Ind vs WI 1st T20: ಪಂದ್ಯದ ಪ್ರಿವ್ಯೂ, ಟೀಂ ಇಂಡಿಯಾ ಪ್ಲೇಯಿಂಗ್ 11

ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನ ವೈಟ್‌ವಾಶ್ ಮಾಡಿದ ಟೀಂ ಇಂಡಿಯಾ, ಚುಟುಕು ಕ್ರಿಕೆಟ್ ಸರಣಿಯಲ್ಲಿ ಅಂತಹದ್ದೇ ಪ್ರದರ್ಶನ ನೀಡಲು ಎದುರು ನೋಡುತ್ತಿದೆ. ಶುಕ್ರವಾರದಿಂದ (ಜು. 29) ಐದು ಪಂದ್ಯಗಳ ಟಿ20 ಸರಣಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಶುಭಾರಂಭ ಮಾಡುವ ನಿರೀಕ್ಷೆ ಹೊಂದಿದೆ.
ಮೂರು ಪಂದ್ಯಗಳ ಒಡಿಐ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ನಂತರ ಟಿ20 ಅಂತರಾಷ್ಟ್ರೀಯ ಸರಣಿಯಲ್ಲಿ ಭಾರತವು ವೈಟ್‌ವಾಶ್ ಮಾಡುವ ಗುರಿಯನ್ನು ಹೊಂದಿರುವುದರಿಂದ ಆತಿಥೇಯ ವೆಸ್ಟ್ ಇಂಡೀಸ್ ತಮ್ಮ ಮರ್ಯಾದೆ ಕಾಪಾಡಿಕೊಳ್ಳಲು ಸರಣಿಯನ್ನು ಗೆಲ್ಲಬೇಕಾಗಿದೆ.
ರೋಹಿತ್ ಶರ್ಮಾ ಭಾರತ ತಂಡದ ನಾಯಕನಾಗಿ ಮರಳಿದ್ದು, ರೋಹಿತ್ ನಾಯಕತ್ವದಲ್ಲಿ ಭಾರತ ಟಿ20 ಫಾರ್ಮೆಟ್‌ನಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ಐತಿಹಾಸಿಕ ಸಾಧನೆಯನ್ನು ಪುನರಾವರ್ತಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8ಗಂಟೆಗೆ ಪ್ರಾರಂಭವಾಗುತ್ತದೆ. ಡಿಡಿ ಸ್ಪೋರ್ಟ್ಸ್‌ನಲ್ಲಿ ಪಂದ್ಯವನ್ನು ಲೈವ್ ಆಗಿ ವೀಕ್ಷಿಸಬಹುದು.

ಕೊಹ್ಲಿ ಮತ್ತು ಬುಮ್ರಾಗೆ ವಿಶ್ರಾಂತಿ
ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಮುಂದುವರಿಸಿದ್ದಾರೆ. ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ಗಾಯಗೊಂಡಿದ್ದ ಕೆಎಲ್ ರಾಹುಲ್ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗಾಗಿ ರಾಹುಲ್ ಅವರನ್ನು ತಂಡದಲ್ಲಿ ಸೇರಿಸಲಾಯಿತು. ಆದರೆ ಕೋವಿಡ್-19 ಪಾಸಿಟಿವ್ ಆಗಿದ್ದರ ಕಾರಣದಿಂದ ಹೊರಗುಳಿಯಬೇಕಾಯಿತು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ರಾಹುಲ್ ಆಡದಿರುವುದು ಖಚಿತವಾಗಿದೆ.
ಏಕದಿನ ಸರಣಿಯಲ್ಲಿ ಮಿಂಚಿದ್ದ ಸಂಜು ಟಿ20 ತಂಡದಲ್ಲಿ ಸ್ಥಾನ ಪಡೆದಿಲ್ಲ. ದೀಪಕ್ ಹೂಡಾ ಮತ್ತು ದಿನೇಶ್ ಕಾರ್ತಿಕ್ ತಂಡಕ್ಕೆ ಮರಳಿದ್ದಾರೆ. ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯಲು ದಿನೇಶ್ ಕಾರ್ತಿಕ್, ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ ವೆಸ್ಟ್ ಇಂಡೀಸ್ ಟಿ20 ಸರಣಿಯಲ್ಲಿ ಮಿಂಚಬೇಕಾಗಿದೆ. ಇಲ್ಲವಾದಲ್ಲಿ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕಡಿಮೆಯಾಗುತ್ತದೆ.
ನನಗೆ 50 ಅನ್ನು 100 ಆಗಿ ಪರಿವರ್ತಿಸಲು ಚೆನ್ನಾಗಿ ತಿಳಿದಿದೆ: ಶತಕದ ಬರ ಎದುರಿಸುತ್ತಿರುವ ಪ್ರಶ್ನೆಗೆ ಧವನ್ ಉತ್ತರ

ವಿಂಡೀಸ್ ವಿರುದ್ಧ ನಡೆಯಲಿದೆ ಸಾಕಷ್ಟು ಪ್ರಯೋಗ
ಭಾರತ ಕೂಡ ಈ ಬಾರಿ ಟಿ20 ತಂಡದಲ್ಲಿ ಕೆಲವು ಅನಿರೀಕ್ಷಿತ ಪ್ರಯೋಗಗಳನ್ನು ನಡೆಸುತ್ತಿದೆ. 2021ರ ಟಿ20 ವಿಶ್ವಕಪ್ ಬಳಿಕ ಭಾರತ ಮೊದಲ ಬಾರಿಗೆ ಆರ್ ಅಶ್ವಿನ್ ಅವರನ್ನು ಟಿ20 ತಂಡಕ್ಕೆ ಸೇರಿಸಿಕೊಂಡಿದೆ. ಈ ನಡೆ ಅಶ್ವಿನ್ ಅವರನ್ನು ಟಿ20 ವಿಶ್ವಕಪ್‌ಗೆ ಪರಿಗಣಿಸಲಾಗುತ್ತಿದೆ ಎಂಬ ಸ್ಪಷ್ಟ ಸೂಚನೆಯನ್ನು ನೀಡುತ್ತದೆ. ಸ್ಪಿನ್ ಆಲ್ ರೌಂಡರ್, ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅವರು ಟಿ20 ಸರಣಿಯಲ್ಲಿ ಇರುವುದಿಲ್ಲ. ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಗೆ ಭಾರತ ಅವಕಾಶ ನೀಡಲಿದೆ.
ಭಾರತ vs ವಿಂಡೀಸ್: ಆತುರಪಟ್ಟು ಎಡವಟ್ಟು ಮಾಡಿಕೊಂಡ ಆರ್‌ಸಿಬಿ: ಕಾಲೆಳೆದ ಅಭಿಮಾನಿಗಳು!

ಚಹಾಲ್‌ಗೆ ವಿಶ್ರಾಂತಿ, ತಂಡಕ್ಕೆ ಮರಳಿದ ಕುಲ್‌ದೀಪ್ ಯಾದವ್
ಭಾರತ ಟಿ20 ಸರಣಿಯಲ್ಲಿ ಯುಜುವೇಂದ್ರ ಚಹಾಲ್‌ಗೆ ವಿಶ್ರಾಂತಿ ನೀಡಲಾಗಿದೆ. ಬದಲಿಗೆ, ವಿರಾಮದ ನಂತರ ಕುಲದೀಪ್ ಯಾದವ್ ತಂಡಕ್ಕೆ ಮರಳಿದರು. ಫಿಟ್ನೆಸ್ ಸಮಸ್ಯೆ ಎದುರಿಸುತ್ತಿದ್ದ ಕುಲದೀಪ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಕೂಡ ಭಾರತ ತಂಡದಲ್ಲಿ ಅವಕಾಶದ ನಿರೀಕ್ಷೆಯಲ್ಲಿದ್ದಾರೆ. ಇದು ಭಾರತದ ಹಲವು ಆಟಗಾರರಿಗೆ ಭರ್ಜರಿ ಸರಣಿಯಾಗಿ ಪರಿಣಮಿಸಬಹುದು.

ಸ್ಫೋಟಕ ಬ್ಯಾಟಿಂಗ್ ಲೈನ್ ಅಪ್ ಹೊಂದಿರುವ ವೆಸ್ಟ್ ಇಂಡೀಸ್
ಟಿ20ಯಲ್ಲಿ ವಿಂಡೀಸ್ ಏಕದಿನಕ್ಕಿಂತ ಹೆಚ್ಚು ಭಯಪಡಬೇಕಾಗಿದೆ. ಸ್ಫೋಟಕ ಬ್ಯಾಟ್ಸ್‌ಮನ್‌ಗಳ ದೊಡ್ಡ ಲೈನ್ ಅಪ್ ಹೊಂದಿರುವ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಸುಲಭವಾಗಿ ಸೋಲಿಸಲು ಸಾಧ್ಯವಿಲ್ಲ. ಆದ್ದರಿಂದ ನಾವು ಪ್ರಬಲ ಹೋರಾಟವನ್ನು ನಿರೀಕ್ಷಿಸಬಹುದು. ವಿಂಡೀಸ್ ಇನ್ನೂ ಟಿ20 ತಂಡವನ್ನು ಪ್ರಕಟಿಸಿಲ್ಲ. ನಿಕೋಲಸ್ ಪೂರನ್ ಅವರೇ ಟಿ20 ಸರಣಿಯಲ್ಲೂ ತಂಡವನ್ನು ಮುನ್ನಡೆಸಲಿದ್ದಾರೆ. ವಿಂಡೀಸ್ ತಂಡವು ಜೇಸನ್ ಹೋಲ್ಡರ್ ಮತ್ತು ರೋಮನ್ ಪೊವೆಲ್ ಅವರಂತಹ ಶ್ರೇಷ್ಠ ಪಂದ್ಯ ವಿಜೇತರನ್ನು ಹೊಂದಿದೆ.

ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11
ಭಾರತದ ಸಂಭಾವ್ಯ ಇಲೆವೆನ್: ರೋಹಿತ್ ಶರ್ಮಾ, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆರ್ ಅಶ್ವಿನ್, ಅರ್ಷ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications