IND vs WI 2nd ODI: ಭಾರತ vs ವೆಸ್ಟ್ ಇಂಡೀಸ್ ಪಂದ್ಯದ ಟಾಸ್ ವಿವರ, ಆಡುವ 11ರ ಬಳಗ; ರೋಹ್ಲಿಗೆ ವಿಶ್ರಾಂತಿ
ಶನಿವಾರ, ಜುಲೈ 29ರಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ 2ನೇ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ಮತ್ತು ಪ್ರವಾಸಿ ಭಾರತ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಗುರುವಾರ, ಜುಲೈ 27ರಂದು ಅದೇ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್‌ಗಳಿಂದ ಗೆದ್ದು ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಇನ್ನು ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಎರಡು ಮಹತ್ವದ ಬದಲಾವಣೆ ಮಾಡಿದ್ದು, ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಬದಲಾಗಿ ಸಂಜು ಸ್ಯಾಮ್ಸನ್ ಮತ್ತು ಅಕ್ಷರ್ ಪಟೇಲ್ ಅವರಿಗೆ ಅವಕಾಶ ನೀಡಲಾಗಿದೆ.
ಮೊದಲ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆಯ್ಕೆ ಮಾಡದಿರುವುದಕ್ಕೆ ಭಾರತ ತಂಡದ ಮ್ಯಾನೇಜ್‌ಮೆಂಟ್ ವಿರುದ್ಧ ಟೀಕೆ ವ್ಯಕ್ತವಾಗಿತ್ತು. ಇದೀಗ 2023ರ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ 11ರ ಬಳಗ
ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಾಯ್ ಹೋಪ್ (ನಾಯಕ/ ವಿಕೆಟ್ ಕೀಪರ್), ಕೀಸಿ ಕಾರ್ಟಿ, ಶಿಮ್ರಾನ್ ಹೆಟ್ಮೆಯರ್, ಅಲ್ಜಾರಿ ಜೋಸೆಫ್, ರೊಮಾರಿಯೊ ಶೆಫರ್ಡ್, ಯಾನಿಕ್ ಕ್ಯಾರಿಯಾ, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications