IND vs WI ಪ್ರಥಮ ಟಿ20: ಈ ಮೈಲಿಗಲ್ಲುಗಳತ್ತ ರೋಹಿತ್, ಜಡೇಜಾ ಮತ್ತು ಪಾಂಡ್ಯ ಕಣ್ಣು

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ಆಯೋಜನೆಯಾಗಿರುವ ಸೀಮಿತ ಓವರ್ ಸರಣಿಗಳ ಪೈಕಿ ಈಗಾಗಲೇ 3 ಪಂದ್ಯಗಳ ಏಕದಿನ ಸರಣಿ ಮುಕ್ತಾಯವಾಗಿದ್ದು, ಇದೀಗ ಈ ತಂಡಗಳು 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿವೆ.
ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿಯ ಪ್ರಥಮ ಪಂದ್ಯ ಇಂದು ( ಜುಲೈ 29 ) ಟರೌಬಾದ ಬ್ರಿಯಾನ್ ಲಾರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯ ರಾತ್ರಿ 8 ಗಂಟೆಗೆ ಆರಂಭಗೊಳ್ಳಲಿದೆ. ಇತ್ತಂಡಗಳ ನಡುವೆ ಮೊದಲಿಗೆ ನಡೆದಿದ್ದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ತಂಡಕ್ಕೆ ಅವರ ತವರು ನೆಲದಲ್ಲಿಯೇ ವೈಟ್ ವಾಷ್ ಮುಖಭಂಗವನ್ನು ಮಾಡಿದ್ದು, ಇದೀಗ ಟಿ ಟ್ವೆಂಟಿ ಸರಣಿಯನ್ನು ಕೈವಶ ಮಾಡಿಕೊಳ್ಳುವತ್ತ ಕಣ್ಣಿಟ್ಟಿದೆ. ಏಕದಿನ ಸರಣಿಗೆ ವಿಶ್ರಾಂತಿಯ ಕಾರಣದಿಂದಾಗಿ ಗೈರಾಗಿದ್ದ ರೋಹಿತ್ ಶರ್ಮಾ ವಿಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಮರಳಿದ್ದು ನಾಯಕನಾಗಿ ತಂಡವನ್ನು ಮುನ್ನೆಡೆಸಲಿದ್ದಾರೆ ಹಾಗೂ ಇದು ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್ ಆಗಲಿದೆ.
ಅತ್ತ ಪ್ರಥಮ ಪಂದ್ಯದ ಹಿಂದಿನ ದಿನ ಟಿ ಟ್ವೆಂಟಿ ಸರಣಿಗಾಗಿ ವೆಸ್ಟ್ ಇಂಡೀಸ್ ತನ್ನ 16 ಆಟಗಾರರ ತಂಡವನ್ನು ಪ್ರಕಟಿಸಿದ್ದು, ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಿದ್ದ ನಿಕೋಲಸ್ ಅವರೇ ಈ ಟಿ ಟ್ವೆಂಟಿ ಸರಣಿಯಲ್ಲಿಯೂ ಕೂಡಾ ವೆಸ್ಟ್ ಇಂಡೀಸ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಕಳೆದ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ನಂತರ ತಂಡದ ಯಾವುದೇ ಪಂದ್ಯದಲ್ಲಿಯೂ ಕಣಕ್ಕಿಳಿಯದೇ ಇದ್ದ ಶಿಮ್ರಾನ್ ಹೆಟ್ಮಾಯೆರ್ ಇದೀಗ ಫಿಟ್ ಆಗಿದ್ದು ತಂಡಕ್ಕೆ ಈ ಟಿ ಟ್ವೆಂಟಿ ಸರಣಿ ಮೂಲಕ ಮರಳಿದ್ದಾರೆ. ಹೀಗೆ ಎರಡೂ ತಂಡಗಳು ಸಹ ಟಿ ಟ್ವೆಂಟಿ ಸರಣಿಯಲ್ಲಿ ಹಲವು ಬದಲಾವಣೆಗಳನ್ನು ಹೊಂದಿದ್ದು, ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಇತ್ತಂಡಗಳ ಕೆಲ ಆಟಗಾರರು ವಿಶೇಷ ಮೈಲಿಗಲ್ಲುಗಳನ್ನು ಮುಟ್ಟುವ ಸಾಧ್ಯತೆಗಳಿವೆ. ಈ ಕುರಿತಾದ ಮತ್ತಷ್ಟು ಮಾಹಿತಿ ಕೆಳಕಂಡಂತಿದೆ.

ಈ ಮೈಲಿಗಲ್ಲುಗಳ ಮೇಲೆ ಟೀಮ್ ಇಂಡಿಯಾ ಆಟಗಾರರ ಕಣ್ಣು
• ಕ್ರಿಕೆಟ್‍ನ ಎಲ್ಲಾ ಮಾದರಿ ಸೇರಿದಂತೆ ಒಟ್ಟು 1494 ಬೌಂಡರಿಗಳನ್ನು ಬಾರಿಸಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ 6 ಬೌಂಡರಿ ಬಾರಿಸಿದರೆ 1500 ಬೌಂಡರಿ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ ಒಟ್ಟು 931 ರನ್ ಕಲೆಹಾಕಿರುವ ಶ್ರೇಯಸ್ ಅಯ್ಯರ್ ಈ ಪಂದ್ಯದಲ್ಲಿ 69 ರನ್ ಬಾರಿಸಿದರೆ 1000 ಟಿ ಟ್ವೆಂಟಿ ರನ್ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ ರವೀಂದ್ರ ಜಡೇಜಾ 48 ವಿಕೆಟ್‍ಗಳನ್ನು ಪಡೆದಿದ್ದು, ಈ ಪಂದ್ಯದಲ್ಲಿ 2 ವಿಕೆಟ್ ಪಡೆದರೆ 50 ವಿಕೆಟ್ ಕಬಳಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಟೀಮ್ ಇಂಡಿಯಾದ ಮತ್ತೋರ್ವ ಆಟಗಾರ ಹಾರ್ದಿಕ್ ಪಾಂಡ್ಯ ಕೂಡ ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ 48 ವಿಕೆಟ್‍ಗಳನ್ನು ಪಡೆದಿದ್ದು, ಈ ಪಂದ್ಯದಲ್ಲಿ 2 ವಿಕೆಟ್ ಪಡೆದರೆ 50 ಟಿ ಟ್ವೆಂಟಿ ವಿಕೆಟ್ ಪಡೆದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ವೆಸ್ಟ್ ಇಂಡೀಸ್ ಆಟಗಾರರು ಮುಟ್ಟಬಹುದಾದ ಮೈಲಿಗಲ್ಲುಗಳು
• ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ ಒಟ್ಟು 94 ಬೌಂಡರಿಗಳನ್ನು ಬಾರಿಸಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೋಲಸ್ ಪೂರನ್ ಈ ಪಂದ್ಯದಲ್ಲಿ 6 ಬೌಂಡರಿ ಬಾರಿಸಿದರೆ 100 ಬೌಂಡರಿ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಎಲ್ಲಾ ಮಾದರಿಯ ಕ್ರಿಕೆಟ್ ಸೇರಿದಂತೆ ಒಟ್ಟು 49 ಕ್ಯಾಚ್ ಪಡೆದಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೋಲಸ್ ಪೂರನ್ ಈ ಪಂದ್ಯದಲ್ಲಿ 1 ಕ್ಯಾಚ್ ಪಡೆದರೆ 50 ಕ್ಯಾಚ್ ಪಡೆದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಎಲ್ಲಾ ಮಾದರಿಯ ಕ್ರಿಕೆಟ್ ಸೇರಿದಂತೆ ಒಟ್ಟು 49 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅಖೆಲ್ ಹೊಸೈನ್ ಈ ಪಂದ್ಯದಲ್ಲಿ ಕಣಕ್ಕಿಳಿದರೆ 50 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಅಂತರರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ ಒಟ್ಟು 476 ರನ್ ಬಾರಿಸಿರುವ ಬ್ರೆಂಡನ್ ಕಿಂಗ್ ಈ ಪಂದ್ಯದಲ್ಲಿ 24 ರನ್ ಬಾರಿಸಿದರೆ 500 ಅಂತರರಾಷ್ಟ್ರೀಯ ಟಿ ಟ್ವೆಂಟಿ ರನ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ಟಿ20 ಸರಣಿಗೆ ಪ್ರಕಟವಾಗಿರುವ ತಂಡಗಳು
ವೆಸ್ಟ್ ಇಂಡೀಸ್: ನಿಕೋಲಸ್ ಪೂರನ್ (ನಾಯಕ), ರೋವ್‌ಮನ್ ಪೊವೆಲ್ (ಉಪನಾಯಕ), ಶಮರ್ ಬ್ರೂಕ್ಸ್, ಡೊಮಿನಿಕ್ ಡ್ರೇಕ್ಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಓಬೆಡ್ ಮೆಕಾಯ್, ಕೀಮೋ ಪಾಲ್, ರೊಮಾರಿಯೊ ಶೆಫರ್ಡ್, ಒಡಿಯನ್ ಸ್ಮಿತ್, ಡೆವಿನ್ ಥಾಮಸ್, ಹೇಡನ್ ವಾಲ್ಷ್ ಜೂನಿಯರ್
ಭಾರತ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್ , ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications