Ind vs WI: ಭಾರತಕ್ಕೆ ಗೆಲ್ಲಲು ಬೇಕು 8 ವಿಕೆಟ್: ಅಂತಿಮ ದಿನದಾಟದ Live ಸ್ಕೋರ್
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯ ಕೊನೆಯ ದಿನಕ್ಕೆ ಕಾಲಿಟ್ಟಿದೆ. ಅಂತಿಮ ದಿನ ಭಾರತ ತಂಡ ಗೆಲ್ಲಲು 8 ವಿಕೆಟ್‌ಗಳನ್ನು ಕಬಳಿಸಬೇಕಿದ್ದು ವಿಂಡೀಸ್ ಗೆಲುವಿಗೆ 289 ರನ್‌ಗಳ ಅಗತ್ಯವಿದೆ. ಆದರೆ ಅಂತಿಮ ದಿನ ಕೂಡ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದ್ದು ತಡವಾಗಿ ಆರಂಭವಾಗಲಿದೆ.
ವೆಸ್ಟ್ ಇಂಡೀಸ್ ಪರವಾಗಿ ಟಗೆನರೈನ್ ಚಂದರ್‌ಪಾಲ್ ಹಾಗೂ ಜರ್ಮನ್ ಬ್ಲಾಕ್‌ವುಡ್ ಕ್ರೀಸ್‌ನಲ್ಲಿದ್ದು ಕೊನೆಯ ದಿನ ಬ್ಯಾಟಿಂಗ್ ಆರಂಭಿಸುತ್ತಿದ್ದಾರೆ. ನಾಯಕ ಕ್ರೇಗ್ ಬ್ರಾಥ್ ವೇಟ್ ಹಾಗೂ ಕ್ರಿಕ್ ಮೆಕೆಂಜಿ ವಿಕೆಟ್ ಕಳೆದುಕೊಂಡಿದ್ದು ಈ ಇಬ್ಬರ ವಿಕೆಟ್ ಕೂಡ ಆರ್ ಅಶ್ವಿನ್ ಕಬಳಿಸಿ ಕೊನೆಯ ಇನ್ನಿಂಗ್ಸ್‌ನಲ್ಲಿ ವಿಂಡೀಸ್ ಪಡೆಗೆ ಮತ್ತೊಮ್ಮೆ ಆಘಾತ ನೀಡುವ ಸೂಚನೆ ನೀಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿರುವ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಶತಕ ಹಾಗೂ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ಅರ್ಧ ಶತಕದ ನೆರವಿನಿಂದ 438 ರನ್‌ಗಳನ್ನು ಗಳಿಸಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ವಿಂಡೀಸ್ ತಂಡ 255 ರನ್‌ಗಳನ್ನು ಗಳಿಸಿ ಆಲೌಟ್ ಆಯಿತು. ಭಾರತದ ಪರವಾಗಿ ಮೊಹಮ್ಮದ್ ಸಿರಾಜ್ ಐದು ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದರು.
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ಕಿರ್ಕ್ ಮೆಕೆಂಜಿ, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್, ಶಾನನ್ ಗೇಬ್ರಿಯಲ್ ಆಡುತ್ತಿದ್ದಾರೆ
ಬೆಂಚ್: ಕೆವಿನ್ ಸಿಂಕ್ಲೇರ್, ರಹಕೀಮ್ ಕಾರ್ನ್ವಾಲ್
ಟೀಮ್ ಇಂಡಿಯಾ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಸರ್ ಪಟೇಲ್, ನವದೀಪ್ ಸೈನಿ, ಶಾರ್ದೂಲ್ ಠಾಕೂರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications