IND vs WI 2ನೇ ಏಕದಿನ: ಟಾಸ್ ವರದಿ ಮತ್ತು ಲೈವ್ ಸ್ಕೋರ್; ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ

ವೆಸ್ಟ್ ಇಂಡೀಸ್ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಕೆರಿಬಿಯನ್ನರ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಇತ್ತಂಡಗಳ ನಡುವೆ ಮೊದಲಿಗೆ ಏಕದಿನ ಸರಣಿ ಆರಂಭವಾಗಿದ್ದು ಜುಲೈ 22ರ ಶುಕ್ರವಾರದಂದು ನಡೆದಿದ್ದ ಪ್ರಥಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 3 ರನ್‌ಗಳ ರೋಚಕ ಜಯವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಹೀಗೆ ಪ್ರಥಮ ಪಂದ್ಯದಲ್ಲಿ ಗೆಲುವನ್ನು ಸಾಧಿಸಿ ಸರಣಿಯಲ್ಲಿ ಮೇಲುಗೈ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಏಕದಿನ ಪಂದ್ಯದಲ್ಲಿಯೂ ಕೂಡಾ ಜಯ ಸಾಧಿಸಿ ಸರಣಿಯನ್ನು ಕೈವಶ ಮಾಡಿಕೊಳ್ಳುವತ್ತ ಕಣ್ಣಿಟ್ಟಿದ್ದರೆ, ಪ್ರಥಮ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಹೋರಾಟ ನಡೆಸಿದ್ದ ವೆಸ್ಟ್ ಇಂಡೀಸ್ ಇದೀಗ ದ್ವಿತೀಯ ಏಕದಿನ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವತ್ತ ಚಿತ್ತ ನೆಟ್ಟಿದೆ.
ಹೀಗೆ ಸಾಕಷ್ಟು ಕುತೂಹಲವನ್ನು ಕೆರಳಿಸಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ದ್ವಿತೀಯ ಏಕದಿನ ಪಂದ್ಯ ಕೂಡ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿಯೇ ಜರುಗುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೊಲಸ್ ಪೂರನ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡಿದ್ದಾರೆ. ಈ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಕೆಳಕಂಡಂತಿದೆ.

ಭಾರತದ ಆಡುವ ಬಳಗ
ಟಾಸ್ ಮುಕ್ತಾಯವಾದ ನಂತರ ಮಾತನಾಡಿರುವ ನಾಯಕ ಶಿಖರ್ ಧವನ್ ಟೀಮ್ ಇಂಡಿಯಾದಲ್ಲಿ ಆಗಿರುವ ಪ್ರಮುಖ ಬದಲಾವಣೆ ಏನೆಂಬುದನ್ನು ತಿಳಿಸಿದ್ದಾರೆ. ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಪ್ರಸಿದ್ಧ್ ಕೃಷ್ಣ ಈ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಬಿದ್ದಿದ್ದು, ಬದಲಾಗಿ ಅವೇಶ್ ಖಾನ್ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಅವೇಶ್ ಖಾನ್ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ್ದಾರೆ.
ಆಡುವ ಬಳಗ: ಶಿಖರ್ ಧವನ್(ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್

ವೆಸ್ಟ್ ಇಂಡೀಸ್ ಆಡುವ ಬಳಗ
ಶಾಯ್ ಹೋಪ್(ವಿಕೆಟ್ ಕೀಪರ್), ಬ್ರಾಂಡನ್ ಕಿಂಗ್, ಶಮರ್ಹ್ ಬ್ರೂಕ್ಸ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್(ನಾಯಕ), ರೋವ್ಮನ್ ಪೊವೆಲ್, ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್, ಹೇಡನ್ ವಾಲ್ಷ್

ಪ್ರಥಮ ಪಂದ್ಯದಲ್ಲಿ ದುಬಾರಿಯಾಗಿದ್ದ ಪ್ರಸಿದ್ಧ್ ಕೃಷ್ಣ
ಇನ್ನು ಈ ಪಂದ್ಯದ ಟೀಂ ಇಂಡಿಯಾ ಆಡುವ ಬಳಗದಿಂದ ಸ್ಥಾನ ಕಳೆದುಕೊಂಡಿರುವ ಪ್ರಸಿದ್ಧ್ ಕೃಷ್ಣ ವಿಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು 10 ಓವರ್ ಬೌಲಿಂಗ್ ಮಾಡಿ 62 ರನ್ ಕಲೆಹಾಕಿದ್ದರು. ಹೆಚ್ಚು ರನ್ ಬಿಟ್ಟುಕೊಟ್ಟದ್ದು ಮಾತ್ರವಲ್ಲದೆ ಪ್ರಸಿದ್ಧ್ ಕೃಷ್ಣ ಯಾವುದೇ ವಿಕೆಟ್ ಪಡೆಯದೇ ಕಳಪೆ ಪ್ರದರ್ಶನ ನೀಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications