Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs WI 2nd ODI: ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ಕೆ, ಭಾರತ ಪರ ರಾಹುಲ್ ಕಂಬ್ಯಾಕ್ LIVE

India vs WI

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದೆ. ವಿಂಡೀಸ್ ಪರ ಆಶ್ಚರ್ಯವೆಂಬಂತೆ ನಾಯಕ ಕಿರಾನ್ ಪೊಲಾರ್ಡ್‌ ಫಿಟ್ನೆಸ್ ಸಮಸ್ಯೆಯಿಂದ ಹೊರಗುಳಿದಿದ್ದು, ನಿಕೋಲಸ್ ಪೂರನ್ ತಂಡವನ್ನ ಮುನ್ನಡೆಸುತ್ತಿದ್ದಾರೆ.

ಟಾಸ್ ಆಗುವವರೆಗೂ ಕಿರಾನ್ ಪೊಲಾರ್ಡ್‌ ಈ ಪಂದ್ಯದಲ್ಲಿ ಭಾಗಿಯಾಗುತ್ತಿಲ್ಲ ಎಂಬ ಯಾವುದೇ ಸುಳಿವು ಇರಲಿಲ್ಲ. ನಿಕೋಲಸ್ ಪೂರನ್ ಟಾಸ್ ಸಮಯಕ್ಕೆ ಆಗಮಿಸದ ಬಳಿಕವಷ್ಟೇ ಪೊಲಾರ್ಡ್ ಈ ಪಂದ್ಯ ಆಡುತ್ತಿಲ್ಲ ಎಂದು ತಿಳಿದುಬಂದಿದೆ.

ಟೀಂ ಇಂಡಿಯಾ ಪರ ಮೊದಲ ಪಂದ್ಯದಲ್ಲಿ ಹೊರಗುಳಿದಿದ್ದ ಕೆ.ಎಲ್ ರಾಹುಲ್ ತಂಡಕ್ಕೆ ಕಂಬ್ಯಾಕ್ ಮಾಡಿದ್ದು, ಅವರ ಬದಲು ವಿಕೆಟ್ ಕೀಪರ ಬ್ಯಾಟ್ಸ್‌ಮನ್ ಇಶನ್ ಕಿಶನ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ಪರ ಕೂಡ ಕೇವಲ ಒಂದು ಬದಲಾವಣೆ ಮಾಡಲಾಗಿದ್ದು, ಕಿರಾನ್ ಪೊಲಾರ್ಡ್ ಬದಲು ಓಡಿಯನ್ ಸ್ಮಿತ್ ಆಗಮಿಸಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿ ಜೀವಂತವಾಗಿರಿಸಲು ವೆಸ್ಟ್‌ ಇಂಡೀಸ್‌ ಈ ಪಂದ್ಯ ಗೆಲ್ಲಲೇಬೇಕಾಗಿದ್ದು, ಭಾರತಕ್ಕೆ ಸರಣಿ ಗೆಲುವಿಗೆ ಇನ್ನೊಂದೇ ಹೆಜ್ಜೆ ಬಾಕಿಯಿದೆ. ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಕಂಡಂತಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ

1
51922

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11
ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ವಿಕೆಟ್ ಕೀಪರ್), ಬ್ರಾಂಡನ್ ಕಿಂಗ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಫ್ಯಾಬಿಯನ್ ಅಲೆನ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್

Story first published: Wednesday, February 9, 2022, 13:26 [IST]
Other articles published on Feb 9, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+