IND vs WI 1st Test Rain: ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ?; ಹವಾಮಾನ ಮುನ್ಸೂಚನೆ, ಪಿಚ್ ವರದಿ
ಬುಧವಾರ, ಜುಲೈ 12ರಂದು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಡೊಮಿನಿಕಾದ ರೋಸೋವಿನಲ್ಲಿರುವ ವಿಂಡ್ಸರ್ ಪಾರ್ಕ್ ಸ್ಟೇಡಿಯಂನಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮತ್ತು ಭಾರತ ತಂಡಗಳು ಸೆಣಸಾಡಲಿವೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಪ್ರಾರಂಭವಾಗುವ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಹೇಳಿದಂತೆ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಭಾರತ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾನೆ.

2023ರ ಐಪಿಎಲ್‌ನಲ್ಲಿ ಬ್ಯಾಟಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾನೊಂದಿಗೆ ಬ್ಯಾಟಿಂಗ್ ಇನ್ನಿಂಗ್ಸ್ ತೆರೆದರೆ, ಶುಭ್ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.
ಯಶಸ್ವಿ ಜೈಸ್ವಾಲ್ ಅವರು ಐಪಿಎಲ್‌ನಲ್ಲಿ ಮತ್ತು ದೇಶೀಯ ಪಂದ್ಯಾವಳಿಗಳಲ್ಲಿ ತೋರಿಸಿದ ಭರವಸೆಗೆ ತಕ್ಕಂತೆ ಆಡುತ್ತಾರೆ ಎಂದು ನಾಯಕ ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೊದಲ ಟೆಸ್ಟ್ ಪಂದ್ಯಕ್ಕೆ ಹವಾಮಾನ ಮುನ್ಸೂಚನೆ
ಟೆಸ್ಟ್ ಸರಣಿಯ ಆರಂಭವನ್ನು ಭಾರತ ಹಾಗೂ ವೆಸ್ಟ್ ಇಂಡೀಸ್ ಅಭಿಮಾನಿಗಳು ನಿರೀಕ್ಷಿಸುತ್ತಿರುವಾಗ, ಡೊಮಿನಿಕಾದಲ್ಲಿನ ಮಳೆ ಮೇಲೆ ಎಲ್ಲರ ಗಮನ ಕೇಂದ್ರೀಕರಿಸಲಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ, ಮೊದಲ ದಿನದಂದು ಮೋಡ ಕವಿದ ಆಕಾಶವಿರಲಿದೆ ಎಂದು ಹೇಳಲಾಗಿದೆ.
ಶೇ.59ರಷ್ಟು ಮೋಡ ಕವಿದ ವಾತಾವರಣವಿದ್ದು, ತಾಪಮಾನವು ಬೆಳಿಗ್ಗೆ 25ರಿಂದ 31 ಡಿಗ್ರಿ ಸೆಲ್ಸಿಯಸ್ ನಡುವೆ ಏರಿಳಿತವಾಗಿರಲಿದೆ. ಆದಾಗ್ಯೂ, ಮೋಡ ಕವಿದ ವಾತಾವರಣವು ಸಂಜೆ ವೇಳೆಗೆ ಶೇ.79ರವರೆಗೆ ಏರಬಹುದು.
ಮೊದಲ ಟೆಸ್ಟ್ ಪಂದ್ಯದ ಮೊದಲ ನಾಲ್ಕು ದಿನಗಳಲ್ಲಿ ಆಕಾಶವು 'ಭಾಗಶಃ ಮೋಡದಿಂದ ಕೂಡಿರುತ್ತದೆ' ಎಂದು ಅಂದಾಜಿಸಲಾಗಿದೆ, ಸೂರ್ಯನು ದಿನವಿಡೀ ಕಡಿಮೆ ಕಾಣಿಸಿಕೊಳ್ಳುತ್ತಾನೆ.
ಆದಾಗ್ಯೂ, ಅಂತಿಮ ದಿನದಂದು ಮಳೆಯು ಪಂದ್ಯಕ್ಕೆ ಅಡ್ಡಿಯನ್ನುಂಟು ಮಾಡಬಹುದು. ಒಂದು ವೇಳೆ ಪಂದ್ಯಗಳು ಅಂತಿಮ ದಿನಕ್ಕೆ ಕಾಲಿಟ್ಟರೆ ಪಂದ್ಯ ಬಿರುಸಿನಿಂದ ಅಂತ್ಯಗೊಳ್ಳಬಹುದು.
ಡೊಮಿನಿಕಾದ ವಿಂಡ್ಸರ್ ಪಾರ್ಕ್ ಪಿಚ್ ವರದಿ
ಕಳೆದ ಕೆಲವು ವರ್ಷಗಳಲ್ಲಿ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಟಾಸ್ ಒಂದು ದೊಡ್ಡ ವಿಷಯವಾಗಿರಲಿಲ್ಲ. ಮೊದಲ ಮತ್ತು ಎರಡನೇ ಬ್ಯಾಟಿಂಗ್ ತಂಡಗಳು ವಿಜಯಶಾಲಿಯಾಗಿದ್ದವು.
ಪಿಚ್ ಬಗ್ಗೆ ಹೇಳುವುದಾದರೆ, ಈ ಟ್ರ್ಯಾಕ್ ಮೊದಲ ದಿನ ವೇಗಿಗಳಿಗೆ ಸಹಾಯ ಮಾಡಿದರೆ, ಮುಂದಿನ ಎರಡು ದಿನಗಳಲ್ಲಿ ಬ್ಯಾಟಿಂಗ್‌ಗೆ ಸಹಾಯವಾಗಲಿದೆ. ನಂತರ ಪಿಚ್ ಹಳೆಯದಾಗುತ್ತಿದ್ದಂತೆ, ಸ್ಪಿನ್ನರ್‌ಗಳು 4 ಮತ್ತು 5ನೇ ದಿನದಂದು ಮುನ್ನೆಲೆಗೆ ಬರುತ್ತಾರೆ.
ವಿಂಡ್ಸರ್ ಪಾರ್ಕ್ ಪಿಚ್ ರೆಕಾರ್ಡ್
ಡೊಮಿನಿಕಾದ ವಿಂಡ್ಸರ್ ಪಾರ್ಕ್ ಸ್ಟೇಡಿಯಂ ಐದು ಟೆಸ್ಟ್ ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಅವುಗಳಲ್ಲಿ ಮೊದಲನೆಯದು ವೆಸ್ಟ್ ಇಂಡೀಸ್ ಮತ್ತು ಭಾರತದ ನಡುವೆ 2011ರಲ್ಲಿ ನಡೆಯಿತು. ಈ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು.
ನಂತರ ಪಾಕಿಸ್ತಾನ ತಂಡವು ವೆಸ್ಟ್ ಇಂಡೀಸ್ ತಂಡವನ್ನು 110 ರನ್‌ಗಳಿಂದ ಸೋಲಿಸಿದ ಸುಮಾರು ಆರು ವರ್ಷಗಳವರೆಗೆ ಈ ಮೈದಾನ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಯೋಜಿಸಿಲ್ಲ.
ವಿಂಡ್ಸರ್ ಪಾರ್ಕ್‌ನಲ್ಲಿ ಆಡಿದ ಐದು ಪಂದ್ಯಗಳಲ್ಲಿ ಒಮ್ಮೆ ಮಾತ್ರ ಗೆದ್ದಿರುವ ವೆಸ್ಟ್ ಇಂಡೀಸ್ ತಂಡ, ಈ ಸ್ಟೇಡಿಯಂನಲ್ಲಿ ಕಳಪೆ ದಾಖಲೆಯನ್ನು ಹೊಂದಿದೆ.
ಇನ್ನು ಇತ್ತೀಚಿನ ವರ್ಷಗಳಲ್ಲಿ ವೆಸ್ಟ್ ಇಂಡೀಸ್ ನೆಲದಲ್ಲಿ ಭಾರತ ತಂಡವೇ ಮೇಲುಗೈ ಸಾಧಿಸಿದೆ. ವೆಸ್ಟ್ ಇಂಡೀಸ್ ಕೊನೆಯ ಬಾರಿಗೆ 2002ರಲ್ಲಿ ಭಾರತದ ವಿರುದ್ಧ ತವರಿನ ಟೆಸ್ಟ್ ಪಂದ್ಯ ಗೆದ್ದಿತ್ತು ಎಂಬುದು ಗಮನಾರ್ಹ ಸಂಗತಿಯಾಗಿದೆ.
ವೆಸ್ಟ್ ಇಂಡೀಸ್ ತಂಡ ಕಳೆದ 21 ವರ್ಷಗಳಿಂದ ಭಾರತ ತಂಡದ ವಿರುದ್ಧ ತವರು ನೆಲದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯದ ಗೆಲುವನ್ನು ದಾಖಲಿಸಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications