Ind vs WI 1st Test: ಬೃಹತ್ ಮುನ್ನಡೆ ಪಡೆದು ಇನ್ನಿಂಗ್ಸ್ ಡಿಕ್ಲೇರ್ ಮಾಡಿದ ಟೀಮ್ ಇಂಡಿಯಾ
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದ್ದು ಬೃಹತ್ ಮೊತ್ತ ಗಳಿಸಿದೆ. 421 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಾಗ ಟೀಮ್ ಇಂಡಿಯಾ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ ಬರೊಬ್ಬರಿ 271 ರನ್‌ಗಳ ಮುನ್ನಡೆ ಪಡೆದಿದೆ.
ಎರಡನೇ ದಿನದಾಟದಲ್ಲಿ ಸಂಪೂರ್ಣವಾಗಿ ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ ಪರವಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಶತಕ ಸಿಡಿಸಿದ್ದರು. ಈ ಪೈಕಿ ಜೈಸ್ವಾಲ್ ಮೂರನೇ ದಿನವೂ ಬ್ಯಾಟಿಂಗ್ ಮುಂದುವರಿಸಿದ್ದು ಚೊಚ್ಚಲ ಪಂದ್ಯದಲ್ಲಿ ತಮ್ಮ ಮೊತ್ತವನ್ನು 171 ರನ್‌ಗಳ ವರೆಗೆ ವಿಸ್ತರಿಸಿದರು. ಈ ಮೂಲಕ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಜೈಸ್ವಾಲ್ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 187 ರನ್‌ಗಳಿಸಿರುವ ಶಿಖರ್ ಧವನ್ ಈ ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ.

ಇನ್ನು ಎರಡನೇ ದಿನದಾಟದಲ್ಲಿ ಅಜೃಯವಾಗುಳಿದಿದ್ದ ಮತ್ತೋರ್ವ ಆಟಗಾರ ವಿರಾಟ್ ಕೊಹ್ಲಿ ಇಂದು ತಮ್ಮ ಅರ್ಧ ಶತಕವನ್ನು ಪೂರ್ಣಗೊಳಿಸಿದರು. ಬರೊಬ್ಬರಿ 182 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 76 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಬಂದ ಅಜಿಂಕ್ಯಾ ರಹಾನೆ 3 ರನ್‌ಗಳಿಸಿ ಔಟಾದರೆ ರವೀಂದ್ರ ಜಡೇಜಾ 37 ರನ್ ಹಾಗೂ ಇಶಾನ್ ಕಿಶನ್ 1 ರನ್‌ಗಳಿಸಿ ಅಜೇಯವಾಗಿದ್ದಾಗ ಇನ್ನಿಂಗ್ಸ್ ಡಿಕ್ಲೇರ್ ಮಾಡಲಾಯಿತು.
ಇದೀಗ ವೆಸ್ಟ್ ಇಂಡೀಸ್ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ಗಳಿಗೆ ಆಲೌಟ್ ಆಗಿದ್ದ ವೆಸ್ಟ್ ಇಂಡೀಸ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ದಾಳಿಯನ್ನು ಹೇಗೆ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್
ಬೆಂಚ್: ಕಿರ್ಕ್ ಮೆಕೆಂಜಿ, ಶಾನನ್ ಗೇಬ್ರಿಯಲ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಷರ್ ಪಟೇಲ್, ನವದೀಪ್ ಸೈನಿ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications