ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs WI 2nd T20: ವೆಸ್ಟ್ ಇಂಡೀಸ್ ಗೆಲುವಿಗೆ 187 ರನ್‌ ಗುರಿ

Team india

ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ, ಪ್ರವಾಸಿ ವೆಸ್ಟ್ ಇಂಡೀಸ್ ತಂಡಕ್ಕೆ 187 ರನ್‌ಗಳ ಗುರಿ ನೀಡಿದೆ.

ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಕಣಕ್ಕಿಳಿದಿದ್ದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲಗೊಂಡಿತು. ಮೊದಲ ಟಿ20 ಪಂದ್ಯದಲ್ಲಿ ಬಾಲ್ ಟೈಮಿಂಗ್ ಮಾಡಲು ಹೆಣಗಾಡಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೇವಲ 2ರನ್‌ಗೆ ಶೆಲ್ಡನ್ ಕಾಟ್ರೆಲ್‌ಗೆ ಮತ್ತೊಮ್ಮೆ ವಿಕೆಟ್ ಒಪ್ಪಿಸಿದ್ರು. ಮೊದಲ ಟಿ20 ಪಂದ್ಯದಲ್ಲೂ ಇಶಾನ್ ಕಾಟ್ರೆಲ್ ಬೌಲಿಂಗ್‌ನಲ್ಲಿ ಔಟಾಗಿದ್ದರು.

10ರನ್‌ಗೆ ಮೊದಲ ವಿಕೆಟ್ ಉರುಳುತ್ತಿದ್ದಂತೆ ಕಣಕ್ಕಿಳಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಆರಂಭದಿಂದಲೇ ಅಗ್ರೆಸ್ಸಿವ್ ಬ್ಯಾಟಿಂಗ್ ಪ್ರದರ್ಶನ ನೀಡಿದ್ರು. ಇಬ್ಬರು ಬ್ಯಾಟ್ಸ್‌ಮನ್‌ಗಳು ಬೃಹತ್ ಮೊತ್ತ ಕಲೆಹಾಕುವ ಮುನ್ಸೂಚನೆ ನೀಡಿದ ವೇಳೆಯಲ್ಲಿ ನಾಯಕ ರೋಹಿತ್ ಶರ್ಮಾ ಸ್ಪಿನ್ನರ್ ರೋಸ್ಟನ್ ಚೇಸ್‌ಗೆ ವಿಕೆಟ್ ಒಪ್ಪಿಸಿದ್ರು. 18 ಎಸೆತಗಳಲ್ಲಿ 19 ರನ್ ಕಲೆಹಾಕಿದ್ದ ರೋಹಿತ್ ಸ್ಪಿನ್ನರ್‌ಗೆ ಬಲಿಯಾದ್ರು..

ಇದ್ರ ಬೆನ್ನಲ್ಲೇ ವಿಂಡೀಸ್ ಸ್ಪಿನ್ನರ್ ರೋಸ್ಟನ್ ಚೇಸ್‌ ಮತ್ತೊದಬ್ಬ ಪವರ್‌ಫುಲ್ ಬ್ಯಾಟ್ಸ್‌ಮನ್ ಅನ್ನು ತನ್ನ ಖೆಡ್ಡಾದಲ್ಲಿ ಕೆಡವಿದ್ರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ ಕೇವಲ 8 ರನ್‌ಗೆ ಇನ್ನಿಂಗ್ಸ್ ಮುಗಿಸಿದ್ರು.

ಆದ್ರೆ ನಾಲ್ಕನೇ ವಿಕೆಟ್‌ಗೆ ಕೊಹ್ಲಿಗೆ ಉತ್ತಮ ಸಾಥ್ ನೀಡಿದ ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ರು.

ವಿರಾಟ್ ಕೊಹ್ಲಿ ಅರ್ಧಶತಕದ ಮಿಂಚು
ವಿರಾಟ್ ಕೊಹ್ಲಿ 41 ಎಸೆತಗಳಲ್ಲಿ 52 ರನ್ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ 30 ನೇ ಅರ್ಧಶತಕ ದಾಖಲಿಸಿದ್ರು. ಇವರ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ಒಳಗೊಂಡಿತ್ತು.

ರಿಷಬ್ ಪಂತ್- ಅಯ್ಯರ್ ಬೊಂಬಾಟ್ ಜೊತೆಯಾಟ
ವಿರಾಟ್‌ ಕೊಹ್ಲಿ 52 ರನ್‌ಗೆ ರೋಸ್ಟನ್ ಚೇಸ್‌ ಸ್ಪಿನ್‌ಗೆ ಬಲಿಯಾದ ಬಳಿಕ ಐದನೇ ವಿಕೆಟ್‌ಗೆ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಮತ್ತು ಪಂತ್ ಸಖತ್ ಆಟವಾಡಿದ್ರು. ರಿಷಭ್ ಪಂತ್ ಟಿ20 ಕ್ರಿಕೆಟ್‌ನಲ್ಲಿ ಮೂರನೇ ಅರ್ಧಶತಕ ದಾಖಲಿಸುವ ಮೂಲಕ 28 ಎಸೆತಗಳಲ್ಲಿ 52 ರನ್ ಸಿಡಿಸಿದ್ರು. ಇವ್ರ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ಸಹ ಇತ್ತು. ವಿಶೇಷವೆಂದರೆ ರಿಷಭ್‌ರ ಮೂರು ಅರ್ಧಶತಕ ವಿಂಡೀಸ್ ವಿರುದ್ಧವೇ ಮೂಡಿಬಂದಿದೆ.

ಇನ್ನು ವೆಂಕಟೇಶ್ ಅಯ್ಯರ್ ಕೂಡ ಸ್ಫೋಟಕ ಆಟವಾಡಿ 18 ಎಸೆತಗಳಲ್ಲಿ 33ರನ್‌ಗಳ ಕೊಡುಗೆ ನೀಡಿದ್ರು. ಈ ಜೋಡಿಯ ಜೊತೆಯಾಟವು ಭಾರತಕ್ಕೆ ಉತ್ತಮ ಸ್ಪರ್ಧಾತ್ಮಕ ಮೊತ್ತ ಪೇರಿಸಲು ಸಾಧ್ಯವಾಯಿತು.

ಪಾಕಿಸ್ತಾನ್ ಸ್ಟೇಡಿಯಂನಲ್ಲೂ ರಾರಾಜಿಸಿದ ವಿರಾಟ್ ಕೊಹ್ಲಿ ಪೋಸ್ಟರ್ | Oneindia Kannada

ಭಾರತ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿದೆ. ವಿಂಡೀಸ್ ಪರ ರೋಸ್ಟನ್ ಚೇಸ್‌ 25 ರನ್ ನೀಡಿ ಮೂರು ವಿಕೆಟ್ ಕಬಳಿಸಿದ್ರೆ, ಶೆಲ್ಡನ್ ಕಾಟ್ರೆಲ್ ಮತ್ತು ರೊಮಾರಿಯೋ ಶೆಫರ್ಡ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.

Story first published: Friday, February 18, 2022, 20:58 [IST]
Other articles published on Feb 18, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X