IND vs WI 2ನೇ ಟಿ20: ಪಿಚ್ ವರದಿ, ಹವಾಮಾನ ವರದಿ, ಸಂಭಾವ್ಯ ಆಡುವ ಬಳಗ & ನೇರಪ್ರಸಾರದ ಮಾಹಿತಿ

ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ನಿರತವಾಗಿರುವ ಟೀಮ್ ಇಂಡಿಯಾ ಕೆರಿಬಿಯನ್ನರ ವಿರುದ್ಧ ಆಯೋಜನೆಯಾಗಿದ್ದ 3 ಪಂದ್ಯಗಳ ಏಕದಿನ ಸರಣಿಯ ಎಲ್ಲಾ ಪಂದ್ಯಗಳಲ್ಲಿಯೂ ಜಯ ಸಾಧಿಸುವುದರ ಮೂಲಕ ವೈಟ್ ವಾಷ್ ಸಾಧನೆ ಮಾಡಿತ್ತು. ಇದಾದ ಬೆನ್ನಲ್ಲೇ ಇದೀಗ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದು, ಸರಣಿಯ ಪ್ರಥಮ ಪಂದ್ಯದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 68 ರನ್‌ಗಳ ಬೃಹತ್ ಜಯ ಸಾಧಿಸುವುದರ ಮೂಲಕ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಹೀಗೆ ಸರಣಿಯಲ್ಲಿ ಶುಭಾರಂಭ ಮಾಡಿರುವ ರೋಹಿತ್ ಶರ್ಮಾ ಪಡೆ ಆಗಸ್ಟ್ 1ರಂದು ನಡೆಯಲಿರುವ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಸೆಣಸಾಟ ನಡೆಸಲಿದ್ದು, ಸತತ 2ನೇ ಗೆಲುವಿನತ್ತ ಕಣ್ಣಿಟ್ಟಿದೆ. ಅತ್ತ ಟೀಂ ಇಂಡಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೋತು ಇದೀಗ ಟ್ವೆಂಟಿ ಸರಣಿಯ ಪ್ರಥಮ ಪಂದ್ಯವನ್ನೂ ಕೂಡ ಸೋತಿರುವ ವೆಸ್ಟ್ ಇಂಡೀಸ್ ಈ ಪಂದ್ಯದಲ್ಲಾದರೂ ಜಯ ಸಾಧಿಸಿ ಕಂಬ್ಯಾಕ್ ಮಾಡುವತ್ತ ಕಣ್ಣಿಟ್ಟಿದೆ.
ಇತ್ತಂಡಗಳ ನಡುವಿನ ಈ ಪಂದ್ಯ ಸೇಂಟ್ ಕಿಟ್ಸ್ ನ ವಾರ್ನರ್ ಪಾರ್ಕ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದ ಕುರಿತಾದ ಪಿಚ್ ವರದಿ, ಹವಾಮಾನ ವರದಿ, ಸಂಭಾವ್ಯ ಆಡುವ ಬಳಗ ಮತ್ತು ನೇರ ಪ್ರಸಾರದ ಕುರಿತಾದ ಮಾಹಿತಿಗಳು ಈ ಕೆಳಕಂಡಂತಿವೆ.

ಪಿಚ್ ವರದಿ & ಹವಾಮಾನ ವರದಿ
ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯ ಸೇಂಟ್ ಕೀಟ್ಸ್ ವಾರ್ನರ್ ಪಾರ್ಕ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಾಳೆ ( ಆಗಸ್ಟ್ 1 ) 8 ಗಂಟೆಗೆ ಆರಂಭಗೊಳ್ಳಲಿದೆ. ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕರಿಸಲಿದೆ ಹಾಗೂ ಚೇಸಿಂಗ್ ತಂಡ ಗೆಲ್ಲುವ ಸಾಧ್ಯತೆಗಳು ಹೆಚ್ಚಿವೆ.
ಸೋಮವಾರ (ಆಗಸ್ಟ್ 1) ಸೇಂಟ್ ಕಿಟ್ಸ್‌ನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸುಮಾರು 31 ಡಿಗ್ರಿಗಳಷ್ಟು ತಾಪಮಾನ ಇರುತ್ತದೆ ಎಂದು ಊಹಿಸಲಾಗಿದೆ. ಆದರೆ ಯಾವುದೇ ಮಳೆಯ ಸಂಭವ ಇರುವುದಿಲ್ಲ ಹಾಗೂ ವೀಕ್ಷಕರು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸಂಪೂರ್ಣ, ಅಡೆತಡೆಯಿಲ್ಲದ ಪಂದ್ಯವನ್ನು ವೀಕ್ಷಿಸುವ ನಿರೀಕ್ಷೆಯಿದೆ.

ಸಂಭಾವ್ಯ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಅಶ್ವಿನ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್
ವೆಸ್ಟ್ ಇಂಡೀಸ್: ಕೈಲ್ ಮೇಯರ್ಸ್, ಶಮ್ರಾ ಬ್ರೂಕ್ಸ್, ಜೇಸನ್ ಹೋಲ್ಡರ್, ನಿಕೋಲಸ್ ಪೂರನ್ (ನಾಯಕ), ರೋವ್ಮನ್ ಪೊವೆಲ್, ಶಿಮ್ರಾನ್ ಹೆಟ್ಮೆಯರ್, ಅಕೇಲ್ ಹೊಸೈನ್, ಓಡಿಯನ್ ಸ್ಮಿತ್, ಕೀಮೋ ಪಾಲ್, ಅಲ್ಜಾರಿ ಜೋಸೆಫ್

ನೇರ ಪ್ರಸಾರ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯದ ನೇರ ಪ್ರಸಾರ ಡಿಡಿ ಚಾನೆಲ್‌ನಲ್ಲಿ ಮಾತ್ರ ಇರಲಿದ್ದು, ಫ್ಯಾನ್ ಕೋಡ್ ಮೊಬೈಲ್ ಅಪ್ಲಿಕೇಶನ್‌ನಲ್ಲಿಯೂ ಸಹ ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications