For Quick Alerts
ALLOW NOTIFICATIONS  
For Daily Alerts
 

Ind vs WI: ಶುಬ್ಮನ್ ಗಿಲ್ ಆರಂಭಿಕನಾಗಿ ಕಣಕ್ಕಿಳಿಯಲ್ಲ: ಸ್ಪಷ್ಟಪಡಿಸಿದ ನಾಯಕ ರೋಹಿತ್ ಶರ್ಮಾ

ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಬುಧವಾರದಿಂದ ಆರಂಭವಾಗಲಿದೆ. ಡೊಮೆನಿಕಾದಲ್ಲಿ ಮೊದಲ ಟೆಸ್ಟ್ ನಡೆಯಲಿದ್ದು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ದೊಡ್ಡ ಪ್ರಯೋಗಕ್ಕೆ ಇಳಿಯುವುದು ದೃಢಪಟ್ಟಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಪರವಾಗಿ ರೋಹಿತ್ ಶರ್ಮಾ ಜೊತೆಗೆ ಶುಬ್ಮನ್ ಗಿಲ್ ಜೋಡಿ ಆರಂಭಿಕರಾಗಿ ಕಣಕ್ಕಿಳಿಯುವುದಿಲ್ಲ ಎಂಬುದನ್ನು ಸ್ವತಃ ನಾಯಕ ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಶುಬ್ಮನ್ ಗಿಲ್ ಬದಲಿಗೆ ಯಶಸ್ವಿ ಜೈಸ್ವಾಲ್ ಆರಂಭಿಕ ಆಟಗಾರನಾಗಿ ಸಾಥ್ ನೀಡುವುದು ಬಹುತೇಕ ಖಚಿತವಾಗಿದೆ. ಶುಬ್ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಸ್ಥಾನವನ್ನು ತುಂಬಲಿದ್ದಾರೆ. ಈ ಮೂಲಕ ವಿಂಡೀಸ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದೆ.

Ind vs WI 1st Test: Shubman Gill will play at No.3 skipper Rohit Sharma Confirms

ಶುಬ್ಮನ್ ಗಿಲ್ ಭಾರತದ ಪರವಾಗಿ 16 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು ಆರಂಭಿಕನಾಗಿ ಅದ್ಭುತ ಯಶಸ್ಸು ಸಾಧಿಸಿದ್ದಾರೆ. ಎಲ್ಲಾ ಮಾದರಿಯಲ್ಲಿಯೂ ಗಿಲ್ ತಂಡದ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಭಾರತ ಈ ಪಂದ್ಯದಲ್ಲಿ ಎಡಗೈ ಬಲಗೈ ಸಂಯೋಜನೆಯೊಂದಿಗೆ ಕಣಕ್ಕಿಳಿಯಲು ಬಯಸುತ್ತದೆ ಎಂದು ನಾಯಕ ರೋಹಿತ್ ಶರ್ಮಾ ಮಾಹಿತಿ ನೀಡಿದ್ದಾರೆ.

ಇನ್ನು ಡೆಮಿನಿಕಾ ಪಿಚ್‌ ಗಮನಿಸಿದ ಬಳಿಕ ಈ ಪಂದ್ಯದಲ್ಲಿ ಭಾರತ ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಲಿದೆ ಎಂದು ಮಾಹಿತಿ ನೀಡಿದ್ದಾರೆ. "ಡೊಮೆನಿಕಾ ಪಿಚ್ ಗಮನಿಸಿದ ಬಳಿಕ ಎರಡು ಸ್ಪಿನ್ನರ್‌ಗಳು ಹಾಗೂ ಮೂವರು ವೇಗಿಗಳೊಂದಿಗೆ ನಾವು ಕಣಕ್ಕಿಳಿಯಲಿದ್ದೇವೆ. ಬ್ಯಾಟಿಂಗ್ ವಿಭಾಗದಲ್ಲಿ ಶುಬ್ಮನ್ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಆಡುವುದನ್ನು ಅವರೇ ಬಯಸಿದ್ದು ಅದನ್ನು ಕೋಚ್ ರಾಹುಲ್ ದ್ರವಾಇಡ್ ಅವರಲ್ಲಿಯೂ ಹೇಳಿಕೊಂಡಿದ್ದರು. ಅವರು ತಮ್ಮ ವೃತ್ತಿ ಜೀವನದಲ್ಲಿ ಈವರೆಗೆ ಬಹುತೇಕ 3-4ನೇ ಕ್ರಮಾಂಕದಲ್ಲಿಯೇ ಆಡಿದವರಾಗಿದ್ದಾರೆ" ಎಂದು ರೋಹಿತ್ ವಿವರಿಸಿದರು.

ವೆಸ್ಟ್ ಇಂಡೀಸ್ ತಂಡ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜೋಶುವಾ ಡ ಸಿಲ್ವಾ (ವಿಕೆಟ್ ಕೀಪರ್), ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಟಾಗೆನರೈನ್ ಚಂದ್ರಪಾಲ್, ರಹಕೀಮ್ ಕಾರ್ನ್‌ವಾಲ್, ಜೇಸನ್ ಹೋಲ್ಡರ್, ರೇಮನ್ ರೀಫರ್, ಕಿರ್ಕ್ ಮೆಕೆಂಜಿ, ಕೆಮರ್ ರೋಚ್, ಅಲ್ಜಾರಿ ಜೋಸೆಫ್, ಶಾನನ್ ಗೇಬ್ರಿಯಲ್, ಜೋಮೆಲ್ ವಾರಿಕನ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶ್ರೀಕರ್ ಭರತ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕತ್

Story first published: Tuesday, July 11, 2023, 23:17 [IST]
Other articles published on Jul 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+