IND vs WI 2nd ODI: ಭಾರತ vs ವೆಸ್ಟ್ ಇಂಡೀಸ್ ಆಡುವ 11ರ ಬಳಗ; ಸೂರ್ಯಕುಮಾರ್ ಬದಲಿಗೆ ಸಂಜು ಸ್ಯಾಮ್ಸನ್?
ಶನಿವಾರ, ಜುಲೈ 29ರಂದು ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಮೂರು ಪಂದ್ಯಗಳ ಸರಣಿಯ 2ನೇ ಏಕದಿನ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿವೆ.
ಇದೇ ಮೈದಾನದಲ್ಲಿ ಮೊದಲ ಪಂದ್ಯ ನಡೆದಾಗ, ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಕಡಿಮೆ ಮೊತ್ತದ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು. ಸದ್ಯ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

ಎರಡನೇ ಪಂದ್ಯದಲ್ಲಿ ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿರುವ ಭಾರತ ತಂಡ, ವೆಸ್ಟ್ ಇಂಡೀಸ್ ವಿರುದ್ಧ ಏನಾದರೂ ಬದಲಾವಣೆ ಮಾಡಲಿದೆಯೇ ಎಂಬುದು ಕುತೂಹಲಕಾರಿಯಾಗಿದೆ.
ಭಾರತದ ಆಡುವ 11ರ ಬಳಗದಲ್ಲಿ ಬದಲಾವಣೆ?
ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ಅಲ್ಪ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಐದು ವಿಕೆಟ್ ಕಳೆದುಕೊಂಡರೂ, ಎಲ್ಲಾ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿತು. ಭಾರತ 118 ರನ್ ಗಳಿಸಿದಾಗ 5 ವಿಕೆಟ್ ಕಳೆದುಕೊಂಡಿದ್ದು ಸಣ್ಣ ಚಿಂತೆ ತಂದೊಡ್ಡಿದೆ. ಇದಕ್ಕೆ ಬ್ಯಾಟಿಂಗ್ ಕ್ರಮಾಂಕದಲ್ಲಿನ ಬದಲಾವಣೆ ಕಾರಣ ಎಂಬುದಂತೂ ಸತ್ಯ.
ರೋಹಿತ್ ಶರ್ಮಾ 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದರೆ, ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಗಲಿಲ್ಲ.
ಯುವ ಆಟಗಾರರಾದ ಶುಭ್ಮನ್ ಗಿಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‌ಗೆ ಹೆಚ್ಚಿನ ಅವಕಾಶ ನೀಡಲು ಭಾರತ ತಂಡದ ಮ್ಯಾನೇಜ್‌ಮೆಂಟ್ ಬಯಸಿತ್ತು.
ಇಶಾನ್ ಕಿಶನ್ ಅರ್ಧಶತಕ ಗಳಿಸಿದರೆ, ಶುಭ್ಮನ್ ಗಿಲ್, ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ ವಿಫಲರಾದರು. ಶುಭ್ಮನ್ ಗಿಲ್ ಖಂಡಿತವಾಗಿ ಇನ್ನಿಂಗ್ಸ್ ಆರಂಭಿಸುತ್ತಾರೆ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಕೈಬಿಡುವ ಪ್ರಶ್ನೆಯಿಲ್ಲ.
ಇನ್ನು ಸೂರ್ಯಕುಮಾರ್ ಯಾದವ್ ವೇಗವಾಗಿ 19 ರನ್ ಗಳಿಸಿದರು ಮತ್ತು ಔಟಾಗುವ ಮೊದಲು ಉತ್ತಮವಾಗಿ ಆಡುತ್ತಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡರೆ ಅಚ್ಚರಿಪಡಬೇಕಾಗಿಲ್ಲ. ಈ ಸರಣಿಯಲ್ಲಿ ಕನಿಷ್ಠ ಎರಡು ಪಂದ್ಯಗಳ ಅವಕಾಶ ಸಿಗಲಿದೆ.
ಏಕದಿನ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್ ಅವರು 66ರ ಸರಾಸರಿಯಲ್ಲಿ ರನ್ ಗಳಿಸಿದ್ದರೂ, ಆಡುವ 11ರಲ್ಲಿ ಸ್ಥಾನ ಪಡೆಯದಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ. ಆದರೆ ಕೊನೆಯ ಪಂದ್ಯದಲ್ಲಿ ಬೆಂಚ್ ಕಾಯಿಸಿದ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಯಿದೆ.
ಇನ್ನು ವೆಸ್ಟ್ ಇಂಡೀಸ್ ತಂಡದಲ್ಲಿ ಕೀಸಿ ಕಾರ್ಟಿ ಮತ್ತು ಓಶಾನೆ ಥಾಮಸ್ ಅಥವಾ ಅಲ್ಜಾರಿ ಜೋಸೆಫ್ 2ನೇ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಕೀಸಿ ಕಾರ್ಟಿ ಕಳೆದ ಬಾರಿ ಶ್ರೀಲಂಕಾ ವಿರುದ್ಧ 87 ರನ್ ಗಳಿಸಿದ್ದರು. ಥಾಮಸ್ ಮತ್ತು ಜೋಸೆಫ್ ವೇಗವಾಗಿ ಬೌಲಿಂಗ್ ದಾಳಿ ಹೊಂದಿದ್ದಾರೆ.
ಭಾರತ ಮತ್ತು ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಅಲಿಕ್ ಅಥಾನಾಜೆ, ಶಾಯ್ ಹೋಪ್ (ನಾಯಕ/ ವಿಕೆಟ್ ಕೀಪರ್), ಕೀಸಿ ಕಾರ್ಟಿ, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರೊಮಾರಿಯೊ ಶೆಫರ್ಡ್, ಡೊಮಿನಿಕ್ ಡ್ರೇಕ್ಸ್, ಓಶಾನೆ ಥಾಮಸ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications