Ind vs WI 1st Test: ಬೃಹತ್ ಮೊತ್ತದತ್ತ ಹೆಜ್ಜೆಯಿಟ್ಟ ಟೀಮ್ ಇಂಡಿಯಾ: 3ನೇ ದಿನದಾಟ Live ಸ್ಕೋರ್
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ದಿನದಾಟ ಆರಂಭವಾಗಿದೆ. ಟೀಮ್ ಇಂಡಿಯಾ ಪರವಾಗಿ ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆರಂಭಿಸಿದ್ದು ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ ಲಗ್ಗೆಯಿಟ್ಟಿದೆ. ಯಶಸ್ವಿ ಜೈಸ್ವಾಲ್ ದ್ವಿಶತಕದತ್ತ ಹೆಜ್ಜೆಯಿಟ್ಟಿದ್ದರೆ ವಿರಾಟ್ ಕೊಹ್ಲಿ ಕೂಡ ಬೃಹತ್ ಮೊತ್ತ ಪೇರಿಸುವ ಭರವಸೆ ಮೂಡಿಸಿದ್ದಾರೆ.
ಇನ್ನು ಮೊದಲ ಪಂದ್ಯದ ಎರಡನೇ ದಿನ ಸಂಪೂರ್ಣವಾಗಿ ಬ್ಯಾಟಿಂಗ್ ಮಾಡಿದ್ದು ವೆಸ್ಟ್ ಇಂಡೀಸ್ ತಂಡ ಭಾರೀ ನಿರಾಸೆ ಅನುಭವಿಸಿತ್ತು. ಇಡೀ ದಿನ ವೆಸ್ಟ್ ಇಂಡೀಸ್ ಬೌಲರ್‌ಗಳು ಕೇವಲ ಎರಡು ವಿಕೆಟ್ ಪಡೆಯಲು ಮಾತ್ರವೇ ಯಶಸ್ವಿಯಾದರು. ಇತ್ತ ಭಾರತದ ಪರವಾಗಿ ಇಬ್ಬರು ಆರಂಭಿಕ ಆಟಗಾರರು ಕೂಡ ಶತಕ ಪೂರ್ಣಗೊಳಿಸಿ ಮಿಂಚಿದ್ದರು.

ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್‌ನಲ್ಲಿ ಗಳಿಸಿದ 150 ರನ್‌ಗಳ ಮೊತ್ತವನ್ನು ಭಾರತ ಯಾವುದೇ ವಿಕೆಟ್ ಕಳೆದುಕೊಳ್ಳದೆ ಮುನ್ನಡೆ ಪಡೆಯುವ ಮೂಲಕ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಈ ಸಾಧನೆ ಮಾಡಿದಂತಾಗಿದೆ. ಯಶಸ್ವಿ ಜೈಸ್ವಾಲ್ ತಮ್ಮ ಶತಕವನ್ನು ಪೂರ್ಣಗೊಳಿಸುವ ಮೂಲಕ ಚೊಚ್ಚಲ ಪಂದ್ಯದಲ್ಲಿಯೇ ಈ ಸಾಧನೆ ಮಾಡಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಎರಡನೇ ದಿನವಿಡೀ ಬ್ಯಾಟಿಂಗ್ ಮಾಡಿದ ಜೈಸ್ವಾಲ್ ವಿಕೆಟ್ ಕಳೆದುಕೊಳ್ಳದೆ 143 ರನ್‌ಗಳನ್ನು ಗಳಿಸಿದ್ದು ಮೂರನೇ ದಿನಕ್ಕೆ ಕ್ರೀಸ್ ಕಾಯ್ದಿರಿಸಿದ್ದಾರೆ.
Live ಸ್ಕೋರ್ ಹೀಗಿದೆ
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್
ಬೆಂಚ್: ಕಿರ್ಕ್ ಮೆಕೆಂಜಿ, ಶಾನನ್ ಗೇಬ್ರಿಯಲ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಷರ್ ಪಟೇಲ್, ನವದೀಪ್ ಸೈನಿ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications