IND vs WI: ದ್ವಿತೀಯ ಏಕದಿನ ಪಂದ್ಯದಲ್ಲಿ ಆಟಗಾರರು ನಿರ್ಮಿಸಬಹುದಾದ ಮೈಲಿಗಲ್ಲುಗಳ ವಿವರ

ಇಂಗ್ಲೆಂಡ್ ಪ್ರವಾಸದಲ್ಲಿ ಯಶಸ್ವಿಯಾಗಿ ಏಕದಿನ ಹಾಗೂ ಟಿ ಟ್ವೆಂಟಿ ಎರಡೂ ಸರಣಿಗಳಲ್ಲಿಯೂ ಜಯ ಸಾಧಿಸಿದ ನಂತರ ಟೀಮ್ ಇಂಡಿಯಾ ಇದೀಗ ಕೆರಿಬಿಯನ್ನರ ನಾಡಿಗೆ ಕಾಲಿಟ್ಟಿದೆ. ವೆಸ್ಟ್ ಇಂಡೀಸ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಸೆಣಸಾಟ ನಡೆಸುತ್ತಿರುವ ಟೀಮ್ ಇಂಡಿಯಾ ಮೊದಲಿಗೆ ಏಕದಿನ ಸರಣಿಯಲ್ಲಿ ಕಣಕ್ಕಿಳಿದಿದೆ.
ಇತ್ತಂಡಗಳ ನಡುವಿನ ಏಕದಿನ ಸರಣಿ ನಿನ್ನೆ (ಜುಲೈ 22) ನಡೆದ ಪ್ರಥಮ ಏಕದಿನ ಪಂದ್ಯದ ಮೂಲಕ ಆರಂಭವಾಗಿದ್ದು, ಮೊದಲನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ ಗೆಲುವಿನ ಖಾತೆ ತೆರೆದು ಮುನ್ನಡೆ ಕಾಯ್ದುಕೊಂಡಿದೆ. ಟೀಮ್ ಇಂಡಿಯಾದ ಪೂರ್ಣಾವಧಿ ನಾಯಕ ರೋಹಿತ್ ಶರ್ಮಾ ಹಾಗೂ ಹಲವು ಅನುಭವಿ ಆಟಗಾರರು ವಿಶ್ರಾಂತಿಯಲ್ಲಿರುವ ಕಾರಣದಿಂದಾಗಿ ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಅಲಭ್ಯರಾಗಿದ್ದು, ಶಿಖರ್ ಧವನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿದಿದೆ.
ಪ್ರಥಮ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಶಿಖರ್ ಧವನ್, ಶುಬ್ ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಕಲೆಹಾಕಿತು. ಅತ್ತ ಈ ಗುರಿಯನ್ನು ಮುಟ್ಟುವಲ್ಲಿ ಅಂತಿಮ ಹಂತದಲ್ಲಿ ಎಡವಿದ ವೆಸ್ಟ್ ಇಂಡೀಸ್ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 305 ರನ್ ಕಲೆಹಾಕಿತು. ಈ ಮೂಲಕ ಟೀಮ್ ಇಂಡಿಯಾ 3 ರನ್‌ಗಳ ರೋಚಕ ಜಯವನ್ನು ಸಾಧಿಸಿದ್ದು, ಸದ್ಯ ನಾಳೆ ( ಜುಲೈ 24 ) ನಡೆಯಲಿರುವ ದ್ವಿತೀಯ ಏಕದಿನ ಪಂದ್ಯದಲ್ಲಿಯೂ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವತ್ತ ಚಿತ್ತ ನೆಟ್ಟಿದೆ. ಹಾಗೂ ಈ ಪಂದ್ಯದಲ್ಲಿ ಎರಡೂ ತಂಡಗಳ ಆಟಗಾರರು ನಿರ್ಮಿಸಬಹುದಾದ ಮೈಲಿಗಲ್ಲುಗಳ ವಿವರ ಕೆಳಕಂಡಂತಿದೆ.

ಈ ಮೈಲಿಗಲ್ಲುಗಳ ಮೇಲೆ ಶಿಖರ್ ಧವನ್ ಕಣ್ಣು
• ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‍ನಲ್ಲಿ 798 ಫೋರ್ಸ್ ಬಾರಿಸಿರುವ ಶಿಖರ್ ಧವನ್ ಈ ಪಂದ್ಯದಲ್ಲಿ 2 ಫೋರ್ಸ್ ಬಾರಿಸಿದರೆ 800 ಫೋರ್ಸ್ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿಯೂ 10496 ರನ್ ಕಲೆ ಹಾಕಿರುವ ಶಿಖರ್ ಧವನ್ ಈ ಪಂದ್ಯದಲ್ಲಿ 4 ರನ್ ಕಲೆ ಹಾಕಿದರೆ 10500 ರನ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ವಿಂಡೀಸ್ ಆಟಗಾರರು ಮುಟ್ಟಬಹುದಾದ ಮೈಲಿಗಲ್ಲುಗಳು
• 99 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿರುವ ಶಾಯ್ ಹೋಪ್ ಇನ್ನೊಂದು ಪಂದ್ಯದಲ್ಲಿ ಕಣಕ್ಕಿಳಿದರೆ 100 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಎಲ್ಲಾ ಮಾದರಿಯ ಕ್ರಿಕೆಟ್ ಸೇರಿ 99 ಫೋರ್ಸ್ ಬಾರಿಸಿರುವ ರೋವ್ಮನ್ ಪೊವೆಲ್ ಈ ಪಂದ್ಯದಲ್ಲಿ 1 ಫೋರ್ ಬಾರಿಸಿದರೆ 100 ಫೋರ್ಸ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಅಂತರರಾಷ್ಟ್ರೀಯ ಕ್ರಿಕೆಟ್‍ನಲ್ಲಿ 48 ಕ್ಯಾಚ್ ಪಡೆದಿರುವ ನಿಕೋಲಸ್ ಪೂರನ್ 50 ಅಂತರರಾಷ್ಟ್ರೀಯ ಕ್ಯಾಚ್ ಮೈಲುಗಲ್ಲನ್ನು ಮುಟ್ಟಲು 2 ಕ್ಯಾಚ್ ಪಡೆಯಬೇಕಾದ ಅಗತ್ಯತೆಯಿದೆ.
• ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ ಮಾದರಿಯಲ್ಲಿ 344 ಫೋರ್ಸ್ ಬಾರಿಸಿರುವ ಶಾಯ್ ಹೋಪ್ 6 ಫೋರ್ಸ್ ಬಾರಿಸಿದರೆ 350 ಫೋರ್ಸ್ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ಏಕದಿನ ಮುಖಾಮುಖಿ
ಒಟ್ಟು 137 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಮತ್ತು ಟೀಂ ಇಂಡಿಯಾ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 68ರಲ್ಲಿ ಗೆದ್ದರೆ, ವಿಂಡೀಸ್ 63 ಪಂದ್ಯಗಳಲ್ಲಿ ಗೆದ್ದಿದೆ ಮತ್ತು 2 ಪಂದ್ಯವು ಟೈನಲ್ಲಿ ಅಂತ್ಯಗೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications