧ ಅತ್ಯಂತ ನೆಚ್ಚಿನ ತಂಡವಾಗಿ ಮೈದಾನಕ್ಕೆ ಇಳಿಯಲಿದೆ. ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ತೋರಿಸಲು ಸೂಕ್ತ ವೇದಿಕೆ ಒದಗಿಸುತ್ತದೆ.

IND vs WI 1st T20: Indias Probable Playing 11 Against West Indies; Is Yashasvi Jaiswal, Tilak Verma Debut?

ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ತಂಡವು ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ ಮತ್ತು ಮುಖೇಶ್ ಕುಮಾರ್ ಅವರಂತಹ ಯುವ ಆಟಗಾರರಿಗೆ ಅವಕಾಶ ಒದಗಿಸಲು ಎದುರು ನೋಡುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನಲ್ಲಿನ ಅತ್ಯುತ್ತಮ ಪ್ರದರ್ಶನಗಳು ತಿಲಕ್ ವರ್ಮಾ ಮತ್ತು ಯಶಸ್ವಿ ಜೈಸ್ವಾಲ್‌ಗೆ ಭಾರತದ ಟಿ20 ತಂಡಕ್ಕೆ ಆಯ್ಕೆಯಾಗಲು ದಾರಿ ಮಾಡಿಕೊಟ್ಟವು. ಯುವ ಆಟಗಾರರು ಈ ಅವಕಾಶವನ್ನು ಎರಡು ಕೈಗಳಿಂದ ಬಳಸಿಕೊಳ್ಳಲು ಉತ್ಸುಕರಾಗಿದ್ದಾರೆ.

IND vs WI 1st T20: Indias Probable Playing 11 Against West Indies; Is Yashasvi Jaiswal, Tilak Verma Debut?

ಇನ್ನು ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ನೇತೃತ್ವದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಪುನಃ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅನುಭವಿ ಬ್ಯಾಟ್ಸ್‌ಮನ್-ವಿಕೆಟ್ ಕೀಪರ್ ಸಂಯೋಜನೆಯು ಈ ಅವಕಾಶವನ್ನು ಬಳಸಿಕೊಳ್ಳಲು ಮತ್ತು ಏಕದಿನ ವಿಶ್ವಕಪ್ ತಂಡದಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳುವ ಗುರಿ ನೀಡಲಾಗಿದೆ.

ಹಾರ್ದಿಕ್ ಪಾಂಡ್ಯ ಭಾರತ ಟಿ20 ತಂಡವನ್ನು ಮುನ್ನಡೆಸಲಿದ್ದು, ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಭಾರತೀಯ ತಂಡ ಯಶಸ್ವಿ ಜೈಸ್ವಾಲ್ ಮತ್ತು ತಿಲಕ್ ವರ್ಮಾ ಅವರಂತಹ ಅದ್ಭುತ ಪ್ರತಿಭೆಗಳನ್ನು ಒಳಗೊಂಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ತಮ್ಮ ಪಾದಾರ್ಪಣೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನ ರಾಯಲ್ಸ್ ತಂಡದ 21 ವರ್ಷದ ಬ್ಯಾಟರ್ ಯಶಸ್ವಿ ಜೈಸ್ವಾಲ್ ಟೆಸ್ಟ್ ಸರಣಿಯಲ್ಲಿಯೂ ಅತ್ಯುತ್ತಮ ಫಾರ್ಮ್ ತೋರಿಸಿದರು. ಅದಕ್ಕೂ ಮುನ್ನ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಋತುವಿನಲ್ಲಿ 48.07ರ ಸರಾಸರಿ ಮತ್ತು 163.61ರ ಸ್ಟ್ರೈಕ್‌ರೇಟ್‌ನಲ್ಲಿ 625 ರನ್‌ ಗಳಿಸಿದರು.

ಯಶಸ್ವಿ ಜೈಸ್ವಾಲ್ ಅವರು ವೆಸ್ಟ್ ಇಂಡೀಸ್ ವಿರುದ್ಧ ಜುಲೈ 12, 2023ರಂದು ಭಾರತ ತಂಡಕ್ಕೆ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದರು. ತಮ್ಮ ಚೊಚ್ಚಲ ಶತಕದೊಂದಿಗೆ ಹಲವು ಬ್ಯಾಟಿಂಗ್ ದಾಖಲೆಗಳನ್ನು ಮುರಿದರು. ಮತ್ತೊಬ್ಬ ಭರವಸೆಯ ಆಟಗಾರ ತಿಲಕ್ ವರ್ಮಾ ಕೂಡ ಟಿ20 ಸರಣಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.

ಈ ಇಬ್ಬರನ್ನು ಭಾರತ ತಂಡಕ್ಕೆ ಸೇರಿಸಿಕೊಂಡಿರುವುದು ಬ್ಯಾಟಿಂಗ್ ಕ್ರಮಾಂಕದಲ್ಲಿ ಪುನರ್‌ರಚನೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಯಶಸ್ವಿ ಜೈಸ್ವಾಲ್‌ಗೆ ಚೊಚ್ಚಲ ಪಂದ್ಯವನ್ನು ಆಡಿದರೆ, ಸಮರ್ಥವಾಗಿ ಇನ್ನಿಂಗ್ಸ್ ತೆರೆಯಬಹುದು. ಮೂರನೇ ಕ್ರಮಾಂಕದಲ್ಲಿ ಯಾರು ಬ್ಯಾಟ್ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಮೊದಲ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಆಡುವ 11ರ ಬಳಗ

ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

Story first published: Wednesday, August 2, 2023, 21:31 [IST]
Other articles published on Aug 2, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+