ಭಾರತ- ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ LIVE

ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದೆ. ಈ ಮೂಲಕ ಕೋಲ್ಕತ್ತಾದ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಚುಟುಕು ಪಂದ್ಯದಲ್ಲಿ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಲಿದೆ.
ಟಾಸ್ ಗೆದ್ದಿರುವ ಟೀಂ ಇಂಡಿಯಾದಲ್ಲಿ ಐವರು ಬ್ಯಾಟ್ಸ್‌ಮನ್, ಓರ್ವ ಆಲ್‌ರೌಂಡರ್, ಇಬ್ಬರು ಲೆಗ್ ಸ್ಪಿನ್ನರ್‌ಗಳು, ಮೂವರು ಬೌಲರ್‌ಗಳಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಲಾಗಿದೆ. ಭಾರತದ ಪರ ಹಿರಿಯ ಸ್ಪಿನ್ನರ್ ಯುಜವೇಂದ್ರ ಚಹಾಲ್ ಜೊತೆಗೆ ಮತ್ತೋರ್ವ ಯುವ ಲೆಗ್ಗಿ ರವಿ ಬಿಷ್ಣೋಯಿ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.
ಯುವ ಲೆಗ್ಗಿ ಬಿಷ್ಣೋಯಿ ತನ್ನ ಸಹ ಆಟಗಾರ ಯುಜವೇಂದ್ರ ಚಹಾಲ್‌ರಿಂದ ಟೀಂ ಇಂಡಿಯಾ ಕ್ಯಾಪ್ ಅನ್ನು ಸ್ವೀಕರಿಸಿದ್ದಾರೆ.
ಇನ್ನು ವೆಸ್ಟ್ ಇಂಡೀಸ್ ಕಳೆದ ಇಂಗ್ಲೆಂಡ್ ವಿರುದ್ಧ ಆಡಿಸಿದ ಟಿ20 ತಂಡವನ್ನ ಕಣಕ್ಕಿಳಿಸಿದ್ದು, ಜೇಸನ್ ಹೋಲ್ಡ್‌ನ್ ಅಭ್ಯಾಸದ ವೇಳೆ ಗಾಯಗೊಂಡ ಪರಿಣಾಮ ರೋಸ್ಟನ್ ಚೇಸ್ ಅವಕಾಶವನ್ನು ಪಡೆದಿದ್ದಾರೆ.
ಟೀಂ ಇಂಡಿಯಾ ಪ್ಲೇಯಿಂಗ್ 11
ಇಶಾನ್ ಕಿಶನ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಯುಜವೇಂದ್ರ ಚಹಾಲ್
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11
ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಕೀರಾನ್ ಪೊಲಾರ್ಡ್ (ನಾಯಕ), ರೋಸ್ಟನ್ ಚೇಸ್, ರೊಮಾರಿಯೊ ಶೆಫರ್ಡ್, ಅಕೆಲ್ ಹೊಸೈನ್, ಓಡಿಯನ್ ಸ್ಮಿತ್, ಫ್ಯಾಬಿಯನ್ ಅಲೆನ್, ಶೆಲ್ಡನ್ ಕಾಟ್ರೆಲ್
ಭಾರತ-ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯದ ಲೈವ್ ಸ್ಕೋರ್ ಈ ಕೆಳಗೆ ತಿಳಿಯಿರಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications